Aditya Sasikumar is the young actor who is about to make his fortune with "Rashi".

“ರಾಶಿ” ಮೂಲಕ ಅದೃಷ್ಠ ಹರಸಲು ಮುಂದಾದ ಯುವ ನಟ ಅದಿತ್ಯ ಶಶಿಕುಮಾರ್ - CineNewsKannada.com

“ರಾಶಿ” ಮೂಲಕ ಅದೃಷ್ಠ ಹರಸಲು ಮುಂದಾದ ಯುವ ನಟ ಅದಿತ್ಯ ಶಶಿಕುಮಾರ್

ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಟನೆಯ ಸುಂದರ ಪ್ರೇಮಕಥೆಯ ತಿರುಳು ಹೊಂದಿರುವ “ ರಾಶಿ” ಚಿತ್ರದ ಮೂಲಕ ಚಿತ್ರರಂಗದಲ್ಲಿ ಅದೃಷ್ಠ ಕಂಡುಕೊಳ್ಳಲು ಮುಂದಾಗಿದ್ದಾರೆ. ಆದಿತ್ಯ ಹುಟ್ಟುಹಬ್ಬದ ದಿನದಂದೇ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ತಂಡ ಹುಟ್ಟುಹಬ್ಬದ ಉಡುಗೊರೆ ನೀಡಿದೆ.

ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ರಾಶಿ” ಚಿತ್ರಕ್ಕೆ ವಿಜಯ್ ಪಾಳೇಗಾರ್ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ನಟ ಶಶಿಕುಮಾರ್, ಬೆಂಗಳೂರು ಪೆÇಲೀಸ್ ಉಪ ಆಯುಕ್ತ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಸ್ ಚಿದಂಬರ್ ಸೇರಿದಂತೆ ಮುಂತಾದ ಗಣ್ಯರು ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಈ ವೇಳೆ ಮಾತಿಗಿಳಿದ ನಟ ಆದಿತ್ಯ ಶಶಿಕುಮಾರ್, ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ. ಚಿತ್ರದ ಕಥೆ ಬಹಳ ಚೆನ್ನಾಗಿದೆ.ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ ಎಂದರು.

ನಿರ್ದೇಶಕ ವಿಜಯ್ ಪಾಳೇಗಾರ್ ಮಾತನಾಡಿ ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಚಿತ್ರವನ್ನು ನಿರ್ದೇಶಿಸಬೇಕೆಂದರು. ಅಖಿಲೇಶ್ ಅವರೆ ಚಿತ್ರದ ಕಥೆ ಬರೆದಿದ್ದಾರೆ. ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ ಎಂದು ಮಾಹಿತಿ ನೀಡಿದರು

“ಟ್ರಿಗರ್” ಚಿತ್ರದ ನಂತರ ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನವಿದೆ. ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಈ ಪ್ರೇಮ ಕಥಾನಕಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ತಿಳಿಸಿದರು.

ಚಿತ್ರದ ನಾಯಕಿ ಸಮೀಕ್ಷ, ನಿರ್ಮಾಪಕ ಅಖಿಲೇಶ್, ಕಲಾವಿದರಾದ ಕರಿಸುಬ್ಬು, ಉಗ್ರಂ ರವಿ, ಹುಲಿ ಕಾರ್ತಿಕ್ ಮುಂತಾದವರು “ರಾಶಿ” ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ಈ ವೇಳೆ ಹಿರಿಯ ನಟ ಶಶಿಕುಮಾರ್ ಅವರ ಕುಟುಂಬ ಮನೆ ಮಗನ ಹುಟ್ಟುಹಬ್ಬ ಮತ್ತು ಹೊಸ ಚಿತ್ರದ ಶೀರ್ಷಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin