ಅಂಕಿತ ಅಮರ್- ಶೈನ್ ಶೆಟ್ಟಿ ನಟನೆಯ “ಜಸ್ಟ್ ಮ್ಯಾರೀಡ್” ಚಿತ್ರ ಆಗಸ್ಟ್ 22 ರಂದು ತೆರೆಗೆ
ಕನ್ನಡದ ಸೂಪರ್ ಹಿಟ್ ಚಿತ್ರಗಳ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ “ಜಸ್ಟ್ ಮಾರೀಡ್” ಚಿತ್ರ ನಿರ್ಮಾಣ ಮಾಡಿದ್ದಾರೆ. ಸಿ.ಆರ್ ಬಾಬಿ ನಿರ್ದೇಶನ ಮಾಡಿರುವ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದ್ದು, ಆಗಸ್ಟ್ 22ರಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಈಗಾಗಲೇ ಟೀಸರ್, ಪೋಸ್ಟರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಚಿತ್ರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಪ್ರೇಮ ಕಥೆಯೊಂದಿಗೆ, ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ “ಬಿಗ್ ಬಾಸ್” ಖ್ಯಾತಿಯ ಶೈನ್ ಶೆಟ್ಟಿ ಹಾಗೂ ನಾಯಕಿಯಾಗಿ ಅಂಕಿತ ಅಮರ್ ಅಭಿನಯಿಸಿದ್ದಾರೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಆರು ಸುಮಧುರ ಹಾಡುಗಳಿರುವ “ಜಸ್ಟ್ ಮ್ಯಾರೀಡ್” ಗೆ ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅಡಿಷನಲ್ ಸ್ಕ್ರೀನ್ ಪ್ಲೇ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.
ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.

