Ashwini Puneeth Rajkumar Releases New Effort of Non-resident Kannadigas "Honey Honey" Album Song

ಅನಿವಾಸಿ ಕನ್ನಡಿಗರ ಹೊಸ ಪ್ರಯತ್ನ “ಹನಿ ಹನಿ” ಆಲ್ಬಂ ಹಾಡು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಿಡುಗಡೆ - CineNewsKannada.com

ಅನಿವಾಸಿ ಕನ್ನಡಿಗರ ಹೊಸ ಪ್ರಯತ್ನ “ಹನಿ ಹನಿ” ಆಲ್ಬಂ ಹಾಡು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಿಡುಗಡೆ

ಕನ್ನಡದಲ್ಲಿ ಹೊಸ ಹೊಸ ಪ್ರಯತ್ನಗಳು ಆಗುತ್ತಿವೆ. ಜೊತೆಗೆ ಹೊಸ ಪ್ರತಿಭೆಗಳು ಅದೃಷ್ಠ ಕಂಡುಕೊಳ್ಳುವ ಜೊತೆಗೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಇದರ ಸಾಲಿಗೆ ಅನಿವಾಸಿ ಕನ್ನಡಿಗರ “ ಹನಿ ಹನಿ” ಆಲ್ಬಂ ಹಾಡು ಹೊಸ ಸೇರ್ಪಡೆಯಾಗಿದೆ.

ಹನಿ ಹನಿ ಆಲ್ಬಂ ಹಾಡನ್ನು ಮೊದಲ ಬಾರಿಗೆ ಯೂರೋಪ್ ನಲ್ಲಿ ಚಿತ್ರೀಕರಣ ಮಾಡಿದ ಮೊದಲ ಕನ್ನಡದ ಆಲ್ಬಂ ಹಾಡು ಎನ್ನುವ ಹಿರಿಮೆಗೆ ಪಾತ್ರವಾಗಿದೆ.

ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಗೌರವ ಕಾರ್ಯದರ್ಶಿ ಭಾ.ಮ.ಗಿರೀಶ್ ಹಾಗೂ ಹಿರಿಯ ನಿರ್ಮಾಪಕ ಎಸ್ ಎ ಚಿನ್ನೇಗೌಡ ಮತ್ತಿತರರು ಶುಭ ಹಾರೈಸಿದ್ದಾರೆ

ಈ ವೇಳೆ ಮಾತನಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಹಾಡಿನಲ್ಲಿ ಅಭಿನಯಿಸಿರುವ ರಕ್ಕಿ ಸುರೇಶ್ ನಮ್ಮ ಕುಟುಂಬಕ್ಕೆ ಆಪ್ತರು. ಈ ಹಾಡಿನಲ್ಲಿ ರಕ್ಕಿ ಅವರು ಚೆನ್ನಾಗಿ ಅಭಿನಯಿಸಿದ್ದಾರೆ. ಹಾಡು ಚೆನ್ನಾಗಿದೆ. ಯಶಸ್ವಿಯಾಗಲಿ ಎಂದು
ಹಾರೈಸಿದರು.

ನಟ ರಕ್ಕಿ ಸುರೇಶ್ ಮಾತನಾಡಿ ಹುಟ್ಟಿದ್ದು ಇಲ್ಲಿ. ಆದರೆ ಬೆಳೆದದ್ದು ಜರ್ಮನ್ ನಲ್ಲಿ. ಮೈಸೂರಿನ ಬಳಿಯ ಸಾಲಿಗ್ರಾಮ ನಮ್ಮ ಊರು. ಡಾ. ರಾಜಕುಮಾರ್ ಅವರ “ಹೊಸಬೆಳಕು” ಚಿತ್ರ ನಿರ್ಮಿಸಿದ್ದ ರಾಜಶೇಖರ್ ಅವರು ನನ್ನ ತಾತಾ. ಜರ್ಮನ್ ನಲ್ಲಿ ಎಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಮುಗಿಸಿ ಐಟಿ ಉದ್ಯೋಗದಲ್ಲಿದ್ದೇನೆ. ನಟನೆ ನನ್ನ ಹವ್ಯಾಸ. ಅದರ ಮೊದಲ ಹೆಜ್ಜೆಯಾಗಿ “ಹನಿ ಹನಿ” ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಿದ್ದೇನೆ. ಹಾಡು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ಗಣ್ಯರಿಗೆ ಧನ್ಯವಾದ ಎಂದು ಕೃತಜ್ಞತೆ ಸಲ್ಲಿಸಿದರು

ನಿರ್ದೇಶಕ ರಾಘವ ರೆಡ್ಡಿ ಮಾತನಾಡಿ ಐದು ವರ್ಷಗಳಿಂದ ಜರ್ಮನ್ ನಲ್ಲಿ ವಾಸಿಸುತ್ತಿದ್ದೇನೆ. ಅನಿವಾಸಿ ಕನ್ನಡಿಗರು ಸೇರಿ ಈ ಹಾಡನ್ನು ನಿರ್ಮಿಸಿದ್ದೇವೆ. ನಾನೇ ನಿರ್ದೇಶನವನ್ನು ಮಾಡಿದ್ದೇನೆ. ಭಾರತದ ರೂಪಾಯಿ ಪ್ರಕಾರ ಹದಿನೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಹಾಡು ಯೂರೋಪ್ ನಲ್ಲಿ ಚಿತ್ರೀಕರಣಗೊಂಡಿದೆ. ರಕ್ಕಿ ಸುರೇಶ್, ಅನಾಮಿಕ ಸ್ಟಾರ್ಕ್ ದತ್ತ ಹಾಗೂ ಅಮೃತ ಮಂಡಲ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಶಾಲ್ ನೈದೃವ್ ಸಂಗೀತ ನೀಡುವುದರ ಜೊತೆಗೆ ಹಾಡಿದ್ದಾರೆ. ಆಲ್ಬರ್ಟ್ ಜೊಸ್ ಹಾಗೂ ತೇಜಸ್ ಅಹೋಬಲ ಅವರ ಛಾಯಾಗ್ರಹಣ ಈ ಹಾಡಿಗಿದೆ. ನಮ್ಮ ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡನ್ನು ನೋಡಬಹುದು ಎಂದರು

ಸಂಗೀತ ನಿರ್ದೇಶಕ ವಿಶಾಲ್ ನೈದೃವ್ ಮಾತನಾಡಿ 23 ವರ್ಷಗಳಿಂದ ಕೀ ಬೋರ್ಡ್ ಪ್ಲೇಯರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಖ್ಯಾತ ಸಂಗೀತ ನಿರ್ದೇಶಕರ ಜೊತೆಗೆ ನೂರಕ್ಕೂ ಅಧಿಕ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. “ಹನಿ ಹನಿ” ಆಲ್ಬಂ ಸಾಂಗ್ ಗೂ ಸಂಗೀತ ನೀಡಿದ್ದೇನೆ ಎಂದು ಹೇಳಿದರು. ನಿರ್ದೇಶಕ ವೆಂಕಟ್ ಹಾಗೂ ಗಿರೀಶ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin