brother-sister witness to a rare moment: Vinod Prabhakar, Soundarya Jayamala met after a long time

ಅಪರೂಪದ ಕ್ಷಣಕ್ಕೆ ಅಣ್ಣ, ತಂಗಿ ಸಾಕ್ಷಿ : ವಿನೋದ್ ಪ್ರಭಾಕರ್, ಸೌಂದರ್ಯ ಜಯಮಾಲ‌ ಭೇಟಿ‌ - CineNewsKannada.com

ಅಪರೂಪದ ಕ್ಷಣಕ್ಕೆ ಅಣ್ಣ, ತಂಗಿ ಸಾಕ್ಷಿ : ವಿನೋದ್ ಪ್ರಭಾಕರ್, ಸೌಂದರ್ಯ ಜಯಮಾಲ‌ ಭೇಟಿ‌

ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಭೇಟಿಯಾಗಿದ್ದಾರೆ. ಇದರಲ್ಲಿ ವಿಶೇಷ ಏನು ಅಂತೀರಾ , ಅಣ್ಣ ತಂಗಿ ಹಲವು ದಿನಗಳ ನಂತರ ಮುಖಾಮುಖಿ ಭೇಟಿಯಾಗಿ ಬಾಲ್ಯದ ದಿನಗಳಲ್ಲಿ ಒಟ್ಟಿಗೆ ಆಡಿ ಬೆಳದ ದಿನಗಳನ್ನು ಮೆಲುಕು ಹಾಕಿದ್ದಾರೆ.

ಇಂತಹದೊಂದು ಅಪರೂಪದ ಕ್ಷಣಕ್ಕೆ ವೇದಿಕೆಯಾಗಿದ್ದು ಅಭಿಷೇಕ್ ಅಂಬರೀಷ್ ಮತ್ತು ಅವೀವಾ ಬಿದ್ದಪ್ಪ ವಿವಾಹದ ಆರತಕ್ಷತೆ ಸಮಾರಂಭ ಅಭಿ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ನೋಡಿ ಭಾವುಕರಾಗಿದ್ದಾರೆ ಅಣ್ಣ-ತಂಗಿ.
ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ.

ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ಟಿದ್ದರಜ. ಅವರ ನಡುವೆ ಗಾಂಧಿನಗರ ಮಾತಾಡಿಕೊಳ್ಳುವ ರೀತಿ ಸಂಬಂಧವೇನು ಅಳಸಿಲ್ಲ. ವಿನೋದ್ ಹಾಗೂ ಸೌಂದರ್ಯ ಇಂದಿಗೂ..ಎಂದೆಂದಿಗೂ ಅಣ್ಣ ತಂಗಿಯೇ..ಆದ್ರೆ ಅವರಿಬ್ಬರನ್ನು ಅವರ ಅಕ್ಕ-ಪಕ್ಕದವರು ಭೇಟಿ ಮಾಡಲಾಗದಂತೆ ನೋಡಿಕೊಂಡಿದ್ದರು ಅನ್ನೋದೇ ವಿಪರ್ಯಾಸ..

ಸಮಯ-ಸಂದರ್ಭ ಇದೆಲ್ಲಾ ಸಂಬಂಧಗಳನ್ನು ಮತ್ತೆ ಬೆಸೆಯುವಂತೆ ಮಾಡಿದೆ. ಮೊನ್ನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ನಡೆದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ ಆರತಕ್ಷಣೆಯಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಮುಖಾಮುಖಿಯಾಗಿದ್ದಾರೆ.

ಬಹಳ ವರ್ಷದ ಬಳಿಕ ತಂಗಿ ನೋಡಿದ ಖುಷಿ ವಿನೋದ್ ಅವರದ್ದು, ಅಣ್ಣನನ್ನೂ ನೋಡಿದ ಖುಷಿ ಸೌಂದರ್ಯಗೆ..ಭೇಟಿ ಕ್ಷಣದಲ್ಲಿ ಅಣ್ಣ ತಂಗಿ ಮತ್ತೆ ಬಾಲ್ಯದ ದಿನಗಳಿಗೆ ಜಾರಿದ್ದಾರೆ. ಬಾಲ್ಯದ ಆಟ-ತುಂಟಾಟ ನೆನಪುಕೊಂಡು ಒಂದಷ್ಟು ಸಮಯ ಚರ್ಚೆ ನಡೆಸಿದ್ದಾರೆ.

ಅಣ್ಣನ ಪತ್ನಿ ನಿಶಾ ವಿನೋದ್ ಪ್ರಭಾಕರ್ ಜೊತೆಯಲ್ಲಿಯೂ ಸೌಂದರ್ಯ ಖುಷಿ ಖುಷಿಯಿಂದ ಕಾಲ ಕಳೆದು ಮೂವರು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮರಿಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ನಡುವೆ ಅಣ್ಣ ತಂಗಿಯ ಬಾಂಧವ್ಯವಿದೆ. ಅದು ಬಿಟ್ಟರೆ  ಅವ್ರು ದೂರವಾಗಿದ್ದರೆ ,ಅವ್ರ ನಡುವೆ ಎಲ್ಲವೂ ಸರಿ ಇಲ್ಲ ಅನ್ನುವ ಮಾತುಗಳು ಸತ್ಯಕ್ಕೆ ದೂರವಾಗಿದೆ. ಅಣ್ಣ ತಂಗಿ ನೂರ್ಕಾಲ ಖುಷಿಯಿಂದ ನುಗ‌ನುಗುತ್ತಾ ಇರಲಿ

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin