Badshah Kichcha Sudeep's 'Mark' to release on December 25th
ಬಾದ್‍ಶಾ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಡಿಸೆಂಬರ್ 25ಕ್ಕೆ ಬಿಡುಗಡೆ
ಮ್ಯಾಕ್ಸ್ ಚಿತ್ರದ ಯಶಸ್ಸಿನ ನಂತರ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಚಿತ್ರ ಡಿಸೆಂಬರ್ 25ಕ್ಕೆ ತೆರೆಗೆ ಬರಲು ಸಜ್ಜಾಗಿದೆ, ಈ ನಡುವೆ ಏರ್‍ಟೆಲ್, ಬಾರಿಗೆ ಕನ್ನಡ ಸಿನಿಮಾವೊಂದರ ಜೊತೆ ಅಧಿಕೃತವಾಗಿ ಕೈಜೋಡಿಸಿದೆ.
ಮಾರ್ಕ್ ಚಿತ್ರ ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಒಪ್ಪಂದ ಭಾಗವಾಗಿ ‘9 ಸೀರೀಸ್’ ನಂಬರ್‍ಗಳಿರುವ ಸಿಮ್ ಕಾರ್ಡ್‍ಗಳನ್ನು ಪಡೆಯಬಹುದು.ಅಭಿಮಾನಿಗಳಿಗಾಗಿ ವಿಶೇಷ ಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಇದರಲ್ಲಿ ಗೆಲ್ಲುವ 100 ಅದೃಷ್ಟಶಾಲಿಗಳಿಗೆ ‘ಮಾರ್ಕ್’ ಚಿತ್ರದ ಉಚಿತ ಟಿಕೆಟ್ ಬಹುಮಾನವಾಗಿ ನೀಡಲಾಗುವುದು.
ಕಿಚ್ಚ ಸುದೀಪ್ ಏರ್‍ಟೆಲ್ ಕರ್ನಾಟಕದ ಸಿಇಒ ರಜನೀಶ್ ವರ್ಮಾ ಅವರನ್ನು ಭೇಟಿ ಮಾಡಿದರು. ವಿಜಯ್ ಕಾರ್ತಿಕೇಯನ್ ನಿರ್ದೇಶನದ ಚಿತ್ರವನ್ನು ಸತ್ಯಜ್ಯೋತಿ ಫಿಲ್ಮ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ.

