ಮಾಚ್ 8 ಕ್ಕೆ “ ಬ್ಲಿಂಕ್” ಚಿತ್ರ ಬಿಡುಗಡೆ
ರವಿಚಂದ್ರ ಎ ಜೆ ನಿರ್ಮಾಣದ ದೀಕ್ಷಿತ್ ಶೆಟ್ಟಿ ಹಾಗೂ ಚೈತ್ರ ಆಚರ್ ಮುಖ್ಯಭೂಮಿಯಲ್ಲಿ ನಟಿಸಿರುವ ಬ್ಲಿಂಕ್ ಚಿತ್ರತಂಡ , ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ ಮಾರ್ಚ್ 8ರಂದು ಮಹಿಳಾ ದಿನಾಚಾರಣೆಗೆ ಚಿತ್ರ ತೆರೆಗೆ ಬರುತ್ತಿದೆ.
ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು , “ಜನರಿಂದಲೇ ಸಿನಿಮಾ , ಜನರೇ ಸಿನಿಮಾ” ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ..
ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ , ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ.ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡ ಮಾರ್ಚ್ 8 ಕ್ಕೆ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ ..
ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರ ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತ ಎಂದು ನಿರ್ಮಾಪಕ ರವಿಚಂದ್ರ ಎ ಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ನಿರ್ದೇಶಕ ಶ್ರೀನಿಧಿ ಬೆಂಗಳೂರು, ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರುರವರು, ಇದೊಂದು ಕಾಲ್ಪನಿಕ ಕಥೆಯಾಗಿದ್ದು ..ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆಕಂಡಿದ್ದು ಈ ಚಿತ್ರ ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದಿದ್ದಾರೆ
ದಿಯಾ,ದಸರಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ.. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ.ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ ಹಾಗೂ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ , ಕಿರಣ್ ನಾಯ್ಕ್ , ಮುರುಳಿ ಶೃಂಗೇರಿ , ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ …
ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ಸಂಗೀತ ನಿರ್ದೇಶನವಿದ್ದು , ಅವಿನಾಶ ಶಾಸ್ರ್ತಿರವರ ಕ್ಯಾಮೆರಾ ಕೈ ಚಳಕವಿದೆ. ಹಾಗೂ ಸಂಜೀವ್ ಜಾಗೀರ್ದಾರ್ ಸಂಕಲನವಿದೆ.