Actress Kangana's Arrival in 'Chandramukhi-2': First Look Released

‘ಚಂದ್ರಮುಖಿ- 2 ಚಿತ್ರಕ್ಕೆ ನಟಿ ಕಂಗನಾ ಆಗಮನ : ಫಸ್ಟ್ ಲುಕ್ ಬಿಡುಗಡೆ - CineNewsKannada.com

‘ಚಂದ್ರಮುಖಿ- 2 ಚಿತ್ರಕ್ಕೆ ನಟಿ ಕಂಗನಾ ಆಗಮನ : ಫಸ್ಟ್ ಲುಕ್ ಬಿಡುಗಡೆ

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಈ ಚಿತ್ರ ಎಂಟ್ರಿ ಕೊಡ್ತಿದ್ದು, ಇಂದು ಕಂಗನಾ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

Actress Kangana Ranut

ಸಂಪ್ರಾದಾಯಿಕ ಉಡುಗೆ ತೊಟ್ಟು, ಬಂಗಾರದ ಆಭರಣೆಗಳಲ್ಲಿ ಕಂಗನಾ ಕಂಗೊಳಿಸಿದ್ದಾಳೆ. ಕಳೆದ ವಾರವಷ್ಟೇ ಸೂಪರ್ ಸ್ಟಾರ್ ರಜನಿಕಾಂತ್ ರಾಘವ್ ಲಾರೆನ್ಸ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದರು.

ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. ಗಣೇಶ್ ಹಬ್ಬಕ್ಕೆ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಚಂದ್ರಮುಖಿ-2 ಸಿನಿಮಾ ಬಿಡುಗಡೆಯಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin