`Amruta Mati' on Amazon Prime OTT

ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ `ಅಮೃತ ಮತಿ’ - CineNewsKannada.com

ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ `ಅಮೃತ ಮತಿ’

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ `ಅಮೃತ ಮತಿ’ ಕನ್ನಡ ಚಿತ್ರ ಈಗ ಅಮೆಜಾನ್ ಪ್ರೈಮ್‍ನ ಓ.ಟಿ.ಟಿ. ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಆಸಕ್ತರು ಅಮೇಜಾನ್ ಪ್ರೈಮ್‍ನಲ್ಲಿ ಚಿತ್ರ ನೋಡ ಬಹುದಾಗಿದೆ.

ಅಮೃತ ಮತಿ' ಚಿತ್ರ ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನಯಶೋಧರ ಚರಿತೆ’ ಕಾವ್ಯ ಪ್ರಸಂಗ ಆಧರಿಸಿ ರೂಪುಗೊಂಡಿದೆ. ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು ಚಿತ್ರ ಅದರ ಮುಂದುವರಿಕೆಯಗಿದೆ.

ಬರಗೂರು ರಾಮಚಂದ್ರಪ್ಪ ನಿರ್ದೇಶನದ ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ, ಹರಿಪ್ರಿಯ ಅಮೃತ ಮತಿ'ಯ ಪಾತ್ರದಲ್ಲಿ ಮತ್ತು ಬಹುಭಾಷಾ ಕಲಾವಿದ ಕಿಶೋರ್ ಅವರುಯಶೋಧರ’ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆಯನ್ನು ನಿರ್ವಹಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin