"Bhairati Rangal" teaser gift for veteran actor Shivanna's birthday

ಹಿರಿಯ ನಟ ಶಿವಣ್ಣನ ಹುಟ್ಟುಹಬ್ಬಕ್ಕೆ “ಭೈರತಿ ರಣಗಲ್” ಚಿತ್ರದ ಟೀಸರ್ ಉಡುಗೊರೆ - CineNewsKannada.com

ಹಿರಿಯ ನಟ ಶಿವಣ್ಣನ ಹುಟ್ಟುಹಬ್ಬಕ್ಕೆ “ಭೈರತಿ ರಣಗಲ್” ಚಿತ್ರದ ಟೀಸರ್ ಉಡುಗೊರೆ

ನರ್ತನ್ ನಿರ್ದೇಶನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದೆ ಭೈರತಿ ರಣಗಲ್ ಸಿನಿಮಾ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಈ ಸಿನಿಮಾ ಇದೀಗ, ದೊಡ್ಡ ಅಚ್ಚರಿಯೊಂದನ್ನು ಎಲ್ಲರೆದಿರಿಡಲು ಸಿದ್ಧತೆ ನಡೆಸಿದೆ. ಅಂದರೆ ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಈ ಟೀಸರ್ ಅನ್ನು ಮೊದಲ ತೀರ್ಪುಎಂದು ಚಿತ್ರತಂಡ ಕರೆದುಕೊಂಡಿದೆ.

ಗೀತಾ ಪಿಕ್ಚರ್ಸ್ ಅಡಿಯಲ್ಲಿ ಭೈರತಿ ರಣಗಲ್ ಸಿನಿಮಾವನ್ನು ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ವೇದ ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದು.

ಅಂದಹಾಗೆ ಮಫ್ತಿ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ಲಾಯರ್ ಆಗಿ ಎದುರಾಗಿದ್ದಾರೆ ಶಿವಣ್ಣ.

ಆನಂದ್ ಆಡಿಯೋ ಸಂಸ್ಥೆ ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು. ಇದೀಗ ಚಿತ್ರದ ಜೊತೆ ಕೈ ಜೋಡಿಸಿರುವುದು ನಮಗೂ ಖುಷಿ ತಂದಿದೆ. ಪ್ರಚಾರ ಕೆಲಸವೂ ದೊಡ್ಡ ಮಟ್ಟದಲ್ಲಿಯೇ ಸಾಗಲಿದೆ ಎಂದಿದ್ದಾರೆ ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ.

ಕೆಲ ಮೂಲಗಳ ಪ್ರಕಾರ, ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ ಆನಂದ್ ಆಡಿಯೋ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin