“ಜಸ್ಟ್ ಮ್ಯಾರಿಡ್” ಎನ್ನುತ್ತಿದ್ದಾರೆ ನಟ ಶೈನ್ ಶೆಟ್ಟಿ ಹಾಗು ಅಂಕಿತ ಅಮರ್

ಸಂಗೀತ ನಿರ್ದೇಶಕರಾಗಿ ಗಮನ ಸೆಳೆದಿರುವ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಜೊತೆಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರವಿದು .ಜೊತೆಗೆ ಈ ಚಿತ್ರದ ಮೂಲಕ ಸಿ.ಆರ್ ಬಾಬಿ ನಿರ್ದೇಶಕಿಯಾಗಿ ಬಡ್ತಿ ಪಡೆದಿದ್ದಾರೆ.

ಚಿತ್ರದ ಮೂಲಕ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು “ ಜಸ್ಟ್ ಮ್ಯಾರೀಡ್” ಎನ್ನುತ್ತಿದ್ದಾರೆ . ಸಿ.ಆರ್ ಬಾಬಿ ಅವರೆ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಿರ್ದೇಶಕಿ ಸೇರ್ಪಡೆಯಾಗಿದ್ದಾರೆ.
ಚಿತ್ರದ “ಗಂ ಗಣೇಶಾಯ ನಮಃ” ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಶಶಿ ಕಾವೂರ್ ಬರೆದಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವರುಣ್ ರಾಮಚಂದ್ರ, ಮಧ್ವೇಶ್ ಭಾರದ್ವಾಜ್, ಅಭಿಷೇಕ್ ಹಾಗೂ ವಿಶಾಖ್ ಹಾಡಿದ್ದಾರೆ. ಗಣಪತಿ ಕುರಿತಾದ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. .

ಸಿ.ಆರ್.ಬಾಬಿ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಸಿ.ಆರ್.ಬಾಬಿ, ಈಗ ನಿರ್ದೇಶಕಿಯಾಗಿದ್ದಾರೆ.

ಹೆಸರೆ ಹೇಳುವಂತೆ “ಜಸ್ಟ್ ಮ್ಯಾರಿಡ್” ಪ್ರೇಮಕಥೆಯ ಚಿತ್ರ. ಕ್ಲಾಸ್ ಹಾಗೂ ಮಾಸ್ ಎರಡು ಆಡಿಯನ್ಸ್ ಗೂ ಇಷ್ಟವಾಗುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಈ ತಿಂಗಳ ಕೊನೆಗೆ ಬೆಂಗಳೂರಿನಲ್ಲಿ ಆರಂಭವಾಗಲಿದೆ.
ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸುತ್ತಿದ್ದು, ಶೃತಿ ಹರಿಹರನ್, ಅಚ್ಯುತಕುಮಾರ್, ಸಾಕ್ಷಿ ಅಗರವಾಲ್, ರವಿಶಂಕರ್ ಗೌಡ, ವಾಣಿ ಹರಿಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಪಿ ಜೆ ಛಾಯಾಗ್ರಹಣ, ಅಶಿಕ್ ಕುಸುಗೊಳ್ಳಿ ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಬಾಬಾ ಭಾಸ್ಕರ್ ಅವರ ನೃತ್ಯ ನಿರ್ದೇಶನವಿದೆ. ಡಾ.ವಿ.ನಾಗೇಂದ್ರ ಪ್ರಸಾದ್, ಶಶಿ ಕವೂರ್, ಪ್ರಮೋದ್ ಮರವಂತೆ, ಧನಂಜಯ್ ಹಾಗೂ ನಾಗಾರ್ಜುನ್ ಶರ್ಮ ಹಾಡುಗಳನ್ನು ಬರೆದಿದ್ದಾರೆ.