Celebrating 100 days of the globally acclaimed film Kantara

ಜಾಗತಿಕ ಮನ್ನಣೆ ಪಡೆದ ಕಾಂತಾರ ಚಿತ್ರಕ್ಕೆ ನೂರು ದಿನದ ಸಂಭ್ರಮ - CineNewsKannada.com

ಜಾಗತಿಕ ಮನ್ನಣೆ ಪಡೆದ ಕಾಂತಾರ ಚಿತ್ರಕ್ಕೆ ನೂರು ದಿನದ ಸಂಭ್ರಮ

ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ.

ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು.

ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ನಾಯಕ, ನಿರ್ದೇಶಕ ರಿಷಭ್ ಶೆಟ್ಟಿ, “ಕಾಂತಾರ”ದ ಗೆಲುವು ಖುಷಿ ಕೊಟ್ಟಿದೆ. ಈ ಕಥೆಯನ್ನು ಮೊದಲು ಕಾರ್ತಿಕ್ ಗೌಡ ಅವರ ಹತ್ತಿರ, ಆನಂತರ ವಿಜಯ್ ಸರ್ ಅವರ ಬಳಿ ಕಥೆ ಹೇಳಿದೆ. ತಕ್ಷಣ ಒಪ್ಪಿಗೆ ನೀಡಿ ನಿರ್ಮಾಣಕ್ಕೆ ಮುಂದಾದರು. ಚಿತ್ರವನ್ನು ನಾನು ಅಂದುಕೊಂಡಂತೆ ತರಲು ಸಂಪೂರ್ಣ ಸಹಕಾರ ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ನಾನು ಆಭಾರಿ. ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ. ನನ್ನ ಮಡದಿ ಪ್ರಗತಿ ಅವರಿಗೆ ವಿಶೇಷ ಧನ್ಯವಾದ. ಎಲ್ಲರೂ ಕೇಳುತ್ತಿದ್ದಾರೆ?. ” ಕಾಂತಾರ ಭಾಗ 2″ ಯಾವಾಗ ಎಂದು? ಆದರೆ ನೀವು ನೋಡಿರುವುದೇ “ಭಾಗ 2”.”ಕಾಂತಾರ ಭಾಗ 1″ ಮುಂದೆ ಬರಲಿದೆ ಎಂದು ತಿಳಿಸಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin