ಹಿರಿಯ ನಟಿ ಪ್ರಿಯಾಂಕಾ ನಟನೆಯ ‘ಕ್ಯಾಪ್ಚರ್’ ಚಿತ್ರ ಪೋಸ್ಟರ್ ಬಿಡುಗಡೆ ಮಾಡಿದ ನಟ ಉಪೇಂದ್ರ
ಚಂದನವನ ಹಿರಿಯ ನಟಿಯರಲ್ಲಿ ಒಬ್ಬರಾಗಿರುವ ಪ್ರಿಯಾಂಕ ಉಪೇಂದ್ರ ಸದ್ದು ಗದ್ದಲವಿಲ್ಲದೆ 50 ಚಿತ್ರ ಪೂರ್ಣಗೊಳಿಸಿ 51ನೇ ಚಿತ್ರದಲ್ಲಿ ನಟಿಸಿದ್ದಾರೆ ಅದುವೇ “ ಕ್ಯಾಪ್ಚರ್”. ಪತ್ನಿ ನಾಯಕಿಯಾಗಿ ಕಾಣಿಸಿಕೊಂಡಿರುವ ಚಿತ್ರದ ಪೋಸ್ಟರ್ ಅನ್ನು ನಟ, ಉಪೇಂದ್ರ ಬಿಡುಗಡೆ ಮಾಡಿ ಶುಭ ಹಾರೈಸಿದರು.
ನಟಿ ಪ್ರಿಯಾಂಕಾ ಉಪೇಂದ್ರ ಮತ್ತೊಂದು ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಸಿಸಿ ಟಿವಿ ಫೂಟೈಜ್ ಪಾಯಿಂಟ್ ವ್ಯೂನಲ್ಲಿ ಚಿತ್ರೀಕರಣ ಮಾಡಲಾಗಿದೆ.
‘ಕ್ಯಾಪ್ಚರ್’ ತಂಡ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ವಿಶೇಷ ಎಂದರೆ ಈ ಸಿನಿಮಾಗೆ ಮಮ್ಮಿ, ದೇವಕಿ ಖ್ಯಾತಿಯ ನಿರ್ದೇಶಕ ಲೋಹಿತ್ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‍ನ 3ನೇ ಸಿನಿಮಾ ಇದಾಗಿದೆ.
ಚಿತ್ರಕ್ಕೆ ಹಿರಿಯ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪೆÇ್ರಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‍ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅಂದಹಾಗೆ ರವಿರಾಜ್ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ.
ಕ್ಯಾಪ್ಚರ್ ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ವಿಭಿನ್ನವಾಗಿ ಲಾಂಚ್ ಮಾಡಲಾಯಿತು. ವೀರೇಶ್ ಚಿತ್ರಮಂದಿರದ ಮುಂಭಾಗದಲ್ಲಿ ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕೌಟೌಟ್ ಪೋಸ್ಟರ್ ನಿಲ್ಲಿಸುವ ಮೂಲಕ ಸಿನಿಮಾದ ಟೈಟಲ್ ಪೋಸ್ಟರ್ ರಿವೀಲ್ ಆಯಿತು. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
ಅಭಿಮಾನಿಗಳ ಮಧ್ಯೆ ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷವಾಗಿತ್ತು. ಸ್ಯಾಂಡಲ್‍ವುಡ್‍ನಲ್ಲೇ ಮೊದಲ ಬಾರಿಗೆ ನಾಯಕಿಯೊಬ್ಬರ ಪೋಸ್ಟರ್ ಅನ್ನು ಇಷ್ಟು ದೊಡ್ಡ ಮಟ್ಟದಲ್ಲಿ, 60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ ಬಿಡುಗಡೆ ಮಾಡಿರುವುದು ಖುಷಿಯ ವಿಚಾರ.
ಕ್ಯಾಪ್ಚರ್ ಬಗ್ಗೆ ಹೇಳುವುದಾದರೆ ಹಾರರ್ ಅಂದಮೇಲೆ ಭಯ, ಕುತೂಹಲ, ಟ್ವಿಸ್ಟ್‍ಗಳು ಇದ್ದೇ ಇರುತ್ತೆ. ಇದೆಲ್ಲದರ ಜೊತೆಗೆ ಈ ಸಿನಿಮಾ ಒಂದು ವಿಭಿನ್ನ ಅನುಭವ ನೀಡಲಿದೆ. ಯಾಕೆಂದರೆ ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‍ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ.
ಸೈಲೆಂಟ್ ಆಗಿ ಸಿನಿಮಾ ಚಿತ್ರೀಕರಣ ಮುಗಿಸಿ ಟೈಟಲ್ ಪೋಸ್ಟರ್ ಮೂಲಕ ಸದ್ದು ಮಾಡುತ್ತಿರುವ ಕ್ಯಾಪ್ಚರ್ ಚಿತ್ರಮಂದಿರದ ಅಂಗಳಕ್ಕೆ ಬರಲು ಎದುರು ನೋಡುತ್ತಿದೆ. ಎಲ್ಲವು ಅಂದುಕೊಂಡಂತೆ ಆದರೆ ಸಿನಿಮಾ ಮುಂದಿನ ತಿಂಗಳು ನವೆಂಬರ್‍ನಲ್ಲಿ ತೆರೆಗೆ ಬರಲಿದೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‍ನ ಹ್ಯಾಟ್ರಿಕ್ ಸಿನಿಮಾ ಇದಾಗಿದ್ದು ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.