ಬೃಂದಾವಿಹಾರಿ ಚಿತ್ರ ನವಂಬರ್ 20 ರಂದು ಬಿಡುಗಡೆ: ಕುತೂಹಲ ಹೆಚ್ಚಳ

ಕರುನಾಡ ಚಕ್ರವರ್ತಿ ಡಾ. ಶಿವರಾಜ್‍ಕುಮಾರ್ ಸೇರಿದಂತೆ ಚಿತ್ರತಂಡದ ಹಲವು ಕಲಾವಿದರು ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಶಾಸಕ ಹಾಗೂ ಚಿತ್ರದ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಚಿತ್ರ ನಿರ್ಮಾಣ ಮಾಡಿದ್ದು ಶ್ರೀನಿವಾಸ ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರ ನವಂಬರ್ 20ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.

ನಟ ಶಿವರಾಜ್‍ಕುಮಾರ್ ಮಾತನಾಡಿ ಮುಳಬಾಗಿಲಿನ ಆಂಜನೇಯ ಸ್ವಾಮಿ ದೇವಸ್ಥಾನ ತಮ್ಮ ತಂದೆ, ವರನಟ ಡಾ. ರಾಜ್‍ಕುಮಾರ್ ಅವರಿಗೆ ಅತ್ಯಂತ ಪ್ರಿಯವಾದ ಸ್ಥಳವಾಗಿತ್ತು ಚೆನ್ನೈನಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುವ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಮುಳಬಾಗಿಲಿನ ಪ್ರಸಿದ್ಧ ದೋಸೆ ಸವಿಯುತ್ತಿದ್ದ ದಿನಗಳ ನೆನಪುಗಳನ್ನು ಹಂಚಿಕೊಂಡು ಬೃಂದ ವಿಹಾರಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು

ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಮಾತನಾಡಿ, ಮುಳಬಾಗಿಲಿನಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಸುಮಾರು ಹತ್ತು ದಿನಗಳ ಕಾಲ ಚಿತ್ರೀಕರಿಸಲಾಗಿತ್ತು. ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅಪೇಕ್ಷೆಯ ಮೇರೆಗೆ ಮುಳಬಾಗಿಲಿನಲ್ಲಿಯೇ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಸಲಾಗಿದೆ ಎಂದು ತಿಳಿಸಿದರು.

ನಿರ್ದೇಶಕ ಶ್ರೀನಿವಾಸ ರಾಜು ಮತ್ತು ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಸಹಕಾರ ಹಾಗೂ ಪ್ರೋತ್ಸಾಹ ಚಿತ್ರ ನಿರ್ಮಾಣಕ್ಕೆ ಹೆಚ್ಚಿನ ಬಲ ನೀಡಿದೆ. ರಂಗಾಯಣ ರಘು, ಮಾಳವಿಕಾ ಶರ್ಮಾ, ದೇವಿಕಾ ಭಟ್ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದು, `ಬೃಂದಾವಿಹಾರಿ’ ಉತ್ತಮ ಕೌಟುಂಬಿಕ ಮನರಂಜನಾ ಚಿತ್ರವಾಗಿ ಮೂಡಿಬಂದಿದೆ ಎಂದು ಹೇಳಿದರು.

ನಿರ್ಮಾಪಕ ಹಾಗೂ ಶಾಸಕ ಸಮೃದ್ಧಿ ವಿ ಮಂಜುನಾಥ್ ಮಾತನಾಡಿ, ಬೃಂದಾವಿಹಾರಿ’ ನಿರ್ಮಾಣದ ನಾಲ್ಕನೇ ಚಿತ್ರವಾಗಿದ್ದು, ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯ ಹಾಗೂ ಇಡೀ ಚಿತ್ರತಂಡದ ಸಹಕಾರದೊಂದಿಗೆ ಚಿತ್ರ ನಿರ್ಮಿಸಿದ್ದು ನಿರ್ದೇಶಕ ಶ್ರೀನಿವಾಸ ರಾಜು ನಿರ್ದೇಶನದಲ್ಲಿ ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದೆ ನವೆಂಬರ್ 20ರಂದು ಬೃಂದಾವಿಹಾರಿ’ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದ್ದು, ಕನ್ನಡಿಗರ ಪ್ರೀತಿ, ವಿಶ್ವಾಸ ಹಾಗೂ ಪ್ರೋತ್ಸಾಹವೇ ನಮ್ಮ ಚಿತ್ರತಂಡಕ್ಕೆ ದೊಡ್ಡ ಶಕ್ತಿ. ಪ್ರತಿಯೊಬ್ಬರೂ ಚಿತ್ರಮಂದಿರಗಳಿಗೆ ಬಂದು ಸಿನಿಮಾ ವೀಕ್ಷಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ನಿರ್ದೇಶಕ ಶ್ರೀನಿವಾಸ ರಾಜು ಮಾತನಾಡಿ, `ಬೃಂದಾವಿಹಾರಿ’ ಚಿತ್ರವನ್ನು ಪ್ರೇಕ್ಷಕರು ವೀಕ್ಷಿಸಿ ಚಿತ್ರತಂಡಕ್ಕೆ ತಮ್ಮ ಪ್ರೀತಿ ಮತ್ತು ಬೆಂಬಲ ನೀಡಬೇಕೆಂದು ಕೋರಿದರು.

ಚಿತ್ರದ ನಾಯಕಿಯರಾದ ಮಾಳವಿಕಾ ಶರ್ಮಾ ಹಾಗೂ ದೇವಿಕಾ ಭಟ್, ಹಿರಿಯ ನಟ ರಂಗಾಯಣ ರಘು, ಕುರಿ ಪ್ರತಾಪ್, ಪಾವಗಡ ಮಂಜು, ಜಗ್ಗಪ್ಪ ಸೇರಿದಂತೆ ಹಲವು ಕಲಾವಿದರು ಸಮಾರಂಭದಲ್ಲಿ ಭಾಗವಹಿಸಿ ಚಿತ್ರದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು. ಚಿತ್ರದ ಗೀತೆಗಳಿಗೆ ಸಾಹಿತ್ಯ ಬರೆದಿರುವ ಡಾ. ವಿ. ನಾಗೇಂದ್ರ ಪ್ರಸಾದ್ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಉಪಸ್ಥಿತರಿದ್ದರು.

ಗಿಲ್ಲಿ ನಟ, ಕಾವ್ಯ ಶೈವ ಸೇರಿದಂತೆ ಹಲವು ಕಲಾವಿದರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. `ಪ್ರೇಮದ ಊರಲಿ’ ಚಿತ್ರದ ಚಿತ್ರತಂಡದ ಸದಸ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿರುವುದು ಮತ್ತೊಂದು ವಿಶೇಷವಾಗಿತ್ತು.

Related Posts

“ಮ್ಯಾರೇಜ್ ಪಾರ್ಟಿ” ಚಿತ್ರದ ಅಂದಗಾತಿಯೇ ಲರಿಕಲ್ ವೀಡಿಯೋ ಬಿಡುಗಡೆ..

ಚಯನ್ ಶೆಟ್ಟಿ ನಿರ್ದೇಶನದಲ್ಲಿ ಸಂತೋಷ್ ವಿ ನಿರ್ಮಾಣ ಮಾಡಿರುವ “ಮ್ಯಾರೇಜ್ ಪಾರ್ಟಿ” ಚಿತ್ರದ `ಅಂದಗಾತಿಯೇ’ ಎಂಬ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಪ್ರೀತಿಯ ನವಿರು ಭಾವಗಳಿಂದ ಮೈದುಂಬಿಕೊಂಡಂತಿರೋ ಈ ಹಾಡಿನ ಮೂಲಕ ಮ್ಯಾರೇಜ್ ಪಾರ್ಟಿಯ ಮತ್ತೊಂದು ಮಜಲು ಅನಾವರಣಗೊಂಡಿದೆ. ಮೊದಲಾ…

‘ಲಂಬೋದರ 2.0’ ಚಿತ್ರದ ರೆಡ್ ಕಾರ್ಪೆಟ್ ಪ್ರದರ್ಶನ ; ಸಿನಿಮಾ ತಾರೆಯರಿಗೆ ಉದ್ಯನ ದಿಗ್ಗಜರು ಬೆಂಬಲ

ಸಿಂಪಲ್ ಸುನಿ ನಿರ್ದೇಶನದಲ್ಲಿ ಅನಿಲ್ ಶೆಟ್ಟಿ ನಿರ್ಮಿಸಿ, ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಲಂಬೋದರ 2.0’ ಚಿತ್ರದ ರೆಡ್ ಕಾರ್ಪೆಟ್ ಪ್ರದರ್ಶನ ಬೆಂಗಳೂರಿನಲ್ಲಿ ನಡೆಯಿತು. ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ತಾರೆಯರು ಮಾತ್ರವಲ್ಲದೆ, ದೇಶ-ವಿದೇಶಗಳ ಖ್ಯಾತ ಉದ್ಯಮಿಗಳು ಚಿತ್ರ ವೀಕ್ಷಿಸುವ ಮೂಲಕ ಹೊಸ ಮನ್ವಂತಕ್ಕೆ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581