ಚಂದನವನಕ್ಕೆ ಬಂದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್: ಹೊಸ ಚಿತ್ರದಲ್ಲಿ ನಟನೆ
ಕೆಜಿಎಫ್, ಕಾಂತಾರ ಚಿತ್ರ ಕನ್ನಡದ ಚಿತ್ರರಂಗದ ದಿಕ್ಕು ದೆಸೆಯನ್ನೇ ಬದಲಿಸಿ ಬಿಟ್ಟಿದೆ. ಕನ್ನಡ ಚಿತ್ರರಂಗದ ಬಗ್ಗೆ ಅಸಡ್ಡೆ ತಿರಸ್ಕಾರ ಮನೋಭಾವನೆಯಿಂದ ನೋಡುತ್ತಿದ್ದ ಮಂದಿ ಚಿತ್ರರಂಗವನ್ನು ಅಪ್ಪಿ ಒಪ್ಪಿಕೊಳ್ಳುತ್ತಿದ್ದಾರೆ

ಇದೀಗ ಬಾಲಿವುಡ್ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಚಂದನವನಕ್ಕೆ ಪ್ರವೇಶ ಮಾಡಿದ್ದಾರೆ.ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮಾ ನಿರ್ಮಾಪಕರು,ನಿರ್ದೇಶಕರು , ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ.
ಅನುರಾಗ್ ಕಶ್ಯಪ್ ದಕ್ಷಿಣದ ಕಡೆಗೆ ಬಂದಾಗಿದೆ. ತಮಿಳಿನ “ಮಹಾರಾಜ” ಚಿತ್ರದಲ್ಲಿ ಅದ್ಭುತ ಪಾತ್ರದಲ್ಲಿ ಗಮನಸೆಳೆದಿದ್ದಾರೆ. ಈ ಮೂಲಕ ತಮಿಳು ಪ್ರೇಕ್ಷಕರನ್ನ ರಂಜಿಸಿದ್ದಾರೆ. ತೆಲುಗಿನ “ಡಕಾಯಿತ್” ಚಿತ್ರದಲ್ಲಿ ಕಪಟ ಪೊಲೀಸ್ ಆಫೀಸರ್ ನಟಿಸಿರುವ ಅವರೀಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ

ಹಾಸ್ಯ ನಟ-ನಿರ್ದೇಶಕ ಸುಜಯ್ ಶಾಸ್ತ್ರಿ ನಿರ್ದೇಶನದ ಹೊಸ ಚಿತ್ರದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ.ಈ ಮೂಲಕ ಒಂದು ಒಳ್ಳೆ ಕಥೆಯನ್ನ ಹೇಳುತ್ತಿದ್ದಾರೆ. 8 ಸಿನಿಮಾದ ಶೀರ್ಷಿಕೆ ಬಿಡುಗಡೆಯಾಗಿದೆ.
ನಿರ್ದೇಶಕ ಕಮ್ ನಟ ಅನುರಾಗ್ ಕಶ್ಯಪ್ ಮಾತನಾಡಿ, ಇದೊಂದು ಎಮೋಷನಲ್ ಕಥೆ. ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಚಿತ್ರ ಕೂಡ ಅದನ್ನೇ ಹೇಳುತ್ತದೆ. ಅರವಿಂದ್ ಹಾಗೂ ಸುಜಯ್ ಶಾಸ್ತ್ರೀಗೆ ಧನ್ಯವಾದ ಎಂದರು.

ಕನ್ನಡದ ‘8’ ಎಂಬ ಚಿತ್ರದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ. ಹಾಸ್ಯನಟ ಸುಜಯ್ ಶಾಸ್ತ್ರೀ ಈ ಚಿತ್ರದ ಸಾರಥಿ. ಎವಿಆರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ.ಫುಟ್ಬಾಲ್ ಆಟದ ಸುತ್ತ ನಡೆಯುವ ಕಥೆ ‘8’ ಚಿತ್ರದಲ್ಲಿದೆ.
ಕನ್ನಡ ಚಿತ್ರರಂಗಕ್ಕೆ ಸದಾ ಅಭಿರುಚಿ ಸಿನಿಮಾಗಳನ್ನು ನೀಡುವ ಉದ್ದೇಶದಿಂದ ಶುರುವಾಗಿರುವ ಎವಿಆರ್ ಚೊಚ್ಚಲ ಕಾಣಿಕೆ 8. ಅರವಿಂದ್ ರೆಡ್ಡಿ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಈ ಚಿತ್ರದ ಜೊತೆಗೆ ಸಿಂಪಲ್ ಸುನಿ ಜೊತೆಗೂ ಎವಿಆರ್ ಕೈ ಜೋಡಿಸಿದೆ.

ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕನಾಗಿ ನಟಿಸಲಿರುವ ಈ ಸಿನಿಮಾ ಈಗಾಗಲೇ ಘೋಷಣೆಯಾಗಿದೆ. ಸದ್ಯ 8 ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ

