Actor Vijay Raghavendra plays the role of a heroic artist in the film "Rudrabhishekam".

“ ರುದ್ರಾಭಿಷೇಕಂ” ಚಿತ್ರದಲ್ಲಿ ವೀರಗಾಸೆ ಕಲಾವಿದನಾಗಿ ನಟ ವಿಜಯ ರಾಘವೇಂದ್ರ - CineNewsKannada.com

“ ರುದ್ರಾಭಿಷೇಕಂ” ಚಿತ್ರದಲ್ಲಿ ವೀರಗಾಸೆ ಕಲಾವಿದನಾಗಿ ನಟ ವಿಜಯ ರಾಘವೇಂದ್ರ

ನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆ ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗಾಗಲೇ ನಿರ್ಮಾಣವಾಗಿ ಪ್ರೇಕ್ಷಕರನ್ನು ರಂಜಿಸಿವೆ. ಹಾದಿಯಲ್ಲಿ ಇದೀಗ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಪ್ರತಿಭಾವಂತ ನಟ ವಿಜಯ ರಾಘವೇಂದ್ರ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರ “ರುದ್ರಾಭಿಷೇಕಂ” ಸೆಟ್ಟೇರಿದೆ.

ಮಹೂರ್ತದ ಬಳಿಕ ಚಿತ್ರತಂಡ ಮಾತಿಗಿಳಿಯಿತು. ಈ ವೇಳೆ ಮಾತನಾಡಿದ ನಟ ವಿಜಯ ರಾಘವೇಂದ್ರ, ಇನ್ನೊಂದು ಒಳ್ಳೆಯ ಪ್ರಯತ್ನ. ನಾಡಿನ ಸಾಂಸ್ಕೃತಿಕ ಹಿನ್ನೆಲೆಯ ಜತೆಗೆ ಒಂದು ಸಣ್ಣ ಇತಿಹಾಸ, ಅದರ ವೈಭವವನ್ನು ತೆಗೆದುಕೊಂಡು ಹೋಗುವ ಕಥೆ. ಕಮರ್ಷಿಯಲ್ ಎಲಿಮೆಂಟ್ ಒಳಗೊಂಡಿದ್ದರೂ ಕೂಡ ಸಾಕಷ್ಟು ಡಿವೈನಿಟಿ ಇರುವ ಚಿತ್ರ. ನಿರ್ದೇಶಕರು ವೀರಗಾಸೆ ಕಲೆಯ ಹಿನ್ನೆಲೆ ಇಟ್ಟುಕೊಂಡು ಒಂದೊಳ್ಳೆ ಕಾನ್ಸೆಪ್ಟ್ ರೆಡಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ನಾನು ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಅಷ್ಟೇ ಅಲ್ಲ ಚಿತ್ರದಲ್ಲಿ ನನಗೆ ಸಾಕಷ್ಟು ಗೆಟಪ್ ಗಳಿವೆ ಎಂದರು.

ನಿರ್ದೇಶಕ ವಸಂತ್ ಕುಮಾರ್ ಮಾತನಾಡಿ ಕಳೆದ ಎರಡುವರೆ ದಶಕಗಳಿಂದಲೂ ಚಿತ್ರರಂಗದಲ್ಲಿದ್ದೇನೆ. ಹಲವಾರು ಚಿತ್ರಗಳಿಗೆ ಸಹನಿರ್ದೇಶನ, ಕಥೆ, ಚಿತ್ರಕಥೆ ಬರೆದಿದ್ದೇನೆ. ಇದೊಂದು ಟ್ರೆಡಿಷನಲ್ ಸಬ್ಜೆಕ್ಟ್. ನಮ್ಮ ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ಒಂದು ಕಲೆಯನ್ನು ಈ ಚಿತ್ರದ ಮೂಲಕ ಹೇಳಹೊಟಿದ್ದೇನೆ. ಒಂದೂವರೆ ವರ್ಷದಿಂದ ಸಾಕಷ್ಟು ರೀಸರ್ಚ್ ಮಾಡಿ ಈ ಕಥೆ ರೆಡಿ ಮಾಡಿಕೊಂಡಿದ್ದೇನೆ. ಕಥೆ ಮಾಡಿಕೊಂಡು ಒಂದಷ್ಟು ಮಠಾಧೀಶರನ್ನು ಸಂಪರ್ಕಿಸಿದಾಗ ಅವರೆಲ್ಲ ಒಳ್ಳೆ ಪ್ರಯತ್ನ. ಗೆದ್ದೇ ಗೆಲ್ತೀಯ ಎಂದು ಶುಭ ಹಾರೈಸಿದರು ಎಂದು ಹೇಳಿದರು.

ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ಇಲ್ಲಿ ಹೇಳುತ್ತಿದ್ದೇನೆ. ಕಥೆ ಮಾಡುವಾಗಲೇ ವಿಜಯ ರಾಘವೇಂದ್ರ ಅವರನ್ನು ವೀರಗಾಸೆ ಗೆಟಪ್‍ನಲ್ಲಿ ಕಲ್ಪಿಸಿಕೊಂಡೆ. ಈ ಸಮಯದಲ್ಲಿ ಹಲವಾರು ಸ್ನೇಹಿತರು ನಿರ್ಮಾಣದಲ್ಲಿ ಕೈಜೋಡಿಸುತ್ತಿದ್ದಾರೆ. ಮೂಲಕ ನಾಡಿನ ಜನತೆಗೆ ಒಂದೊಳ್ಳೆ ಸಿನಿಮಾ ಕಟ್ಟಿ ಕೊಡಬೇಕೆಂದುಕೊಂಡುದ್ದೇನೆ. ಮೊದಲ ಹಂತದಲ್ಲಿ ದೇವನಹಳ್ಳಿಯ ಫಾರಂ ಹೌಸ್ ನಲ್ಲಿ 15 ದಿನ ಶೂಟ್ ಮಾಡುತ್ತಿದ್ದೇವೆ ಎಂದರು

ಇಡೀ ಊರತುಂಬ ಆಲದಮರ, ಹಿಂದುಳಿದವರೇ ಇರುವ ಲೊಕೇಶನ್ ಹುಡುಕೊದಾಗ ಸಿಕ್ಕಿದ್ದೇ ಚಿಕ್ಕತದಮಂಗಲ. ಅಲ್ಲಿ ಜಾಸ್ತಿ ಇರುವುದೇ ವೀರಭದ್ರ ದೇವರ ಒಕ್ಕಲಿನವರು. ಅಲ್ಲಿ ಹೋಗಿ ಶೂಟಿಂಗ್ ಮಾಡಬೇಕೆಂದಾಗ ಇಡೀ ಊರ ಜನತೆ ನಮಗೆ ಸಹಕಾರ ಕೊಡ್ತಿದಾರೆ ಎಂದರು.

ನಿರ್ದೇಶಕರ ಸ್ನೇಹಿತರಾದ ಜಯರಾಮಣ್ಣ, ಶಿವರಾಮ್, ಚಿದಾನಂದ್, ಹಡಪದ, ರಮೇಶ್, ಮಂಜುನಾಥ್, ಮುನಿಕೃಷ್ಣಪ್ಪ, ರವಿ, ಅಶ್ವಥ್, ಆನಂದ್ ಸೇರಿ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ನಿರ್ದೇಶಕರ ಒಂದು ಒಳ್ಳೆಯ ಪ್ರಯತ್ನಕ್ಕೆ ನಾವೆಲ್ಲ ಕೈ ಜೋಡಿಸಿರುವುದಾಗಿ ಅವರು ಹೇಳಿಕೊಂಡರು.

ರುದ್ರಾಭಿಷೇಕಂ ಚಿತ್ರದ ನಾಯಕಿಯಾಗಿ ಮೈಸೂರು ಮೂಲದ ರಂಗಭೂಮಿ ಪ್ರತಿಭೆ ಪ್ರೇರಣಾ ನಟಿಸುತ್ತಿದ್ದಾರೆ. ಮತ್ತೊಬ್ಬ ದೈತ್ಯಪ್ರತಿಭೆ ಬಲ ರಾಜವಾಡಿ ಅವರು ಊರ ಗೌಡನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಚಿತ್ರದ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಲ್ಲದೆ ತಾರಕೇಶ್ವರ ಸೇರಿ ಅನೇಕ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿರುವ ಮುತ್ತುರಾಜ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin