ಚಿತ್ರರಂಗದ ಅನುಪಮ ಸೇವೆಗೆ ಪ್ರಶಸ್ತಿ: ಸಾರಾ ಗೋವಿಂದು, ಜಯಮಾಲಗೆ ಗೌರವ
ಚಿತ್ರರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿರಾಜ್ಯ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿಗೆ ಹಿರಿಯ ನಿರ್ಮಾಪಕರಾದ ಸಾ ರಾ ಗೋವಿಂದು, ಜಯಮಾಲಾಗೆ ಸೇರಿದಂತೆ ಹಲವು ಗಣ್ಯರಿಗೆ 2020ನೇ ಹಾಗೂ 2021ನೇ ಸಾಲಿನ ಜೀವಮಾನದ ಸಾಧನೆ ಪ್ರಶಸ್ತಿಗಳನ್ನು ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ನಿರ್ಮಾಣ ನಿರ್ವಾಹಕ ಸಂಘದ ವತಿಯಿಂದ ಸಾರಾ ಗೋವಿಂದು ಹಾಗೂಜಯಮಾಲಾ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಚಲನಚಿತ್ರ ನಿರ್ಮಾಣ ನಿರ್ವಾಹಕ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗಿಯಾಗಿದ್ದರು

2020ನೇ ಸಾಲಿನ ‘ಡಾ. ರಾಜಕುಮಾರ್ ಪ್ರಶಸ್ತಿ’ಗೆ ನಟಿ ಜಯಮಾಲಾ, ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ನಿರ್ದೇಶಕ ಎಂ.ಎಸ್. ಸತ್ಯು, ‘ಡಾ.ವಿಷ್ಣುವರ್ಧನ್ ಪ್ರಶಸ್ತಿ’ಗೆ ಸ್ಥಿರ ಛಾಯಾಗ್ರಾಹಕ ‘ಪ್ರಗತಿ’ ಅಶ್ವತ್ಥನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.
2021ನೇ ಸಾಲಿನ ‘ಡಾ. ರಾಜಕುಮಾರ್ ಪ್ರಶಸ್ತಿ’ಗೆ ನಿರ್ಮಾಪಕ ಸಾ.ರಾ. ಗೋವಿಂದು, ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ನಿರ್ದೇಶಕ ಕೆ. ಶಿವರುದ್ರಯ್ಯ, ‘ಡಾ.ವಿಷ್ಣುವರ್ಧನ್ ಪ್ರಶಸ್ತಿ’ಗೆ ನಟ – ನಿರ್ಮಾಪಕ ಎಂ.ಕೆ. ಸುಂದರ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೂರೂ ಪ್ರಶಸ್ತಿಗಳು ತಲಾ 5 ಲಕ್ಷ ನಗದು ಮತ್ತು 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ

