‘ರುದ್ರಾಭಿಷೇಕಂ’ ಚಿತ್ರದಲ್ಲಿ ತಂದೆ -ಮಗನ ಪಾತ್ರದಲ್ಲಿ ನಟ ವಿಜಯ್ ರಾಘವೇಂದ್ರ
ಜಾನಪದ ಹಿನ್ನೆಲೆಯಲ್ಲಿ ಇರುವ ವೀರಗಾಸೆ ಕಲೆ ಆರಾಧಿಸುತ್ತ ಬಂದಿರುವ ಕುಟುಂಬ ಹಾಗೂ ವೀರಭದ್ರ ದೇವರ ಇತಿಹಾಸ ಹೇಳುವ ಚಿತ್ರ “ರುದ್ರಾಭಿಷೇಕಂ” ಚಿತ್ರದ ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ, ವಸಂತ್ ಕುಮಾರ್ ನಿರ್ದೇಶನ ಮಾಡಿರುವ ಚಿತ್ರದಲ್ಲಿ ವಿಜಯ ರಾಘವೇಂದ್ರ, ಪ್ರಿಯಾಕಾ ತಿಮ್ಮೇಶ್ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ

ಹಾಪ್ ಕಾಮ್ಸ್ ಅಧ್ಯಕ್ಷ ಚಂದ್ರೇಗೌಡ ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದರು. ಚಿತ್ರದಲ್ಲಿ ವಿಜಯ ರಾಘವೇಂದ್ರ ವೀರಗಾಸೆ ಕಲಾವಿದ ಅಲ್ಲದೆ, ಇದೇ ಮೊದಲ ಬಾರಿಗೆ ತಂದೆ, ಮಗನಾಗಿ, ದ್ವಿಪಾತ್ರದಲ್ಲಿ ವಿಜಯ ರಾಘವೇಂದ್ರ ಅವರು ಕಾಣಿಸಿಕೊಂಡಿದ್ದಾರೆ.
ವಿಜಯ ರಾಘವೇಂದ್ರ ಮಾತನಾಡಿ ವೀರಗಾಸೆ ಪಾತ್ರ ಮಾಡುವುದು ತುಂಬಾ ಸವಾಲಿನಿಂದ ಕೂಡಿತ್ತು, ಪೂರ್ವಜರ ಕಾಲದಲ್ಲಿ ನಡೆದ ಘಟನೆ ಈಗಿನ ಕಾಲದ ವ್ಯಕ್ತಿಗೆ ಕನೆಕ್ಟ್ ಆಗುತ್ತಾ ಹೋಗುತ್ತದೆ. ತಂದೆ, ಮಗನಾಗಿ ಎರಡೂ ಪಾತ್ರಗಳನ್ನು ನಿಭಾಯಿಸಿದ್ದೇನೆ ಎಂದರು.

ನಾಯಕಿ ಪ್ರಿಯಾಂಕ ತಿಮ್ಮೇಶ್ ಮಾತನಾಡಿ ಈ ಚಿತ್ರ ಒಪ್ಪಲು 3 ಕಾರಣವಿದೆ. ಚಿತ್ರದಲ್ಲಿ ಶಿವನ ಭಕ್ತೆ, ಹಳ್ಳಿ ಹಾಗೂ ಸಿಟಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ ಎಂದರು.
ನಿರ್ದೇಶಕ ವಸಂತಕುಮಾರ್ ಮಾತನಾಡಿ ದೈವದ ಹಿನ್ನೆಲೆ ಇರುವ ಜನಪದ ಕಲೆಯನ್ನು ನಾಡಿನ ಮನೆ ಮನೆಗೂ ತಲುಪಿಸಬೇಕು ಎನ್ನುವುದೇ ನಮ್ಮ ಉದ್ದೇಶ. ನಾಯಕ ವಿಜಯ ರಾಘವೇಂದ್ರ ಕೂಡ ನಮಗೆ ತುಂಬಾ ಸಹಕಾರ ಕೊಟ್ಟಿದ್ದಾರೆ. ಚಿತ್ರದಲ್ಲಿ ಒಬ್ಬ ತತ್ವಜ್ಞಾನಿಯಾಗಿ ನಟಿಸಿದ್ದೇನೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವ ಪಾತ್ರಕ್ಕೆ ಎರಡು ಗೆಟಪ್ ಇದೆ ಎಂದೂ ಹೇಳಿದರು.
ಚಿತ್ರಕ್ಕೆ ದೇವನಹಳ್ಳಿ ಸುತ್ತಮುತ್ತ ಹಾಗೂ ಕರಾವಳಿಯ ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೆÇೀರ್ಟ್ ಅಲ್ಲದೆ ಅಘನಾಶಿನಿ ಹಿನ್ನೀರಿನ, ಈವರೆಗೆ ಯಾರೂ ಚಿತ್ರೀಕರಣ ಮಾಡದ ಸ್ಥಳಗಳಲ್ಲಿ ಸುಮಾರು 50ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಮಾತಿನ ಭಾಗ ಹಾಗೂ ಹಾಡುಗಳ ಚಿತ್ರೀಕರಣ ನಡೆಸಲಾಗಿದೆ ಎಂದರು

ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ವೀರಗಾಸೆ ಕಲೆಯ ಮಹತ್ವ, ಇತಿಹಾಸವನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರ ಹೇಳಲಾಗಿದೆ ಎಂದು ಮಾಹಿತಿ ನೀಡಿದರು
ನಿರ್ಮಾಪಕರಲ್ಲಿ ಒಬ್ಬರಾದ ಕೆ.ವೆಂಕಟೇಶ್ ಮಾತನಾಡಿ ವಿಜಯಪುರದ ಸ್ನೇಹಿತರು. ಗೆಳೆಯ ವಸಂತ್ ಬಂದು ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ನಾಯಕ ವಿಜಯ ರಾಘವೇಂದ್ರ ಅ ಚಿತ್ರ ಪ್ರಾರಂಭಿಸಿದ ದಿನದಿಂದ ಒಮ್ಮೆಯೂ ತೊಂದರೆ ಕೊಟ್ಟಿಲ್ಲ. ಅವರೆ ಸಲಹೆ ಸೂಚನೆ ನೀಡಿದರು. ಗೌಡ್ರು ಪಾತ್ರವನ್ನ ಬಲ ರಾಜವಾಡಿ ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂದರು.
ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ ಈಚಿತ್ರದಲ್ಲಿ ಎಲ್ಲಾ ಕನ್ನಡದ ಉದಯೋನ್ಮುಖ ಪ್ರತಿಭೆಗಳ ಕೈಲೇ ಹಾಡಿಸಿದ್ದೇನೆ ಎಂದು ಗಾಯಕ, ಗಾಯಕಿಯರನ್ನು ಪರಿಚಯಿಸಿದರು.

‘ರುದ್ರಾಭಿಷೇಕಂ’ ಚಿತ್ರವನ್ನು ಮಂಜುನಾಥ ಕೆ.ಎನ್, ಎನ್.ಜಯರಾಮಪ್ಪ, ಕೆ.ವೆಂಕಟೇಶ್, ಬಿ.ಚಿದಾನಂದ ಮೂರ್ತಿ, ಸುರೇಶ್ ಬಾಬು, ಬಿ.ಕೆ.ಅಶ್ವಥ್ ನಾರಾಯಣ, ಶಿವಕುಮಾರ್, ಕೆ.ಎಸ್.ರವಿಕುಮಾರ್, ಕುಸುಮ ವಸಂತ್ ಕುಮಾರ್ ಸೇರಿದಂತೆ 9 ಜನ ನಿರ್ಮಾಪಕರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ಸಾರೆ.
ಚಿತ್ರದಲ್ಲಿ ಬಲ ರಾಜವಾಡಿ, ವಿ.ಮನೋಹರ್, ಮನು, ಸನತ್, ಬುಲೆಟ್ ವಿನು, ಮಮತಾ ತುರುವೇಕೆರೆ, ನವನಿತಾ ಶೆಟ್ಟಿ, ಮಂಜುಳಾ ಹಾಗೂ ಇತರರು ಪ್ರಮುಖ ಪಾತ್ರಗಳಲ್ಲಿದ್ದಾರೆ. ವಿ.ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಚಿತ್ರಕ್ಕಿದೆ.

