Birthday celebration for a friendly person of Kannada film industry: Ramesh Aravind got even younger

ಕನ್ನಡ ಚಿತ್ರರಂಗದ ಸ್ನೇಹಿಮಯಿ ವ್ಯಕ್ತಿಗೆ ಹುಟ್ಟುಹಬ್ಬದ ಸಂಭ್ರಮ: ಮತ್ತಷ್ಟು ಯಂಗ್ ಆದ ರಮೇಶ್ ಅರವಿಂದ್ - CineNewsKannada.com

ಕನ್ನಡ ಚಿತ್ರರಂಗದ ಸ್ನೇಹಿಮಯಿ ವ್ಯಕ್ತಿಗೆ ಹುಟ್ಟುಹಬ್ಬದ ಸಂಭ್ರಮ: ಮತ್ತಷ್ಟು ಯಂಗ್ ಆದ ರಮೇಶ್ ಅರವಿಂದ್

ಕನ್ನಡ‌ ಚಿತ್ರರಂಗದ ಸಂಭಾವಿತ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನದ ರುವಾರಿ ರಮೇಶ್ ಅರವಿಂದ್ ಅವರಿಗೆ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಖುಷಿಯಲ್ಲಿ ರಮೇಶ್ ಅರವಿಂದ್ ಮತ್ತಷ್ಟು ಯಂಗ್ ಅಂಡ್ ಎನರ್ಜಿಟ್ ಆಗಿ ಕಾಣುತ್ತಿದ್ದಾರೆ.

ರಮೇಶ್ ಅರವಿಂದ್ ಪ್ರತಿಭಾನ್ವಿತ ಕಲಾವಿದ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕ, ನಿರೂಪಕ, ವ್ಯಕ್ತಿತ್ವ ವಿಕಸನ ಉಪನ್ಯಾಸಕ ಹೀಗೆ ಹೇಳುತ್ತಾ ಹೋದರೆ ಅವರೊಬ್ಬ ಬಹುಮುಖ ಪ್ರತಿಭೆ. ಪ್ರತಿಭಾನ್ವಿತ ಸಜ್ಜನ ನಟ ಎನಿಸಿಕೊಂಡಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್‍ ಜನುಮದಿನದ ಸಂಭ್ರಮದಲ್ಲಿದ್ದಾರೆ.

ರಮೇಶ್ ಅರವಿಂದ್ ಅಂದ ತಕ್ಷಣ ಎಲ್ಲರಿಗೂ ನೆನಪಾಗುವುದು ಅವರ ಮನೋಜ್ಞ ನಟನೆ. ತ್ಯಾಗಮಯಿ ಪಾತ್ರಗಳಿಂದಲೇ ಜನಪ್ರಿಯರಾದ ರಮೇಶ್ ಅರವಿಂದ್ ಇಂದಿಗೂ ಕೂಡ ಬೇಡಿಕೆಯ ನಟ. ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ಪೆಷಲ್ ಆಗಿ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಮೇಶ್ ಅರವಿಂದ್ ಅವರ ಜನ್ಮದಿನದ ಸಂದರ್ಭಗಳಲ್ಲಿ. ರೆಟ್ರೋ ಲುಕ್ ನಲ್ಲಿ ಕ್ಯಾಮೆರಾಗೆ ತರೇಹವಾರಿ ಪೋಸ್ ಕೊಟ್ಟಿದ್ದಾರೆ. ಖ್ಯಾತ ಕಾಸ್ಟ್ಯೂಮ್ ಡಿಸೈನರ್ ಭರತ್ ರಾಮದಾಸ್ ಬಟ್ಟೆಯಲ್ಲಿ ರಮೇಶ್ ಚಿರಯುವಕನಂತೆ ಕಂಗೊಳಿಸಿದ್ದಾರೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಗ್ ಬಾಸ್ ನಲ್ಲಿ ತೊಡುವ ಸ್ಟೈಲೀಶ್ ಕಾಸ್ಟ್ಯೂಮ್ ಗಳನ್ನು ನೀವೆಲ್ಲಾ ನೋಡೇ ಇರ್ತಿರಾ. ವೀಕೆಂಡ್ ನಲ್ಲಿ ಸಖತ್ ಡಿಫರೆಂಟ್ ಕಾಸ್ಟ್ಯೂಮ್ ನಲ್ಲಿ ಕಿಚ್ಚ ಕಾಣಿಸಿಕೊಳ್ತಿದ್ದರು. ಕಿಚ್ಚನ ಆ ಸ್ಟೈಲೀಶ್ ಅವತಾರದ ಹಿಂದಿನ ರೂವಾರಿಯೇ ಈ ಭರತ್.. ಭರತ್ ಕಿಚ್ಚನಿಗೆ ಮಾತ್ರವಲ್ಲ ಸಾಕಷ್ಟು ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಕಾಸ್ಟ್ಯೂಮ್ ಡಿಸೈನರ್ ಭರತ್.

ಇದೀಗ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರನ್ನು ಮತ್ತಷ್ಟು ಯಂಗ್ ಆಗಿ ಕಾಣುವಂತೆ ಸೆರೆಹಿಡಿದಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin