Actress Priya in "Kumbha Sambhava", a story revolving around a social issue

ಸಾಮಾಜಿಕ ಸಮಸ್ಯೆಯ ಸುತ್ತ ಕಥಾಹಂದರದ “ಕುಂಭ ಸಂಭವ”ದಲ್ಲಿ ನಟಿ ಪ್ರಿಯಾ - CineNewsKannada.com

ಸಾಮಾಜಿಕ ಸಮಸ್ಯೆಯ ಸುತ್ತ ಕಥಾಹಂದರದ “ಕುಂಭ ಸಂಭವ”ದಲ್ಲಿ ನಟಿ ಪ್ರಿಯಾ

ರಂಗಭೂಮಿ ಮತ್ತು ಕಿರುತೆರೆಯಲ್ಲಿ ಅಬ್ಬರಿ ಆರ್ಭಟಿಸಿದ್ದ ನಟಿ ಪ್ರಿಯಾಷಟಮರ್ಷಿಣಿ ಅವರಿಗೆ ದುನಿಯಾ ವಿಜಯ್ ಅವರ “ಭೀಮ” ಚಿತ್ರ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇಮೇಜ್ ನೀಡಿದೆ. ಇದರಿಂದ ಒಂದರ ಹಿಂದೆ ಒಂದು ಸಿನಿಮಾದಲ್ಲಿ ಅವಕಾಶಗಳು ಸಿಗುತ್ತಿವೆ.

“ಭೀಮ” ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯ “ಕುಂಭ ಸಂಭವ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಣ್ಣು ಭ್ರೂಣಹತ್ಯೆ ಸುತ್ತಾ ಸಾಗುವ ಸಾಮಾಜಿಕ ಕಳಕಳಿ ಇರುವ ಚಿತ್ರದಲ್ಲಿ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರಿಯಾ ಮತ್ತೆ ಖಾಕಿ ಖದರ್ ತೋರಸಲು ಸಜ್ಜಾಗಿದ್ದಾರೆ.

ವಿಜಯನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆಯಿತು. ನರೇಶ್ ಅಆರಂಭ ಫಲಕ ತೋರುವ ಮೂಲಕ ಚಿತ್ರ ಆರಂಭವಾಗಿದೆ.ಮಹೂರ್ತದ ಬಳಿಕ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.

ಈ ವೇಳೆ ಮಾತನಾಡಿದ ನಟಿ ಪ್ರಿಯಾ, “ಕುಂಭ ಸಂಭವ” ಚಿತ್ರದ ಕಥೆ ನನ್ನ ಮನಸ್ಸಿಗೆ ಬಹಳ ಹತ್ತಿರವಾಯಿತು. ನಮ್ಮ ಸುತ್ತಮುತ್ತ ದಿನನಿತ್ಯ ನೋಡುವ ವಿಷಯವನ್ನಿಟ್ಟಿಕೊಂಡು ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಹೆಣ್ಣುಮಕ್ಕಳಿಗೆ ಬಹಳ ಹಿಡಿಸುವ ಕಥೆಯಿದು. ಭ್ರೂಣ ಹತ್ಯೆಯ ಸುತ್ತ ಬೇಕಾದಷ್ಟು ಕಥೆ ಬಂದಿದೆಯಾದರೂ ಇದು ವಿಭಿನ್ನ. ಸಮಸ್ಯೆಗೆ ಪರಿಹಾರವನ್ನು ನಮ್ಮ ಚಿತ್ರದಲ್ಲಿ ಹೇಳಲಾಗಿದೆ. ಈ ಚಿತ್ರದಲ್ಲೂ ನಾನು ಪೆÇಲೀಸ್ ಅಧಿಕಾರಿ. ಜಾನಕಿ ನನ್ನ ಪಾತ್ರದ ಹೆಸರು ಎಂದರು

ನಿರ್ದೆಶಕ ಟಿ.ಎನ್ ನಾಗೇಶ್ ಮಾತನಾಡಿ “2023” ರಲ್ಲಿ ಮಂಡ್ಯ ಸುತ್ತಮುತ್ತ ನಡೆದ ಭ್ರೂಣ ಹತ್ಯೆಯ ವಿಷಯವನ್ನಿಟ್ಟುಕೊಂಡು ಚಿತ್ರದ ಕಥೆ ಬರೆದಿದ್ದೇನೆ ಕ್ರಿಶ್ ಜೋಷಿ ಕಥೆ ಬರೆಯುವಲ್ಲಿ ಸಹಕಾರ ನೀಡಿದ್ದಾರೆ. ಇದೊಂದು ಸಾಮಾಜಿಕ ಸಮಸ್ಯೆಯ ಸುತ್ತಲ್ಲಿನ ನೈಜಘಟನೆ ಆಧಾರಿತ ಚಿತ್ರ. “ಭೀಮ” ಖ್ಯಾತಿಯ ಪ್ರಿಯ, ಅರ್ಜುನ್ ದೇವ್, ಮಧು ಶ್ರೀ, ಶೋಭಿತ, ಕಮಲ್ ಮುಂತಾದವರು ಚಿತ್ರದ ಮುಖ್ಯಪಾತ್ರದಲ್ಲಿದ್ದಾರೆ ಎಂದು ಹೇಳಿದರು.

ಮಿಲ್ಕಿ ಮೂನ್ ಮೂವೀಸ್ ಲಾಂಛನದಲ್ಲಿ ನಾಗಾನಾಯ್ಕ, ತಾರಾ ನಾಗೇಶ, ಸುನಂದಾ ಹೊಸಪೇಟೆ, ಕಮಲ್, ಡೇವಿಡ್ ರಾಯಪ್ಪ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ವಲ್ಲಿ ಹಾಗೂ ನಿಂಗರಾಜು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಮೂರು ಹಾಡುಗಳಿರುವ “ಕುಂಭ ಸಂಭವ” ಚಿತ್ರದಲ್ಲಿ ಮೂರು ಸಾಹಸ ಸನ್ನುವೇಶಗಳೂ ಇದೆ. ಎಂ.ಎನ್ ಕೃಪಾಕರ್ ಸಂಗೀತ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಸಿದ್ದಾರಾಜು ಛಾಯಾಗ್ರಹಣ ಹಾಗೂ ಆಕಾಶ್ ಸಂಕಲನ ಚಿತ್ರಕ್ಕಿದ್ದು, ಕ್ರಿಶ್ ಜೋಶಿ ಸಂಭಾಷಣೆ ಬರೆದಿದ್ದಾರೆ. ಇಂದಿನಿಂದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದರು.

ಚಿತ್ರದ ನಾಯಕ ಅರ್ಜುನ್ ದೇವ್, ನಟಿಯರಾದ ಮಧುಶ್ರೀ, ಶೋಭಿತ, ಸುನಂದ, ಕಲಾವಿದರಾದ ಕಮಲ್, ಶಿವಾಜಿರಾವ್ ಜಾದವ್ ಮುಂತಾದವರು ಚಿತ್ರದ ಕುರಿತು ಹಾಗೂ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin