Chandramukhi 2' first look released: Raghavan Lawrence replaces Rajinikanth as Raja

ಚಂದ್ರಮುಖಿ-2′ ಚಿತ್ರದ ಫಸ್ಟ್ ಲುಕ್ ಬಿಡುಗಡೆ: ರಜನಿಕಾಂತ್ ಬದಲಿಗೆ ರಾಜನಾಗಿ ರಾಘವನ್ ಲಾರೆನ್ಸ್ - CineNewsKannada.com

ಚಂದ್ರಮುಖಿ-2′ ಚಿತ್ರದ ಫಸ್ಟ್ ಲುಕ್ ಬಿಡುಗಡೆ:  ರಜನಿಕಾಂತ್ ಬದಲಿಗೆ ರಾಜನಾಗಿ ರಾಘವನ್ ಲಾರೆನ್ಸ್

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿ. ಗಣೇಶ್ ಹಬ್ಬಕ್ಕೆ ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ಬರೆದುಕೊಂಡಿದ್ದಾರೆ.

ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin