Adhipatra' in the shooting arena: Rupesh Shetty Khader in khaki

ಶೂಟಿಂಗ್ ಅಖಾಡದಲ್ಲಿ ‘ಅಧಿಪತ್ರ’ : ಖಾಕಿ ಧಿರಿಸಿನಲ್ಲಿ ರೂಪೇಶ್ ಶೆಟ್ಟಿ ಖದರ್ - CineNewsKannada.com

ಶೂಟಿಂಗ್ ಅಖಾಡದಲ್ಲಿ ‘ಅಧಿಪತ್ರ’ : ಖಾಕಿ ಧಿರಿಸಿನಲ್ಲಿ ರೂಪೇಶ್ ಶೆಟ್ಟಿ ಖದರ್

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ “ಅಧಿಪತ್ರ” ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಕುಂದಾಪುರದ ಕೆರಾಡಿ ಭಾಗದಲ್ಲಿ ಚಿತ್ರೀಕರಣ ನಡೆಸ್ತಿದೆ. ಈಗಾಗಲೇ 10 ದಿನ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ನಾಯಕ ರೂಪೇಶ್ ಖಾಕಿ ಖದರ್ ನಲ್ಲಿ ಕಾಣಿಸಿಕೊಂಡಿರುವ ಫೆÇೀಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ `ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು.

ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು `ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ,ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ರೂಪೇಶ್ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ, ಅಧಿಪತ್ರ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin