Actress Nisha Ravikrishnan starrer "Anshu" releases on November 21

ನಟಿ ನಿಶಾ ರವಿಕೃಷ್ಣನ್ ನಟನೆಯ “ಅಂಶು’ ನವಂಬರ್ 21ರಂದು ಬಿಡುಗಡೆ - CineNewsKannada.com

ನಟಿ ನಿಶಾ ರವಿಕೃಷ್ಣನ್ ನಟನೆಯ “ಅಂಶು’ ನವಂಬರ್ 21ರಂದು ಬಿಡುಗಡೆ

ಟ್ರೈಲರ್ ಮೂಲಕ ಮೋಡಿ ಮಾಡಿರುವ `ಅಂಶು’ ಚಿತ್ರಕ್ಕೆ ಸೆನ್ಸಾರ್ ನಿಂದ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಸಸ್ಪೆನ್ಸ್, ಥ್ರಿಲ್ಲರ್ ಕಥೆ ಹೊಂದಿರುವ ಚಿತ್ರ ಕುತೂಹಲ ಹೆಚ್ಚು ಮಾಡಿದೆ

ಫಸ್ಟ್ ಲುಕ್ ಟೀಸರ್ ಮೂಲಕವೇ ಗಮನ ಸೆಳೆದಿದ್ದ ಈ ಚಿತ್ರದಲ್ಲಿ ಗಟ್ಟಿಮೇಳ ಖ್ಯಾತಿಯ ನಿಶಾ ರವಿಕೃಷ್ಣನ್ ನಾಯಕಿಯಾಗಿ ನಟಿಸಿದ್ದಾರೆ. ಆ ಧಾರಾವಾಹಿಯಲ್ಲಿ ರೌಡಿ ಬೇಬಿ ಅವತಾರದಲ್ಲಿ ಕಂಗೊಳಿಸಿದ್ದ ನಿಶಾ ಇಲ್ಲಿ ಭಾವನಾತ್ಮಕ ಪಾತ್ರವೊಂದರ ಮೂಲಕ ಹಿರಿತೆರೆ ಪ್ರೇಕ್ಷಕರ ಮನಗೆಲ್ಲಲು ಮುಂದಾಗಿದ್ದಾರೆ.

ಇದೇ ಖುಷಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ತಂಡ ಸಜ್ಜಾಗಿದೆ. ಸಾಮಾಜಿಕ ಸ್ಥಿತ್ಯಂತರವೊಂದಕ್ಕೆ ಸಿನಿಮಾ ಸ್ಪರ್ಶ ನೀಡಿರುವ ಕುಸುರಿ ಕೆಲಸಕ್ಕೆ ಸೆನ್ಸಾರ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಅಂಶು ಇದೀಗ ನಿರ್ಣಾಯಕ ಘಟ್ಟ ತಲುಪಿಕೊಂಡಿದೆ.

ಗ್ರಹಣ ಎಲ್ ಎಲ್ ಪಿ ಬ್ಯಾನರಿನಡಿಯಲ್ಲಿ ರತನ್ ಗಂಗಾಧರ್ ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಚಿತ್ರ ನಿರ್ಮಾಣ ಮಾಡಿದ್ದಾರೆ. ಚೆಲುವರಾಜ್, ಜಯಚಂದ್ರ ಯಲ್ಲಪ್ಪ, ಪ್ರಮೋದ್ ಚಿನ್ನಸ್ವಾಮಿ, ಡಾ.ಮಧುರಾಜ್ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

ನಿಶಾ ರವಿಕೃಷ್ಣನ್ ಪಾತ್ರದ ಚಹರೆ ಟ್ರೈಲರ್ ಮೂಲಕ ಸ್ಪಷ್ಟವಾಗಿಯೇ ಜಾಹೀರಾಗಿತ್ತು. ಅಂದಹಾಗೆ, ಇದು ಕನ್ನಡದ ಮಟ್ಟಿಗೆ ಅತ್ಯಪರೂಪವಾದ ಸೈಕ್ಯಾಡೆಲಿಕ್ ಥ್ರಿಲ್ಲರ್ ಜಾನರಿನ ಚಿತ್ರ. ಎಂ.ಸಿ ಚನ್ನಕೇಶವ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈ ಪ್ರಥಮ ಹೆಜ್ಜೆಯಲ್ಲಿಯೇ ಸಮಾಜುಮುಖಿ ಕಥೆಯನ್ನು ದೃಶ್ಯಕ್ಕೆ ಒಗ್ಗಿಸಿದ್ದಾರೆ.

ಸಾಮಾಜಿಕ ತುಡಿತ ಹೊಂದಿರೋ ಕಥೆಯನ್ನು ಕಮರ್ಶಿಯಲ್ ಚೌಕಟ್ಟಿನಲ್ಲಿ ಪ್ರಸ್ತುತಪಡಿಸೋದು ಸವಾಲಿನ ಕೆಲಸ. ಅಂಶು ಚಿತ್ರದಲ್ಲಿ ಅದನ್ನು ಸಾಧ್ಯವಾಗಿಸಲಾಗಿದೆಯಂತೆ. ಅದರ ಒಟ್ಟಾರೆ ಆವೇಗ ಎಂಥಾದ್ದೆಂಬುದು ಈಗಾಗಲೇ ಪ್ರೇಕ್ಷಕರಿಗೆ ಅರಿವಾಗಿದೆ. ಸುನೀಲ್ ನರಸಿಂಹಮೂರ್ತಿ ಛಾಯಾಗ್ರಾಹಕರಾಗಿ ಚಿತ್ರ ಭಾಗವಾಗಿದ್ದಾರೆ.

ಆಶಾ ಎಂ ಥಾಮಸ್ ವಸ್ತ್ರವಿನ್ಯಾಸದ ಮೂಲಕ ಚಿತ್ರವನ್ನು ಅಂದಗಾಣಿಸಿದ್ದಾರೆ. ಜಿ.ವಿ ಪ್ರಕಾಶ್, ವಿದ್ಯಾಸಾಗರ್ ಜೊತೆ ಪೆÇ್ರೀಗ್ರಾಮರ್ ಆಗಿದ್ದ ಕೆ.ಸಿ ಬಾಲರಂಗನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ನವ ಪ್ರತಿಭೆ ವಿಘ್ನೇಶ್ ಶಂಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಮಹೇಂದ್ರ ಗೌಡ ಸಂಭಾಷಣೆ ಮತ್ತು, ಸಾಹಿತ್ಯದ ಜವಾಬ್ದಾರಿ ನಿಭಾಯಿಸಿದ್ದಾರೆ. ಇದೇ ನವೆಂಬರ್ 21ರ ಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin