“ಬಂಡೆ ಸಾಹೇಬ್” ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಶರಣ್
ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್‍ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ ಹುತಾತ್ಮ ಮಲ್ಲಿಕಾರ್ಜುನ ಬಂಡೆ ಜೀವನಾಧಾರಿತ ಚಿತ್ರ “ಬಂಡೆ ಸಾಹೇಬ್” ಚಿತ್ರದ ಟೀಸರ್ ಅನ್ನು ನಟ ನಟ ಶರಣ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಅಪ್ಪು ಅವರಿಗಾಗಿ ಚಿತ್ರತಂಡ ಹಾಡು ಅರ್ಪಿಸಿದೆ. ಈ ಹಾಡನ್ನು ನಿರ್ದೇಶಕ ತರುಣ್ ಸುಧೀರ್ ಹಾಗೂ ಮಾಜಿ ಸಚಿವ ರಾಜು ಗೌಡ ಬಿಡುಗಡೆ ಮಾಡಿದರು. ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಟ ಶರಣ್ ಮಾತನಾಡಿ,ಚಿತ್ರದ ಟೀಸರ್ ನಲ್ಲೇ ಇನ್ನೂ ಏನೋ ಇದೆ ಅನ್ನುವಷ್ಟರಲ್ಲೇ ಟೀಸರ್ ಮುಗಿದು ಹೋಗಿರುತ್ತದೆ. ವಿಷಯಕ್ಕೆ ನಿಜಕ್ಕೂ ನಿರ್ದೇಶಕರನ್ನು ಶ್ಲಾಘಿಸಬೇಕು. ಸಂತೋಷ್ ರಾಮ್ ನಟನೆ ಕೂಡ ಚೆನ್ನಾಗಿದೆ. ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಜೀವನಾಧಾರಿತ ಈ ಸಿನಿಮಾವನ್ನು ನಾನು ಕೂಡ ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ ಎಂದರು
ನಿರ್ದೇಶಕ ತರುಣ್ ಸುಧೀರ್ ಮಾತನಾಡಿ ಎಸ್ ಪಿ ಸಾಂಗ್ಲಿಯಾನ ಸಿನಿಮಾ ನೋಡಿದಾಗ ಶಂಕರ್ ನಾಗ್ ಅವರು ಸಾಂಗ್ಲಿಯಾನ ಅವರ ಹಾಗೆ ಕಂಡರು. ಈಗ ಚಿತ್ರದ ನಾಯಕ ಸಂತೋಷ್ ರಾಮ್ ಅವರನ್ನು ನೋಡಿದಾಗ ಮಲ್ಲಿಕಾರ್ಜುನ ಬಂಡೆ ಅವರನ್ನೇ ನೋಡಿದ ಹಾಗೆ ಆಗುತ್ತಿದೆ ಎಂದು ಹೇಳಿದರು.
ನಿರ್ದೇಶಕ ಚಿನ್ಮಯ್ ರಾಮ್ ಮಾಹಿತಿ ನೀಡಿ ನೈಜಘಟನೆ ಆಧಾರಿತ ಚಿತ್ರª ನಿರ್ದೇಶಿಸುವುದು ಸುಲಭವಲ್ಲ ಅನಿಸಿತು.ಮೊದಲ ನಿರ್ದೇಶನದ ಚಿತ್ರ. ಚಿತ್ರೀಕರಣ ಹಾಗೂ ನಂತರದ ಕಾರ್ಯಗಳು ಮುಕ್ತಾಯವಾಗಿರುವ ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ ಎಂದರು

ನಿರ್ಮಾಪಕ ಗೋಪಣ್ಣ ದೊಡ್ಮನಿ ಪುತ್ರಿ ಗೀತಾ ಮಾತನಾಡಿ, ಕುಟುಂಬದವರು ಮಲ್ಲಿಕಾರ್ಜುನ ಬಂಡೆ ಕುಟುಂಬದವರನ್ನು ಹತ್ತಿರದಿಂದ ನೋಡಿದ್ದೇವೆ. ಹುತಾತ್ಮ ಪಿ.ಎಸ್.ಐ ಕಾರ್ಯವೈಖರಿಯನ್ನು ಎಲ್ಲರಿಗೂ ತಿಳಿಸುವ ಸಲುವಾಗಿ ನಮ್ಮ ತಂದೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ ಎಂದು ತಿಳಿಸಿದರು
ನಾಯಕ ಸಂತೋಷ್ ರಾಮ್ ಮಾತನಾಡಿ ಮಲ್ಲಿಕಾರ್ಜುನ ಬಂಡೆಒಡನಾಡಿಗಳನ್ನು ಸಂಪರ್ಕ ಮಾಡಿದ್ದೆವು. ಆನಂತರ ಕಥೆ ಮೆಚ್ಚಿಕೊಂಡ ಗೋಪಣ್ಣ ದೊಡ್ಮನಿ ನಿರ್ಮಾಣಕ್ಕೆ ಮುಂದಾದರು. “ಪಂಟ್ರು” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದುಮಲ್ಲಿಕಾರ್ಜುನ ಬಂಡೆ ಅವರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ಹೇಳಿದರು.

ನಾಯಕಿ ಕಾವ್ಯ ಭಾರದ್ವಾಜ್, ನಟ ಫರ್ವೆಜ್ ಸಿಂಹ, ಛಾಯಾಗ್ರಾಹಕ ಮುಂಜಾನೆ ಮಂಜು, ಸಂಗೀತ ನಿರ್ದೇಶಕ ಎಂ.ಎಸ್ ತ್ಯಾಗರಾಜ್, ಸಂಕಲನಕಾರ ಶೇಷಾಚಲ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಅಲೆಕ್ಸಾ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ ಕೊರಳ್ಳಿ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ವೀರಣ್ಣ ಕೊರಳ್ಳಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

