ಶೃತಿ,ಶರಣ್, ಹೃದಯ್ ಬಳಿಕ “ಕೀರ್ತಿ ಕೃಷ್ಣ” ಬಣ್ಣದ ಲೋಕಕ್ಕೆ ಪರಿಚಯ

ಕನ್ನಡ ಚಿತ್ರರಂಗದಲ್ಲಿ ಹಿರಿಯ ನಟಿ ಶೃತಿ ಪಾತ್ರ ಮತ್ತು ಪ್ರತಿಭೆಗಳ ಮೂಲಕ ಜನಮನ ಗೆದ್ದಿದ್ದಾರೆ. ಅವರ ಬೆನ್ನಲ್ಲೇ ಸಹೋದರ ಶರಣ್ ಕೂಡಿ ಮೋಡಿ ಮಾಡಿದ್ದಾರೆ. ಅವರ ಪುತ್ರ ಹೃದಯ್ ಚಿತ್ರರಂಗ ಪ್ರವೇಶಿಸಿದ್ದರು. ಇದೀಗ ಅವರ ಕುಟುಂಬದ ಮತ್ತೊಂದು ಕುಡಿ ಶರಣ್-ಶೃತಿ ಸಹೋದರಿಯ ಪುತ್ರಿ ಕೀರ್ತಿ ಕೃಷ್ಣ ಚಿತ್ರರಂಗದಲ್ಲಿ ಅದೃಷ್ಠ ಕಂಡುಕೊಳ್ಳಲು ಮುಂದಾಗಿದ್ಧಾರೆ

ಯುವ ನಟಶ್ರೇಯಸ್ ಮಂಜು ನಟಿಸುತ್ತಿರುವ `ದಿಲ್ ದಾರ್’ ಚಿತ್ರದಲ್ಲಿ ನಾಯಕಿಯಾಗಿ ಕೀರ್ತಿ ಕೃಷ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ದಿಲ್ಲದೆ ಚಿತ್ರದ ಚಿತ್ರೀಕರಣ ಮುಗಿಸಿಕೊಂಡಿದೆ. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾದ ಹಾಡೊಂದು ಮಾತ್ರ ಬಾಕಿ ಉಳಿದುಕೊಂಡಿದೆ.
ಸಿಂಪಲ್ ಸುನಿ ಮುಂಬರುವ ಚಿತ್ರಕ್ಕೂ ಕೀರ್ತಿ ಕೃಷ್ಣ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ದಿಲ್ ದಾರ್ ಚಿತ್ರದಲ್ಲಿ ಸಿಕ್ಕ ಅವಕಾಶವನ್ನು ಅಚ್ಚುಕಟ್ಟಾಗಿ ನಿಬಾಯಿಸಿದ್ದಾರೆ ಎನ್ನುವ ಮೆಚ್ಚುಗೆ ಚಿತ್ರತಂಡದಿಂದ ಕೇಳಿಬಂದಿರುವ ಮಾತು.

ಪ್ರೇಮಕಥೆ ಅಂದಾಕ್ಷಣ ಒಂದು ಸಿದ್ಧಸೂತ್ರ ಸಹಜ., ಚಿತ್ರರಂಗದಲ್ಲಿ ದಶಕಗಳ ಕಾಲ ಪಳಗಿರುವ ಮಧುಗೌಡ ಚೌಕಟ್ಟಿನಾಚೆ ಹಬ್ಬಿಕೊಂಡ ಚೆಂದದ ಕಥೆಯೊಂದಿಗೆ ಈ ಸಿನಿಮಾ ರೂಪಿಸಿದ್ದಾರೆ. ಶ್ರೇಯಸ್ ಮಂಜು ಕೂಡಾ ಖುಷಿಯಿಂದಲೇ ಸಕಥೆಯನ್ನು ಒಪ್ಪಿಕೊಂಡಿದ್ದಾರೆ. ಬಾಕಿ ಇರುವ ಹಾಡನ್ನು ಸೆರೆ ಹಿಡಿಯಲು ನಿರ್ದೇಶಕರು ತಯಾರು ನಡೆಸಿದ್ಧಾರೆ.
ಅರ್ಜುನ್ ಜನ್ಯಾ ಸ್ಪೆಷಲ್ ಹಾಡು ಕಂಪೋಸ್ ಮಾಡಿ ಕೊಟ್ಟಿದ್ದಾರೆ. ಅದಕ್ಕೆ ತಕ್ಕುಗಾದ ನೃತ್ಯ ಸಂಯೋಜನೆಯೂ ನಡೆದಿದೆ. ಹಾಡಿನಲ್ಲಿ ವಿಭಿನ್ನ ನೃತ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ನಾಯಕ ನಟ ಶ್ರೇಯಸ್ ಇದಕ್ಕಾಗಿ ಶ್ರಮಪಟ್ಟು ಕಲಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಒಂದಿಡೀ ಚಿತ್ರತಂಡವೀಗ ಆ ಹಾಡಿಗಾಗಿ ತಾಲೀಮು ನಡೆಸುತ್ತಿದೆ.

ಹಾಡಿನ ಚಿತ್ರೀಕರಣದೊಂದಿಗೆ ಎಲ್ಲವೂ ಮುಕ್ತಾಯಗೊಳ್ಳಲಿದೆ. ಅಂದುಕೊಂಡಂತೆಯೇ ಎಲ್ಲ ನಡೆದರೆ ಇದೇ ಯುಗಾದಿಯ ಆಸುಪಾಸಲ್ಲಿ ದಿಲ್ ದಾರ್ ಚಿತ್ರ ತೆರೆಗಾಣಲಿದೆ. ಚಿತ್ರದಲ್ಲಿ ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ.
ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಸೀನುಗಳಲ್ಲಿ ಶ್ರೇಯಸ್ ಮಂಜು ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಲಿದ್ದಾರೆ ಎನ್ನುವುದು ಚಿತ್ರತಂಡದ ಭರವಸೆ.