Audio rights of "Vikasa Parva" sold for high amount

“ವಿಕಾಸ ಪರ್ವ” ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ - CineNewsKannada.com

“ವಿಕಾಸ ಪರ್ವ” ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ

ಸಾಮಾಜಿಕ ಕಳಕಳಿಯುಳ್ಳ “ವಿಕಾಸ ಪರ್ವ” ಚಿತ್ರದ ಆಡಿಯೋ ರೈಟ್ಸ್ ಹೆಸರಾಂತ ಲಹರಿ ಮ್ಯೂಸಿಕ್ ಸಂಸ್ಥೆಗೆ ಅಧಿಕ ಮೊತ್ತಕ್ಕೆ ಮಾರಾಟವಾಗಿದೆ. ಎ ಪಿ ಓ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಲಹರಿ ಮ್ಯೂಸಿಕ್ ನಲ್ಲಿ ಕೇಳಿ ಆನಂದಿಸಬಹುದು.

ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಿದ್ದವಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಾಲ ರಾಜವಾಡಿ, ಕುರಿ ರಂಗ, ಸಮೀರ್ ನಗರದ್, ವಿಘ್ನೇಶ್, ಬೇಬಿ ಬಿಲ್ವ, ಮಾಸ್ಟರ್ ಅಭಯ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಮೈಂಡ್ ಥಾಟ್ಸ್ ಮೀಡಿಯಾ ಲಾಂಛನದಲ್ಲಿ ಸಮೀರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಅನ್ಬು ಅರಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ರಾಜ್ಯ ಪ್ರಶಸ್ತಿ ವಿಜೇತ ವಿಶೃತ್ ನಾಯಕ್ ಬರೆದಿದ್ದಾರೆ ಜೊತೆಗೆ ಕಾರ್ಯಕಾರಿ ನಿರ್ಮಾಪಕರಾಗೂ ಕಾರ್ಯ ನಿರ್ವಹಿಸಿದ್ದಾರೆ.

ನವೀನ್ ಸುವರ್ಣ ಛಾಯಾಗ್ರಹಣ, ಶ್ರೀನಿವಾಸ್ ಕಲಾಲ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಧನುಕುಮಾರ್, ಜೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin