Birthday wishes to Golden Star Ganesh from the team of "Pinaka"

“ಪಿನಾಕ” ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್‍ಗೆ ಹುಟ್ಟುಹಬ್ಬದ ಶುಭಾಶಯ - CineNewsKannada.com

“ಪಿನಾಕ” ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್‍ಗೆ ಹುಟ್ಟುಹಬ್ಬದ ಶುಭಾಶಯ

ಹೆಸರಾಂತ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯಡಿ ಟಿ.ಜಿ. ವಿಶ್ವಪ್ರಸಾದ್ ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಗಣೇಶ್ ಅವರ ಹೊಸ ಲುಕ್ ಗೆ ಈಗಾಗಲೇ ಅಭಿಮಾನಿಗಳು ಫಿದಾ ಆಗಿದ್ದಾರೆ.

ನೆಲಮಂಗಲದ ಬಳಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್‍ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಗಣೇಶ್ ಅವರು ಸಹ ಈ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜನ್ಮದಿನ. ಈ ಸಂದರ್ಭದಲ್ಲಿ ವಿಶೇಷವಾದ ಪೆÇೀಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ಚಿತ್ರದ ನಾಯಕ ಗಣೇಶ್ ಅವರಿಗೆ “ಪಿನಾಕ” ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin