ನಟ ರಾಜವರ್ಧನ್ – ತಪಸ್ವಿನಿ ನಟನೆಯ ” ಗಜರಾಮ” ಚಿತ್ರ ಫೆಬ್ರವರಿ 7 ರಂದು ತೆರೆಗೆ

ಹಿರಿಯ ಪೋಷಕ ಕಲಾವಿದ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ‘ಬಿಚ್ಚುಗತ್ತಿ’ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು, ಸಾಮರ್ಥ್ಯ ಸಾಬೀತು ಮಾಡಿದ್ದಾರೆ. ಇದೀಗ ಅವರ ಅಭಿನಯದ ಹೊಸ ಚಿತ್ರ ” ಗಜರಾಮ” ಫೆಬ್ರವರಿ 7 ಕ್ಕೆ ತೆರೆಗೆ ಬರಲು ಸಜ್ಜಾಗಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಗಜರಾಮ ಡಿಸೆಂಬರ್ 27 ಕ್ಕೆ ತೆರೆಗೆ ಬರಬೇಕಾಗಿತ್ತು ಯುಐ ಮತ್ತು ಮ್ಯಾಕ್ಸ್ ಚಿತ್ರಗಳು ಡಿಸೆಂಬರ್ ಕಡೆಯ ವಾರದಲ್ಲಿ ಬಿಡುಗಡೆ ಆದ ಹಿನ್ನೆಲೆಯಲ್ಲಿ ಗಜರಾಮನ ದರ್ಶನ ಮಾಡಿಸದೆ ಚಿತ್ರತಂಡ ಸುಮ್ಮನಾಗಿತ್ತು. ಇದೀಗ ಫೆಬ್ರವರಿ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರಲು ಮುಂದಾಗಿದೆ.
ನಟ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಗಜರಾಮ’ ಬಿಡುಗಡೆಗೆ ಸಿದ್ಧವಾಗಿದೆ. . ಟೈಟಲ್, ಟೀಸರ್ ಹಾಗೂ ಸಾರಾಯಿ ಶಾಂತಮ್ಮ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸುನಿಲ್ ಕುಮಾರ್ ವಿ ಎ ಆಕ್ಷನ್ ಕಟ್ ಹೇಳಿದ್ದಾರೆ.
ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ರಾಜವರ್ಧನ್ ಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ್ ನಟಿಸಿದರೆ, ಕಬೀರ್ ಸಿಂಗ್ ಖಳನಾಯಕನ ಪಾತ್ರ ನಿರ್ವಹಿಸಿದ್ದಾರೆ. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ್ದಾರೆ.

ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ. ಮಠದ್ ಸಂಕಲನ, ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಅವರ ಸಾಹಿತ್ಯವಿದೆ.
‘ಬಾಂಡ್ ರವಿ’ ಸಿನಿಮಾ ನಿರ್ಮಾಣ ಮಾಡಿದ್ದ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾ ನಿರ್ಮಾಣ ಮಾಡಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮಾಸ್ ಆಕ್ಷನ್ ಎಂಟರ್ಟೈನರ್ ಆಗಿರುವ ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ.