"Brat" movie song released in 5 languages: Movie to hit screens in October

5 ಭಾಷೆಯಲ್ಲಿ “ಬ್ರ್ಯಾಟ್” ಚಿತ್ರದ ಹಾಡು ಬಿಡುಗಡೆ : ಅಕ್ಟೋಬರ್‌ನಲ್ಲಿ ಚಿತ್ರ ತೆರೆಗೆ - CineNewsKannada.com

5 ಭಾಷೆಯಲ್ಲಿ “ಬ್ರ್ಯಾಟ್” ಚಿತ್ರದ ಹಾಡು ಬಿಡುಗಡೆ : ಅಕ್ಟೋಬರ್‌ನಲ್ಲಿ ಚಿತ್ರ ತೆರೆಗೆ

ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಯಶಸ್ವಿ ಕಾಂಬಿನೇಷನ್ ಜೋಡಿ ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ಜೊತೆಯಾಗಿ ಕೆಲಸ ಮಾಡಿರುವ ಚಿತ್ರ ” ಬ್ರಾಟ್”.

ಯಶಸ್ವಿ ನಿರ್ಮಾಪಕ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ಮಂಜುನಾಥ್ ಕಂದಕೂರ್ ನಿರ್ಮಿಸುತ್ತಿದ್ದು ,ಬ್ರ್ಯಾಟ್” ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಸಿದ್ಧವಾಗುತ್ತಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಯೋಜನೆಯಲ್ಲಿ ಇವೆಲ್ಲ ಹಾಡುಗಳು ಮೂಡಿ ಬಂದಿದ್ದು ಚಿತ್ರದ “ನಾನೇ ನೀನಂತೆ ಹಾಡು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.

ಕನ್ನಡ ಹಾಗೂ ತೆಲುಗಿನಲ್ಲಿ ಈ ಹಾಡನ್ನು ಜನಪ್ರಿಯ ಗಾಯಕ ಸಿದ್ ಶ್ರೀರಾಮ್ ಹಾಡಿದ್ದಾರೆ. ಕನ್ನಡದ ಫಿಮೇಲ್ ವರ್ಷನ್ “ಸರಿಗಮಪ” ಖ್ಯಾತಿಯ ಲಹರಿ ಮಹೇಶ್ ಹಾಡಿದ್ದಾರೆ. ಉಳಿದ ನಾಲ್ಕು ಭಾಷೆಗಳಲ್ಲಿ ಫೀಮೇಲ್ ವರ್ಷನ್ ಸಿರೀಶ ಹಾಡಿದ್ದಾರೆ. ಹಿಂದಿಯಲ್ಲಿ ಮೇಲ್ ವರ್ಷನ್ ನಿಹಾಲ್ ತವ್ರು ಹಾಗೂ ತೆಲುಗು – ತಮಿಳಿನಲ್ಲಿ ಶ್ರೀಕಾಂತ್ ಹರಿಹರನ್ ಹಾಡಿದ್ದಾರೆ.

ಈ ಹಿಂದೆ ಶಶಾಂಕ್, ಅರ್ಜುನ್ ಜನ್ಯ ಹಾಗೂ ಸಿದ್ ಶ್ರೀರಾಮ್ ಅವರ ಕಾಂಬಿನೇಶನ್ ನಲ್ಲಿ “ಲವ್ 360” ಚಿತ್ರದ “ಜಗವೇ ನೀನು ಗೆಳತಿಯೇ” ಹಾಡು ಭರ್ಜರಿ ಯಶಸ್ಸು ಕಂಡಿತ್ತು‌. ಈಗ ಈ ಹಾಡಿಗೂ ಎಲ್ಲಾ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ ಎಲ್ಲೆಡೆ ಬಾರಿ ವೈರಲ್ ಆಗಿ ಸದ್ದು ಮಾಡುತ್ತಿದೆ.

ನಾಯಕ ನಟ ಡಾರ್ಲಿಂಗ್ ಕೃಷ್ಣ ಮಾತನಾಡಿ
ನನ್ನ ಹಾಗೂ ಶಶಾಂಕ್ ಕಾಂಬಿನೇಶನ್ “ಕೌಸಲ್ಯ ಸುಪ್ರಜಾ ರಾಮ” ಚಿತ್ರ ಉತ್ತಮ ಪ್ರಶಂಸೆ ಪಡೆದು ಯಶಸ್ಸನ್ನ ಕಂಡಿತ್ತು. ಈಗ ಮತ್ತೊಮ್ಮೆ ಅದೇ ಸಾಲಿನಲ್ಲಿ ಬರುತ್ತಿರುವ ನಮ್ಮ “ಬ್ರ್ಯಾಟ್” ಚಿತ್ರವು ಸಾಗಲಿದೆ . ಈಗಾಗಲೇ ನನ್ನ ಈ ಚಿತ್ರದ ಫಸ್ಟ್ ಲುಕ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದಕ್ಕೆ ನಮ್ಮ ನಿರ್ದೇಶಕ ಶಶಾಂಕ್ ಹಾಗೂ ತಂಡವೇ ಕಾರಣ. ಚಿತ್ರ ಕೂಡ ಬಹಳ ಉತ್ತಮವಾಗಿ ಬಂದಿದ್ದು, ಇಂದು ಬಿಡುಗಡೆಯಾದ ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಿದ್ ಶ್ರೀರಾಮ್ ಹಾಗೂ ಲಹರಿ ಅವರ ಗಾಯನ ಹಾಡಿಗೆ ಪೂರಕವಾಗಿದೆ. ಪ್ರತಿ ಒಂದು ಹಾಡು ವಿಭಿನ್ನವಾಗಿದ್ದು, ಮುಂದಿನ ತಿಂಗಳು ಚಿತ್ರದ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಆ ಹಾಡಂತೂ ನನ್ನ ಮಗಳಿಗೆ ಬಹಳ ಇಷ್ಟ , ನಮ್ಮ ಚಿತ್ರದ ಎಲ್ಲಾ ಹಾಡುಗಳನ್ನು ನೋಡಿ , ಚಿತ್ರವನ್ನು ಪ್ರೋತ್ಸಾಹಿಸಿ ಎಂದರು.

ನಿರ್ದೇಶಕ ಶಶಾಂಕ್ ಮಾತನಾಡಿ ನನ್ನ ಹಾಗೂ ಅರ್ಜುನ್ ಜನ್ಯ ಅವರ ಕಾಂಬಿನೇಶನ್ ನಲ್ಲಿ ಬಂದಿರುವ ಎಲ್ಲಾ ಹಾಡುಗಳು ಪ್ರೇಕ್ಷಕರ ಮನಸನ್ನ ಗೆದ್ದು ಯಶಸ್ವಿಯಾಗಿದೆ. ಈಗ ಆ ಸಾಲಿಗೆ “ನಾನೇ ನೀನಂತೆ” ಹಾಡು ಕೂಡ ಸೇರಲಿದೆ. ನನ್ನ ಸಿನಿ ಜರ್ನಿಯಲ್ಲೇ ಅತೀ ಹೆಚ್ಚು ವೆಚ್ಚದಲ್ಲಿ ಮೂಡಿಬಂದಿರುವ ಹಾಡಿದು. ಈ ಹಾಡಿನ ಟ್ಯೂನ್ ಅಂತಿಮಗೊಳಿಸಲು ಸುಮಾರು 6 ತಿಂಗಳ ಸಮಯ ಬೇಕಾಯಿತು. ನಿರ್ಮಾಪಕ ಮಂಜುನಾಥ್ ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಸಿದ್ ಶ್ರೀರಾಮ್ ಅವರ ಧ್ವನಿಯಂತೂ ಹೇಳಿ ಮಾಡಿಸಿದ ಹಾಗಿದೆ ಎಂದರು.

ಹಿಂದಿಯಲ್ಲಿ ಕನ್ನಡದ ಹುಡುಗ ನಹಾಲ್ ತವ್ರು , ತಮಿಳು, ಮಲೆಯಾಳಂ ನಲ್ಲಿ ಶ್ರೀಕಾಂತ್ ಹರಿಹರನ್ ಹಾಡನ್ನು ಹಾಡಿದ್ದಾರೆ‌. ಕನ್ನಡದಲ್ಲಿ ಫೀಮೇಲ್ ವರ್ಷನ್ ಲಹರಿ ಮಹೇಶ್ ಹಾಡಿದ್ದು , ಉಳಿದ ನಾಲ್ಕು ಭಾಷೆಗಳಲ್ಲಿ ಹೆಣ್ಣು ಧ್ವನಿ ಸಿರೀಶ ಕಂಠಸಿರಿಯಲ್ಲಿ ಮೂಡಿಬಂದಿದೆ. ಕನ್ನಡದಲ್ಲಿ ಈ ಹಾಡನ್ನು ನಾನೇ ಬರೆದಿದ್ದೇನೆ. ಆನಂದ್ ಆಡಿಯೋ ಮೂಲಕ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದೆ. ಸದ್ಯದಲ್ಲೇ ಉಳಿದ ಹಾಡುಗಳು ಸಹ ಬಿಡುಗಡೆಯಾಗಲಿದೆ. ಹಂತ ಹಂತವಾಗಿ ಪ್ರಚಾರವನ್ನು ಮಾಡುವ ಮೂಲಕ ಅಕ್ಟೋಬರ್ ನಲ್ಲಿ ಚಿತ್ರವನ್ನ ತೆರೆಯ ಮೇಲೆ ತರುವ ಯೋಜನೆ ಇದೆ ಎಂದರು.

ನಟಿ ಮನಿಶಾ ಕಂದಕೂರ್ ಮಾತನಾಡಿ ಮೂಲತಃ ಕನ್ನಡದ ಹುಡುಗಿ. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮ ವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಕೂಡ ಮನಿಶಾ. ಬಿಡುಗಡೆಯಾಗಿರುವ “ನಾನೇ ನೀನಂತೆ” ನನ್ನ ಇಷ್ಟದ ಹಾಡು ಎಂದರು.

ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಮಾತನಾಡಿ ಮೊದಲ ನಿರ್ಮಾಣದ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ಗೆಲುವಿಗೆ ನೀವೆಲ್ಲಾ ನೀಡಿದ ಪ್ರೋತ್ಸಾಹವೇ ಕಾರಣ. ನಮ್ಮ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಹಾಡು ಸುಮಧುರವಾಗಿದೆ‌. ಸದ್ಯದಲ್ಲೇ ಚಿತ್ರ ಬರಲಿದ್ದು , ನಿಮ್ಮೆಲ್ಲರ ಪ್ರೋತ್ಸಾಹ ಸಹಕಾರ ಇರಲಿ ಎಂದರು.

ಗಾಯಕಿ ಲಹರಿ , ಆನಂದ್ ಆಡಿಯೋ ಶ್ಯಾಮ್, ನೃತ್ಯ ನಿರ್ದೇಶಕ‌ ಕಲೈ ಮಾಸ್ಟರ್ ಹಾಗೂ ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಈ ಚಿತ್ರದ ಹಾಡಿನ ಕುರಿತು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin