“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ನಟ ಯುವರಾಜ್ ಕುಮಾರ್
ಗ್ರಾಮೀಣ ಸೊಗಡಿನ ಕಾಮಿಡಿ ಕಥಾನಕವೊಂದಿರುವ “ ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರ ಸೆಪ್ಟೆಂಬರ್ 19ರಂದು ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಟ್ರೈಲರ್ ಅನ್ನು ನಟ ಯುವ ರಾಜ್‍ಕುಮಾರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು

ಮೇಘಶ್ರೀ ರಾಜೇಶ್ ನಿರ್ಮಾಣದಲ್ಲಿ ಜೆ.ವಿ.ಆರ್ ದೀಪು ಆಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ಮಹಾಂತೇಶ್ ಹಿರೇಮಠ ಕಾಮಿಡಿ ಕಥಾಹಂದರ ಹೊಂದಿದೆ. ಟ್ರೈಲರ್ ಬಿಡುಗಡೆಯಲ್ಲಿ ಮಾಜಿ ಶಾಸಕ ಮಸಾಲ ಜಯರಾಮ್, ಸುಬ್ರಹ್ಮಣ್ಯ, ರೂಪಾಲಿ,ನಿರ್ಮಾಪಕರಾದ ನವರಸನ್, ರಮೇಶ್, ಸುರೇಶ್, ನಟಿ ಕಾರುಣ್ಯ ರಾಮ್ ಹಾಗೂ ನಿರ್ದೇಶಕರಾದ ಗುರು ದೇಶಪಾಂಡೆ, ಜಡೇಶ್ ಕೆ ಹಂಪಿ, ಎಸ್ ಗೋವಿಂದ್,ಸುಕೇಶ್ ಶೆಟ್ಟಿ, ದೇವನೂರು ಚಂದ್ರು, ಜಾಕಿ ಮುಂತಾದ ಗಣ್ಯರು ಸಾಕ್ಷಿಯಾಗಿದ್ದರು

ನಿರ್ಮಾಪಕ ರಾಜೇಶ್ ಗೌಡ ಮಾತನಾಡಿ ದೊಡ್ಮನೆಯವರಿಂದ ಟ್ರೇಲರ್ ಅನಾವರಣ ಮಾಡಿಸುವ ಆಸೆಯಿತ್ತು. ಚಿತ್ರದ ಶೀರ್ಷಿಕೆಯನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿಕೊಟ್ಟಿದ್ದರು.ಯುವ ರಾಜಕುಮಾರ್ ಟ್ರೇಲರ್ ಅನಾವರಣ ಮಾಡಿದ್ದು ಬಹಳ ಖುಷಿಯಾಗಿದೆ ಎಂದು ತಿಳಿಸಿದರು.
ನಿರ್ದೇಶಕ ಜೆ.ವಿ.ಆರ್ ದೀಪು ಮಾತನಾಡಿ ನಿರ್ದೇಶಕನಾಗಿ ಮೊದಲ ಚಿತ್ರ. ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 19 ರಂದು ತೆರೆಗೆ ಬರಲಿದೆ ಎಂದರು
ನಾಯಕ ಮಹಾಂತೇಶ್ ಹಿರೇಮಠ ಮಾತನಾಡಿ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ರೆಂಚ್ ಬಿರಿಯಾನಿ” ಚಿತ್ರದ ಮೂಲಕ. ಪುನೀತ್ ಅವರ ಕುಟುಂಬದ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು ಸಂತೋಷವಾಗಿದೆ. ಒಳ್ಳೆಯ ಕಲಾವಿದರ ಹಾಗೂ ತಂತ್ರಜ್ಞರ ತಂಡ ದೊರಕಿದ್ದು, ಚಿತ್ರ ಚೆನ್ನಾಗಿ ಮೂಡಿಬರಲು ಪ್ರಮುಖ ಕಾರಣ. ನನ್ನ ಸಿನಿಜೀವನದ ಆರಂಭದ ದಿನದಿಂದಲೂ ತಾವು ನೀಡುತ್ತಿರುವ ಬೆಂಬಲ ಈ ಚಿತ್ರದಲ್ಲೂ ಮುಂದುವರೆಯಲಿ ಎಂದರು

ನಾಯಕಿ ರಶ್ಮಿತ ಗೌಡ ಛಾಯಾಗ್ರಾಹಕ ಗುರುಪ್ರಸಾದ್ ನರ್ನಾಡ್ ಸಂಗೀತ ನಿರ್ದೇಶಕ ಪ್ರವೀಣ್ – ಪ್ರದೀಪ್, ಹಿನ್ನಲೆ ಸಂಗೀತ ನೀಡಿರುವ ರಾಕೇಶ್ ಆಚಾರ್ಯ, ಸಂಕಲನಕಾರ ಸುನೀಲ್ ಕಶ್ಯಪ್ ಹಾಗೂ ಚಿತ್ರದಲ್ಲಿ ನಟಿಸಿರುವ ಪಿ.ಡಿ.ಸತೀಶ್ ಮುಂತಾದವರು ‘ಅರಸಯ್ಯನ ಪ್ರೇಮ ಪ್ರಸಂಗ ” ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು

