Bollywood actress came to Sandalwood to shoot the song “Apsara Rani”

ಸ್ಯಾಂಡಲ್‍ವುಡ್‍ಗೆ ಬಂದ ಬಾಲಿವುಟ್ ನಟಿ “ಅಪ್ಸರ ರಾಣಿ”: ಮುದುಡಿದ ಎಲೆಗಳು” ಹಾಡಿನ ಚಿತ್ರೀಕರಣ - CineNewsKannada.com

ಸ್ಯಾಂಡಲ್‍ವುಡ್‍ಗೆ ಬಂದ ಬಾಲಿವುಟ್ ನಟಿ “ಅಪ್ಸರ ರಾಣಿ”: ಮುದುಡಿದ ಎಲೆಗಳು” ಹಾಡಿನ ಚಿತ್ರೀಕರಣ

ಹಿಂದಿ ಹಾಗೂ ತೆಲುಗು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಹಾಗೂ ರಾಮ್ ಗೋಪಾಲ್ ವರ್ಮ ಅವರ “ಡೇಂಜರಸ್” ಚಿತ್ರದ ಮೂಲಕ ಜನಪ್ರಿಯರಾಗಿರುವ ನಟಿ ಅಪ್ಸರ ರಾಣಿ ಇದೇ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಎಂ.ಶಂಕರ್ ನಿರ್ದೇಶನ ಹಾಗೂ ನಿರ್ಮಾಣದ “ಮುದುಡಿದ ಎಲೆಗಳು” ಚಿತ್ರದ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅಪ್ಸರ ರಾಣಿ ಅವರು ಅಭಿನಯಿಸಿದ ಹಾಡಿನ ಚಿತ್ರೀಕರಣ ಇತ್ತೀಚಿಗೆ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆಯಿತು.

ದುಬಾರಿ ಕಾರೊಂದರಲ್ಲಿ ಕಾಲೇಜ್‍ಗೆ ಕಾಲಿಟ್ಟ ಹುಡುಗಿಯ ಸೌಂದರ್ಯ ಹಾಗೂ ಸ್ಟೈಲ್‍ಗೆ ಕಾಲೇಜು ಹುಡುಗರು ಮಾರು ಹೋಗುತ್ತಾರೆ. ಹೊಸದಾಗಿ ಕಾಲೇಜು ಸೇರಿರುವ ಹುಡುಗಿ ಇರಬಹುದು ಎಂದು ಹುಡುಗರು ಆಲೋಚಿಸುತ್ತಿದ್ದಾಗ, ಅವರು ಕಾಲೇಜು ಸೇರಲು ಬಂದಿರುವ ಹುಡುಗಿಯಲ್ಲ. ಕೆಮಿಸ್ಟ್ರಿ ಟೀಚರ್ ಅಂತ ಗೊತ್ತಾಗುತ್ತದೆ. ಇದನ್ನು ನಿರ್ದೇಶಕರು ಹಾಡಿನ ಮೂಲಕ ತೋರಿಸಿದ್ದಾರೆ. ಭಜರಂಗಿ ಮೋಹನ್ ನೃತ್ಯ ಸಂಯೋಜಿಸಿದ ಈ ಹಾಡಿನಲ್ಲಿ ಅಪ್ಸರ ರಾಣಿ, ರಂಜಿತ್ ಕುಮಾರ್ ಹಾಗೂ ಪಂಕಜ್ ನಾರಾಯಣ್ ಅಭಿನಯಿಸಿದ್ದರು.

Apsara Rani

“ಮುದುಡಿದ ಎಲೆಗಳು” ಚಿತ್ರಕ್ಕೆ ಈಗಾಗಲೇ ಎಂಭತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿಯದೆ. ಒಂದು ಹಾಡಿನ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಮತ್ತೊಂದು ಹಾಡು ತಜಿಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ.

ರಿಯೋ ಪ್ರೊಡಕ್ಷನ್ಸ್ ಫಿಲಂ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವ ಎಂ ಶಂಕರ್ ಅವರೆ “ಮುದುಡಿದ ಎಲೆಗಳು” ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ರಂಜನಿ ಈ ಚಿತ್ರದ ಸಹ ನಿರ್ಮಾಪಕಿ. ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ಯಾಮ್ ಸಿಂಧನೂರು ಅವರ ಛಾಯಾಗ್ರಹಣವಿದೆ

Apsara Rani in Mududida elegalu

ರಂಜಿತ್ ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಪಂಕಜ್ ನಾರಾಯಣ್, ಪಾವನ ಗೌಡ, ನಿಕಿತಾ ಸ್ವಾಮಿ, ಸೂರ್ಯದರ್ಶನ್, ಪ್ರೀತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಅಪ್ಸರ ರಾಣಿ, ಹರ್ಷಿಕಾ ಪೂಣಚ್ಛ, ರಮೇಶ್ ಭಟ್, ಭವ್ಯ, ಶೋಭ್ ರಾಜ್, ಶಂಕರ್ ಅಶ್ವತ್ಥ್, ಪೂನಂ ಪಾಂಡೆ, ಪದ್ಮಾ ವಾಸಂತಿ, ಜೋಸೈಮನ್ ಮುಂತಾದವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin