ದುನಿಯಾ ವಿಜಯ್ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ “ನಿದ್ರಾದೇವಿ ನೆಕ್ಟ್ ಡೋರ್” ಚಿತ್ರಕ್ಕೆ ಬಲ
ಯುವ ನಟ ಪ್ರವೀರ್ ಹಾಗು ರಿಷಿಕಾ ನಾಯಕ ನಾಯಕಿಯಾಗಿ ನಟಿಸಿರುವ “ನಿದ್ರಾದೇವಿ ನೆಕ್ಟ್ ಡೋರ್ ಚಿತ್ರಕ್ಕೆ ಸಾಂಡಲ್ ವುಡ್ ಸಲಗ ದುನಿಯಾ ವಿಜಯ್ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಬಲ ಸಿಕ್ಕಿದೆ. ಚಿತ್ರದ “”ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಸರೆಗಮ ಮ್ಯೂಸಿಕ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಚಿತ್ರದ “ಸ್ಲೀಪ್ ಲೆಸ್ ಆಂಥೆಮ್” ಹಾಡು ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಈ ಹಾಡನ್ನು ದುನಿಯಾ ವಿಜಯ್ ಕುಮಾರ್ ಬಿಡುಗಡೆ ಮಾಡಿದ್ದರು. ಪ್ರಸ್ತುತ ಚಿತ್ರದ ಎರಡನೇ ಹಾಡು ಗೋಲ್ಡನ್ ಸ್ಟಾರ್ ಗಣೇಶ್ ಅವರು ಈ ಹಾಡನ್ನು ಅನಾವರಣ ಮಾಡಿದರು .ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನವಿದೆ
ನಿರ್ಮಾಪಕ ಜಯರಾಮ ದೇವಸಮುದ್ರ ಮಾತನಾಡಿ ಚಿತ್ರಕ್ಕೆ ಹಾಡುಗಳು ಇನ್ವಿಟೇಶನ್ ಇದ್ದ ಹಾಗೆ. ಹಾಡುಗಳಿಗೆ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ತರುವ ಶಕ್ತಿಯಿದೆ. ಹಾಗಾಗಿ ನಿರ್ದೇಶಕರಿಗೆ ನಮ್ಮ ಚಿತ್ರದಲ್ಲಿ ಸುಮಧುರ ಗೀತೆಗಳಿರಲಿ ಎಂದು ಹೇಳಿದ್ದೆ. ದುನಿಯಾ ವಿಜಯ್ ಅವರಿಂದ ಬಿಡುಗಡೆಯಾದ ನಮ್ಮ ಚಿತ್ರದ ಮೊದಲ ಹಾಡು ಈಗಾಗಲೇ ಜನಮನಸೂರೆಗೊಂಡಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಎರಡನೇ ಹಾಡನ್ನು ಬಿಡುಗಡೆ ಮಾಡಿರುವುದು ಬಹಳ ಖುಷಿಯಾಗಿದೆ ಎಂದರು

ಹೊಸತಂಡದ ಹೊಸಪ್ರಯತ್ನಕ್ಕೆ ಪ್ರೋತ್ಸಾಹ ನೀಡಲು ಬಂದಿರುವ ಗಣೇಶ್ ಅವರಿಗೆ ಧನ್ಯವಾದ. ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ “ನೀ ನನ್ನ” ಹಾಡನ್ನು ರಾಘವೇಂದ್ರ ಕಾಮತ್ ಅವರು ಬರೆದಿದ್ದಾರೆ. ಸೋನು ನಿಗಂ ಅವರು ಹಾಡಿದ್ದಾರೆ. ಆರು ತಿಂಗಳ ಹಿಂದೆಯೇ ಈ ಹಾಡು ಸಿದ್ದವಾಗಿತ್ತು. ಆನಂತರ ಸೋನು ನಿಗಂ ಅವರ ವಿವಾದ ನಡೆದಿದ್ದು. ಹಾಗಾಗಿ ನಮಗೂ ಕೂಡ ಎಲ್ಲದಕ್ಕಿಂತ ಭಾಷೆ ಮುಖ್ಯ. ಆ ನಿಟ್ಟಿನಲ್ಲಿ ಸೋನು ನಿಗಂ ಅವರ ಧ್ವನಿಯಲ್ಲಿ ಬಂದಿರುವ ಈ ಹಾಡನ್ನು ಚಿತ್ರದಲ್ಲಿ ಬಳಸಿಕೊಳ್ಳುವುದಿಲ್ಲ. ಬೇರೆ ಗಾಯಕರಿಂದ ಈ ಹಾಡನ್ನು ಹಾಡಿಸುತ್ತೇವೆ ಎಂದು ತಿಳಿಸಿದರು.
ನಿರ್ದೇಶಕ ಸುರಾಗ್ ಮಾತನಾಡಿ ಯಾವುದೇ ಕೊರತೆ ಬಾರದ ಹಾಗೆ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇನ್ನೂ ಬಿಡುಗಡೆಯಾಗಿರುವ ರೊಮ್ಯಾಂಟಿಕ್ ಹಾಡು ರೊಮ್ಯಾಂಟಿಕ್ ಹೀರೊ ಗಣೇಶ್ ಅವರಿಂದ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ಪ್ರವೀರ್ ಹಾಗೂ ರಿಷಿಕಾ ಅವರನ್ನು ನಾಯಕ,ನಾಯಕಿ ಎಂದು ಆಯ್ಕೆ ಮಾಡಿದಾಗ ಸಾಕಷ್ಟು ಜನ ನನಗೆ ಈ ಜೋಡಿ ತುಂಬಾ ಚೆನ್ನಾಗಿದೆ ಎಂದರು.

ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ ನಕುಲ್ ಅಭಯಂಕರ್ ಅವರು ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಚಿತ್ರದ ಹಾಡುಗಳು ಚೆನ್ನಾಗಿದೆ. ಮೊದಲ ಹಾಡಂತೂ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. “ನೀ ನನ್ನ” ಹಾಡು ಕೂಡ ಜನಪ್ರಿಯವಾಗುವ ಭರವಸೆ ಇದೆ ಎಂದರು.
ನಾಯಕಿ ರಿಷಿಕಾ ಮಾತನಾಡಿ ಗಣೇಶ್ ಅವರಿಂದ ತಮ್ಮ ಅಭಿನಯದ ಚಿತ್ರದ ಹಾಡು ಬಿಡುಗಡೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಗಣ್ಯರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಹೇಳಿದರು.
ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸ, ಅನೂಪ್, ಐಶ್ವರ್ಯಾ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.

