“ರಕ್ಕಿ” ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಚಾಲನೆ
ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಆಶೀರ್ವಾದದೊಂದಿಗೆ ಸಾಲಿಗ್ರಾಮ ಸುರೇಶ್ ನಿರ್ಮಿಸುತ್ತಿರುವ, ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ “ರಕ್ಕಿ” ನಾಯಕನಾಗಿ ನಟಿಸುತ್ತಿರುವ “ರಕ್ಕಿ” ಚಿತ್ರ ಸೆಟ್ಟೇರಿದೆ.

ಅಶ್ವಿನಿ ಪುನೀತ್ ರಾಜಕುಮಾರ್ ಮೊದಲ ಸನ್ನಿವೇಶಕ್ಕೆ ಆರಂಭಫಲಕ ತೋರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಚಿತ್ರತಂಡದ ಹಲವು ಸದಸ್ಯರು ಉಪಸ್ಥಿತರಿದ್ದರು.ಜರ್ಮನ್ ನಲ್ಲಿ ನೆಲೆಸಿರುವ ಸಾಲಿಗ್ರಾಮ ಮೂಲದ ಸುರೇಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸುರೇಶ್ ಪುತ್ರ ರಕ್ಕಿ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.
ಈ ವೇಳೆ ಮಾತಿಗಳಿದ ನಿರ್ದೇಶಕ ವೆಂಕಟ್ ಭಾರಧ್ವಜ್,. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ಬೆಂಗಳೂರಿನಲ್ಲಿ ನಿರ್ಮಿಸಿರುವ ಅದ್ದೂರಿ ಸೆಟ್ ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. “ರಕ್ಕಿ” ಎಂದರೆ ಹಚ್ಚಿರುವ ಪಟಾಕಿ ಇದ್ದ ಹಾಗೆ. ಯಾವಾಗ ಸಿಡಿಯುತ್ತದೆ ಗೊತ್ತಿಲ್ಲ. ಚಿತ್ರದಲ್ಲಿ ನಾಯಕನ ಪಾತ್ರ ಕೂಡ ಹೀಗೆ ಇರುತ್ತದೆ. ಆಶಿಕಾ ಸೋಮಶೇಖರ್, ಪಲ್ಲವಿ ಮಂಜುನಾಥ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಬಿ.ಸುರೇಶ್, ಹರಿಣಿ ಶ್ರೀಕಾಂತ್, ಸುಂದರರಾಜ್, ರಮೇಶ್ ಪಂಡಿತ್, ಸಂಪತ್ ಮೈತ್ರೇಯ, ಗಂಟೆ ಗೋವಿಂದ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದರು
ಲೋಕಿ ತವಸ್ಯ ಸಂಗೀತ, ಐಸ್ಸಾಕ್ಸ್ ಪ್ರಭಾಕರ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಲಾರೆನ್ಸ್ ಪ್ರೀತಮ್ ಸಹ ನಿರ್ದೇಶನ “ರಕ್ಕಿ” ಚಿತ್ರಕ್ಕಿದೆ ಎಂದು ಮಾಹಿತಿ ಹಂಚಿಕೊಂಡರು
ನಾಯಕ ರಕ್ಕಿ ಮಾತನಾಡಿ ಜರ್ಮನ್ ನಲ್ಲಿ ಎಂಜಿನಿಯರಿಂಗ್ ಮುಗಿಸಿ ಉದ್ಯೋಗ ಮಾಡುತ್ತಿದ್ದೇನೆ. ನಟನೆ ನನಗೆ ಇಷ್ಟ. ನಾಯಕನಾಗಲು ಬೇಕಾದ ಪೂರ್ವ ತಯಾರಿ ಮಾಡಿಕೊಂಡು ಚಿತ್ರದಲ್ಲಿ ನಟಿಸುತ್ತಿದ್ದೇನೆ.ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು

ನಿರ್ಮಾಪಕ ಸಾಲಿಗ್ರಾಮ ಸುರೇಶ್ ಮಾತನಾಡಿ ಐಟಿ ಉದ್ಯೋಗಿ. ಇಪ್ಪತ್ತು ವರ್ಷಗಳಿಂದ ಜರ್ಮನಿಯಲ್ಲಿದ್ದೇನೆ, ತಂದೆ ರಾಜಶೇಖರ್ ಅವರು ಡಾ.ರಾಜಕುಮಾರ್ ಅಭಿನಯದ “ಹೊಸಬೆಳಕು” ಚಿತ್ರ ನಿರ್ಮಾಣ ಮಾಡಿದ್ದರು. ಈಗ “ರಕ್ಕಿ” ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ಮಗ “ರಕ್ಕಿ” ನಾಯಕನಾಗಿ ನಟಿಸುತ್ತಿದ್ದಾನೆ. ನಿರ್ದೇಶಕ ವೆಂಕಟ್ ವೆಂಕಟ್ ಭಾರದ್ವಾಜ್ ಎರಡು ಕಥೆ ಸಿದ್ದ ಮಾಡಿಕೊಂಡಿದ್ದರು. ಕುಟುಂಬದ ಸ್ನೇಹಿತರಾದ ಅಶ್ವಿನಿ ಪುನೀತ್ ರಾಜಕುಮಾರ್ಹತ್ತಿರ ಕಥೆ ಹೇಳಿ, ಅವರು ಒಪ್ಪುವ ಕಥೆಯನ್ನು ಚಿತ್ರ ಮಾಡೋಣ ಎಂದು ವೆಂಕಟ್ ಭಾರದ್ವಾಜ್ ಅವರಿಗೆ ಹೇಳಿದ್ದೆ. ಈ ಕಥೆಯನ್ನು ಅಶ್ವಿನಿ ಅವರು ಒಪ್ಪಿಕೊಂಡರು. ಈಗ ಚಿತ್ರೀಕರಣ ಆರಂಭ ಮಾಡುತ್ತಿದ್ದೇವೆ ಎಂದು ಹೇಳಿದರು
ನಟ ಬಿ.ಸುರೇಶ್ ಮಾತನಾಡಿ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಡ್ಯಾನಿ. ಭೂಗತ ಲೋಕದ ದೊರೆಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕರು ಹೇಳಿದ ಕಥೆ ಚೆನ್ನಾಗಿದೆ. ಚಿತ್ರ ಹತ್ತರಲ್ಲಿ ಒಂದು ಆಗುವುದು ಬೇಡ. ಇದೇ ಒಂದು ಆಗಲಿ ಎಂದು ತಿಳಿಸಿದರು.

ನಾಯಕಿಯರಾದ ಆಶಿಕಾ ಸೋಮಶೇಖರ್, ಪಲ್ಲವಿ ಮಂಜುನಾಥ್ ಹಾಗೂ ನಟಿ ಹರಿಣಿ ಶ್ರೀಕಾಂತ್ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.

