"Amara Premi Arun", a love story from Bellary, will hit the screens on April 25.

ಏಪ್ರಿಲ್ 25ಕ್ಕೆ ಬಳ್ಳಾರಿ ಭಾಗದ ಪ್ರೇಮ ಕಥಾನಕ “ಅಮರ ಪ್ರೇಮಿ ಅರುಣ್” ಚಿತ್ರ ತೆರೆಗೆ - CineNewsKannada.com

ಏಪ್ರಿಲ್ 25ಕ್ಕೆ ಬಳ್ಳಾರಿ ಭಾಗದ ಪ್ರೇಮ ಕಥಾನಕ “ಅಮರ ಪ್ರೇಮಿ ಅರುಣ್” ಚಿತ್ರ ತೆರೆಗೆ

ಒಲವು ಸಿನಿಮಾ ಲಾಂಛನದಲ್ಲಿ ಒಲವಿನ ಗೆಳೆಯರು ಒಂದಿಷ್ಟು ಜನ ಸೇರಿ ಒಲವಿನಿಂದ ನಿರ್ಮಾಣ ಮಾಡಿರುವ ಹಾಗೂ ಪ್ರವೀಣ್ ಕುಮಾರ್ ಜಿ ಬರವಣಿಗೆ ಹಾಗೂ ನಿರ್ದೇಶನದ ” ಅಮರ ಪ್ರೇಮಿ ಅರುಣ್” ಚಿತ್ರ ಏಪ್ರಿಲ್ 25 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಧರ್ಮಣ್ಣ ಕಡೂರು, ಕ್ರಿತಿ ಭಟ್, ಮಹೇಶ್ ಬಂಗ್, ಅರ್ಚನಾ ಕೊಟ್ಟಿಗೆ, ರಂಜಿತಾ ಪುಟ್ಟಸ್ವಾಮಿ, ಮಂಜಮ್ಮ ಜೋಗತಿ, ರಾಧ ರಾಮಚಂದ್ರ, ಬಲ ರಾಜವಾಡಿ ಹೀಗೆ ಅನುಭವಿ ಕಲಾವಿದರ ದೊಡ್ಡ ದಂಡೆ ಈ ಚಿತ್ರದಲ್ಲಿದೆ. ಬಳ್ಳಾರಿ ಆಸುಪಾಸಿನಲ್ಲೇ ಚಿತ್ರೀಕರಣ ನಡೆದಿರುವ ಈ ಚಿತ್ರದ ಸಂಭಾಷಣೆ ಕೂಡ ಅಲ್ಲಿನ ಸೊಗಡಿನಲ್ಲೇ ಇರುತ್ತದೆ.

ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ಪ್ರವೀಣ್ ಕುಮಾರ್ ಅವರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ. ಪ್ರವೀಣ್ ಎಸ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮಂಡ್ಯ ಮಂಜು ಕಾರ್ಯ ನಿರ್ವಹಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin