ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ : ಕೆಜಿಎಫ್ – 2 ಚಿತ್ರಕ್ಕೂ ಗೌರವ ; ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಗೆ ಡಬ್ಬಲ್ ಸಂಭ್ರಮ
ಈ ಬಾರಿಯ 70 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಭಾಗದಲ್ಲಿ ಗೌರವಕ್ಕೆ ಪಾತ್ರವಾಗಿದ್ದ ” ಕಾಂತಾರ” ಚಿತ್ರದ ಅತ್ಯುತ್ತಮ ನಟನೆಗಾಗಿ ರಿಷಬ್ ಶೆಟ್ಟಿ ಹಾಗು ಕೆಜಿಎಫ್ – 2 ಚಿತ್ರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆಗೆ ಒಂದೇ ವರ್ಷದ ಪ್ರಶಸ್ತಿ ವಿಭಾಗದಲ್ಲಿ ಡಬ್ಬಲ್ ಸಂಭ್ರಮದಲ್ಲಿದೆ. ಹೊಂಬಾಳೆ ಸಂಸ್ಥೆಯ ಕಾಂತಾರ ಮತ್ತು ಕೆಜಿಎಫ್ – 2 ಚಿತ್ರಗಳಿಗೆ ಪ್ರಶಸ್ತಿ ಬಂದಿರುವುದು ಕನ್ನಡದ ನಿರ್ಮಾಣ ಸಂಸ್ಥೆ ಹಾಗು ಚಿತ್ರರಂಗಕ್ಕೆ ಸಂದ ಗೌರವಾಗಿದೆ.
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ “ಕೆ.ಜಿ.ಎಫ್ -2 ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ನಿರ್ಮಾಪಕರಲ್ಲಿ ಒಬ್ಬರಾದ ಶೈಲಜಾ ವಿಜಯ್ ಕಿರಂಗದೂರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕಾರ ಮಾಡಿದರು
ಕೆಜಿಎಫ್ – 2 ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದರು.
“ಕೆ.ಜಿ.ಎಫ್ ೨” ನಂತಹ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ನಿರ್ಮಾಪಕ ವಿಜಯ್ ಕಿರಗಂದೂರು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು.
ಕಾಂತಾರ ಚಿತ್ರವನ್ನು ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿದ್ದರು. ಕೆಜಿಎಫ್ – 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದರು. ಈ ಎರಡೂ ಚಿತ್ರಗಳನ್ನು ವಿಜಯ್ ಕಿರಂಗದೂರು ಅವರು ಹೊಂಬಾಳೆ ಫಿಲ್ಮ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದರು.
ಈ ಎರಡೂ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದವು. ಜೊತೆಗೆ ದೇಶ ವಿದೇಶಗಳಲ್ಲಿ ಗಮನ ಸೆಳೆದಿದ್ದವು. ಇದರ ಬೆನ್ನಲ್ಲೇ 70ನೇ ರಾಷ್ಟ್ರೀಯ ಚಲನ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದವು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
.