ಸಿಸಿಎಲ್ ಟೂರ್ನಮೆಂಟ್ ಅಲ್ಲ ಅದೊಂದು ಭಾವನೆ- ಕಿಚ್ಚ ಸುದೀಪ್
ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ ಆವೃತ್ತಿಯಲ್ಲಿ ಈ ಬಾರಿ ಕರ್ನಾಟಕ ಬುಲ್ಡೋಜರ್ಸ್ ತಂಡ ಬರೋಬ್ಬರಿ 12 ವರ್ಷಗಳ ನಂತರ, ಮೂರನೇ ಬಾರಿಗೆ ಐತಿಹಾಸಿಕ ಪ್ರಶಸ್ತಿ ಗೆಲ್ಲುವ ಮೂಲಕ ಚಾಂಪಿಯನ್ಸ್ ಟ್ರೋಫಿಯನ್ನು ತಾಯ್ನಾಡಿಗೆ ಹೊತ್ತು ತಂದಿದೆ.

ನಾಯಕ ಕಿಚ್ಚ ಸುದೀಪ್ ಮಾತಮಾಡಿ ನಮಗೆ ಇದು ಕೇವಲ ಒಂದು ಟೂರ್ನಮೆಂಟ್ ಅಲ್ಲ, ಇದೊಂದು ಭಾವನೆ. ಅದ್ಭುತ ಆಟಗಾರರ ತಂಡವನ್ನು ಮುನ್ನಡೆಸಿ, ದಶಕದ ನಂತರ ಕಪ್ ಅನ್ನು ಮನೆಗೆ ತರುತ್ತಿರುವುದು ಪದಗಳಲ್ಲಿ ವಿವರಿಸಲಾಗದ ಅನುಭವ. ಒತ್ತಡದ ನಡುವೆಯೂ ತಂಡ ನಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದ ರೀತಿ ಅದ್ಭುತವಾಗಿತ್ತು. ಈ ಗೆಲುವು ಕಷ್ಟದ ದಿನಗಳಲ್ಲೂ ನಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಅರ್ಪಣೆ. ಈ ಸಲ ಕಪ್ ನಮ್ದೆ ಎಂಬ ಘೋಷಣೆ ಈಗ ಕೇವಲ ಮಾತಲ್ಲಅದು ವಾಸ್ತವ” ಎಂದು ಖುಷಿಪಟ್ಟರು
“ಸಿಸಿಎಲ್ ಎಂದರೆ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲ. ಚೆನ್ನಾಗಿ ಕ್ರಿಕೆಟ್ ಆಡುವ ಅಭಿಮಾನಿಗಳಿಗೂ ತಂಡದಲ್ಲಿ ಅವಕಾಶವಿದೆ. ಯಾರಲ್ಲಿ ನಿಜವಾದ ಪ್ರತಿಭೆ ಇದೆಯೋ ಅವರು ಬಂದು ಸೇರಿಕೊಳ್ಳಬಹುದು” ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಕ್ರಿಕೆಟ್ ಆಡುವ ಅವಕಾಶದ ಬಗ್ಗೆ ಮಾಹಿತಿ ನೀಡಿದರು.
ಸುದೀಪ್ ನೇತೃತ್ವದ ಪ್ರದೀಪ್, ಜೆಕೆ, ಕೃಷ್ಣ, ಚಂದನ್, ರಾಜೀವ್, ನಿರೂಪ್, ಪ್ರತಾಪ್, ಅರ್ಜುನ್, ಸಚಿನ್, ಕರಣ್, ಮಂಜುನಾಥ್ ಮತ್ತು ಬಚ್ಚನ್ ಅವರನ್ನೊಳಗೊಂಡ ತಂಡವು ಅಮೋಘ ಪ್ರದರ್ಶನ ನೀಡಿತು. 130 ರನ್‍ಗಳ ಗುರಿ ಬೆನ್ನಟ್ಟಿದ ಬುಲ್ಡೋಜರ್ಸ್ ಪರ ಸ್ಟಾರ್ ಬ್ಯಾಟ್ಸ್‍ಮನ್ ರಾಜೀವ್ ಹನು ಕೇವಲ 35 ಎಸೆತಗಳಲ್ಲಿ 69 ರನ್ ಸಿಡಿಸಿ ‘ಪಂದ್ಯ ಪುರುಷ’ ಪ್ರಶಸ್ತಿ ಪಡೆದರು. ಬೌಲಿಂಗ್‍ನಲ್ಲಿ ಎದುರಾಳಿಗಳನ್ನು ಕಟ್ಟಿಹಾಕಿದ ಪ್ರತಾಪ್ ‘ಅತ್ಯುತ್ತಮ ಬೌಲರ್’ ಗೌರವಕ್ಕೆ ಪಾತ್ರರಾದರು.

