ತನಿಖಾ ಥ್ರಿಲ್ಲರ್ ಚಿತ್ರ “ಪ್ರತ್ಯರ್ಥ” ಚಿತ್ರಕ್ಕೆ ನಟ ಶ್ರೀಮುರಳಿ ಬಲ
ಕನ್ನಡದಲ್ಲಿ ಆಗಾಗ ಒಳ್ಳೆಯ ಕಂಟೆಂಟು ಸಿನಿಮಾಗಳು ಬರುತ್ತಿವೆ. ತನಿಖಾ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರತ್ಯರ್ಥ” ಚಿತ್ರಕ್ಕೆ ನಟ ಶ್ರೀಮುರಳಿ ಬೆಂಬಲ ನೀಡಿ ಟ್ರೇಲರ್ ಬಿಡುಗಡೆ ಮಾಡಿರುವುದು ಚಿತ್ರತಂಡದ ಮುಖದಲ್ಲಿ ಮಂದಹಾಸ ಮೂಡಿಸಿದೆ.ಉಡುಪಿಯ ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿರುವ ಚಿತ್ರ ಇದೇ 28ರಂದು ತೆರೆಗೆ ಬರಲಿದೆ.

ಈ ವೇಳೆ ನಿರ್ದೇಶಕ ಅರ್ಜುನ್ ಕಾಮತ್ ಮಾತನಾಡಿ ಕನ್ನಡ ಸಿನಿಮಾದಲ್ಲಿ ಹೊಸ ತಂಡದಿಂದ ಜನರು ಏನನ್ನು ನಿರೀಕ್ಷೆ ಪಡುತ್ತಾರೋ ಆ ತರಹದ ಸಿನಿಮಾ ಪ್ರತ್ಯರ್ಥ. ಈ ಚಿತ್ರವನ್ನು ಕನ್ನಡಿಗರು ಹೆಮ್ಮೆಯಿಂದ ಅನ್ಯ ಭಾಷೆಯ ಪ್ರೇಕ್ಷಕರಿಗೆ ವೀಕ್ಷಿಸಲು ಸಲಹೆ ನೀಡಬಹುದು ಎಂದು ಹೇಳಿದರು.
ಇದೊಂದು ತನಿಖಾ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಪ್ರತಿಯೊಂದಕ್ಕೂ ಅರ್ಥ ಇರುವುದನ್ನು ಪ್ರತ್ಯರ್ಥ ಎನ್ನಲಾಗುತ್ತದೆ. ಹಾಗಾಗಿ ಇದು ಹಳೆಯ ಟೈಟಲ್ ಆದರೂ ಕೂಡ, ನಮ್ಮ ಸಿನಿಮಾಗೆ ಇದೇ ಶೀರ್ಷಿಕೆ ಸೂಕ್ತ ಎನಿಸಿತು. ಈಗಿನ ಯುವಜನತೆಗೆ ಯಾವ ತರಹದ ಕಥೆ ಬೇಕು ಎಂದು ತಿಳಿದುಕೊಂಡು, ಒಂದು ವರ್ಷ ಸಮಯ ತೆಗೆದುಕೊಂಡು, ನಾನು ಹಾಗೂ ರಾಮ್ ಮುಂತಾದ ಸ್ನೇಹಿತರು ಸೇರಿ ಈ ಚಿತ್ರದ ಕಥೆ ಬರೆದಿದ್ದೇವೆ ಎಂದರು

ಚಿತ್ರಕ್ಕೆ ನಿರ್ಮಾಪಕರಾದ ನಾಗೇಶ್ ಎಂ, ಜಯ್ ಆರ್ ಪ್ರಭು ಮುಂದಾದರು. ನಿತ್ಯಾನಂದ ಪೈ ಹಾಗೂ ಪ್ರೇಮಕುಮಾರ್ ವಿ, ಭರತ್ ಶೆಟ್ಟಿ ಸಹ ನಿರ್ಮಾಪಕರಾಗಿ ಕೈಜೋಡಿಸಿದರು ಎರಡು ಶೇಡ್ ಗಳಲ್ಲಿ ಸಾಗುವ ಈ ಕಥೆಯ ನಾಯಕರಾಗಿ ರಾಮ್, ಅಕ್ಷಯ್ ಕಾರ್ಕಳ ನಟಿಸಿದ್ದಾರೆ. ನಾಯಕಿಯಾಗಿ ಶೃತಿ ಚಂದ್ರಶೇಖರ್ ಅಭಿನಯಿಸಿದ್ದಾರೆ. ಸುಮನ್ ತಲ್ವಾರ್, ನವೀನ್ ಡಿ ಪಡೀಲ್, ರಮೇಶ್ ಭಟ್, ದೀಪಕ್ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ವಿನುತ್ ಛಾಯಾಗ್ರಾಹಕರಾಗಿದ್ದಾರೆ. ಟ್ರೇಲರ್ ಅನಾವರಣ ಮಾಡಿದ ಶ್ರೀಮುರಳಿ ಅವರಿಗೆ ಧನ್ಯವಾದ. ಇದೇ 28 ರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ. ನೋಡಿ. ಪ್ರೋತ್ಸಾಹಿಸಿ ಎಂದರು.

ನಿರ್ಮಾಪಕರಲ್ಲೊಬ್ಬರಾದ ವಿಶಿಷ್ಟ ಫಿಲ್ಮ್ ನ ಜಯ್ ಆರ್ ಪ್ರಭು ಮಾತನಾಡಿ ಸಿನಿಮಾ ಕ್ಷೇತ್ರ ಹೊಸತು. ಆದರೆ ನಾನು ಸಿನಿಮಾ ಪ್ರೇಮಿ. ಚಂದನ ವಾಹಿನಿಯಲ್ಲಿ ವಾರಕೊಮ್ಮೆ ಬರುತ್ತಿದ್ದ ಚಿತ್ರವನ್ನು ತಪ್ಪದೇ ನೋಡುತ್ತಿದ್ದವನು. ಸಿನಿಮಾ ಮೇಲಿನ ಪ್ರೀತಿಯಿಂದ ಮಾಡಿರುವ ಸಿನಿಮಾ ಇದು ಎಂದು ತಿಳಿಸಿದರು.
ನಟ ರಾಮ್ ಮಾತನಾಡಿ ಹೊಸಬರು ಕನಸು ಕಂಡಿರುತ್ತಾರೆ. ಆ ಕನಸನ್ನು ನನಸು ಮಾಡುವುದು ನಿರ್ಮಾಪಕರು. ಹಾಗಾಗಿ ಅವರಿಗೆ ಮೊದಲು ಧನ್ಯವಾದ ಎಂದು ಮಾತನಾಡಿದ , ನನ್ನದು ಈ ಚಿತ್ರದಲ್ಲಿ ಆಯುಷ್ ಎಂಬ ಕಾಲೇಜು ವಿದ್ಯಾರ್ಥಿ ಪಾತ್ರ. ನಿರ್ದೇಶಕರ ಜೊತೆಗೂಡಿ ಚಿತ್ರಕಥೆ ಕೂಡ ಬರೆದಿದ್ದೇನೆ ಎಂದರು.
ನಟ ಅಕ್ಷಯ್ ಕಾರ್ಕಳ ಮಾತನಾಡಿ ಸಹ ಸ್ಕ್ರಿಪ್ಟ್ ವರ್ಕ್ ಸಮಯದಿಂದಲೂ ಈ ತಂಡದ ಜೊತೆಗಿದ್ದೇನೆ. ವಿಭಿನ್ನ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು.

ಶೃತಿ ಚಂದ್ರಶೇಖರ್ ಮಾತನಾಡಿ ಪ್ರಿಯ ಎಂಬ ಪಾತ್ರದಲ್ಲಿ ಅಭಿನಯಿದ್ದೇನೆ ಎಂದರು ನಾಯಕಿ .
ಸಂಗೀತ ನಿರ್ದೇಶಕ ಸುನಾದ್ ಗೌತಮ್ ಮಾತನಾಡಿ ಚಿತ್ರದಲ್ಲಿ ಎರಡು ಹಾಡುಗಳಿದ್ದು, ವಾಸುಕಿ ವೈಭವ್ ಹಾಗು ರಜತ್ ಹೆಗಡೆ ಹಾಡಿದ್ದಾರೆ ಎಂದು ಮಾಹಿತಿ ನೀಡಿದರು.

