Appu Cup Season-2 Sandalwood Badminton League Logo Unveiled

ಅಪ್ಪು ಕಪ್ ಸೀಸನ್-2 ಸ್ಯಾಂಡಲ್‍ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ - CineNewsKannada.com

ಅಪ್ಪು ಕಪ್ ಸೀಸನ್-2 ಸ್ಯಾಂಡಲ್‍ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಲಾಗಿರುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣವಾಗಿದೆ.

ಭಾರತೀಯ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ ಲೋಗೋ ಅನಾವರಣ ಮಾಡಿ ಆಟಗಾರರಿಗೆ ಶುಭಾಶಯ ಕೋರಿದರು. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ರಾಜೇಶ್ ರೆಡ್ಡಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ.ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ಲಾಂಛನ ಅನಾವರಣ ಮಾಡಿದ ಬಳಿಕ ಮಾತನಾಡಿದ ಪ್ರಕಾಶ್ ಪಡುಕೋಣೆ, ಪುನೀತ್ ರಾಜ್ ಕುಮಾರ್ ಅವರು ನನಗೆ ವೈಯಕ್ತಿಕವಾಗಿ ಪರಿಚಯವಾಗಿದ್ದವರು. ಸ್ನೇಹಜೀವಿ. ಐದಾರು ವರ್ಷದ ಹಿಂದೆ ನಾವೊಂದು ಕಾರ್ಯಕ್ರಮ ಮಾಡಿದ್ದೆವು. ಒಂದೇ ಒಂದು ಫೋನ್ ಕಾಲ್‍ಗೆ ಬಂದು ನಮ್ಮ ಜೊತೆ ಎಕ್ಸಿಬ್ಯೂಷನ್ ಮ್ಯಾಚ್ ಆಡಿದ್ದರು. ಸ್ಯಾಂಡಲ್ ವುಡ್ ಇಂಡಸ್ಟ್ರೀಯಲ್ಲಿ ತುಂಬಾ ಜನ ಬ್ಯಾಡ್ಮಿಂಟನ್ ಆಡುತ್ತಾರೆ ಅನ್ನೋದನ್ನು ಕೇಳಿ ಖುಷಿ ಆಯ್ತು. ಅಪ್ಪು ಕಪ್ ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಹೀಗೆ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟರು.

ಕನ್ನಡ ಕಲಾವಿದರು, ತಂತ್ರಜ್ಞನರು ಹಾಗೂ ಮಾಧ್ಯಮದವರು ಆಡಲಿರುವ ಈ ಪಂದ್ಯಾವಳಿ ಆಗಸ್ಟ್ ತಿಂಗಳಾಂತ್ಯಕ್ಕೆ ಶುರುವಾಗಲಿದೆ.

ಕಳೆದ ಬಾರಿ ಒಟ್ಟು ಎಂಟು ತಂಡಗಳು ಭಾಗಿಯಾಗಿದ್ದವು. ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡದ ಪೈಕಿ ಸೃಜನ್ ಲೋಕೇಶ್ ನೇತೃತ್ವದ ರಾಜ್ ಕುಮಾರ ಕಿಂಗ್ಸ್ ಕಳೆದ ಬಾರಿ ಗೆಲುವು ಸಾಧಿಸಿತ್ತು.
ಈ ಬಾರಿ ಮತ್ತಷ್ಟು ತಾರೆಯರು ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಮೆರಗು ಹೆಚ್ಚಿಸಲಿದ್ದಾರೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin