Actor Tanush Shivanna is now "Napoleon".

ನಟ ತನುಷ್ ಶಿವಣ್ಣ ಈಗ “ನೆಪೋ ಲಿಯನ್” - CineNewsKannada.com

ನಟ ತನುಷ್ ಶಿವಣ್ಣ ಈಗ “ನೆಪೋ ಲಿಯನ್”

ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ವೀಕ್ಷಿಸುತ್ತಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ ಮತ್ತೊಂದು ಚಿತ್ರದ ಘೋಷಣೆಯಾಗಿದೆ. ಚಿತ್ರಕ್ಕೆ “ನೆಪೋ ಲಿಯನ್”” ಎಂದು ಹೆಸರಿಡಲಾಗಿದೆ.

ಸಂಕ್ರಾಂತಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ಲವ ವಿ ಅವರೆ ನಿರ್ದೇಶಿಸುತ್ತಿದ್ದಾರೆ.

“ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಹಾಗೂ “ಮಾರ್ಟಿನ್” ಖ್ಯಾತಿಯ ಮಹೇಶ್ ಅವರ ಸಂಕಲನ ಈ ನೂತನ ಚಿತ್ರಕ್ಕಿದೆ. ಮುಂದಿನ ತಿಂಗಳ ಮಧ್ಯದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಕರ್ನಾಟಕದ ಅನೇಕ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ. ಶೋಷಿತ ಹೆಣ್ಣುಮಕ್ಕಳ ಪರ ಧ್ವನಿ ಎತ್ತುವ ಕಥಾಹಂದರ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ದ್ಯಾವಿಪ್ರಸಾದ್ ಸಂಗೀತ ನೀಡುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin