ಕ್ರೈಮ್ ,ಥ್ರಿಲ್ಲರ್ ಕಥೆಯ ” ದೇವನೊಬ್ಬ ಜಾದುಗಾರ ” ಚಿತ್ರದ ಟೀಸರ್ ಬಿಡುಗಡೆ
ಕನ್ನಡದಲ್ಲಿ ಇತ್ತೀಚೆಗೆ ಹೊಸ ಹೊಸ ಕಥೆಗಳು, ಕಲಾವಿದರು, ಪ್ರತಿಭಾನ್ವಿತರು ಹೊಸತನದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ರಿದ್ದಾರೆ. ಅದರ ಸಾಲಿಗೆ ಮತ್ತೊಂದು ಸೇರ್ಪಡೆ “ದೇವನೊಬ್ಬ ಜಾದೂಗಾರ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.

ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಶೆಟ್ಟಿ ಚಿತ್ರದ ನಿರ್ಮಾಣ ಮಾಡಿದ್ದಾರೆ. ಹೊಸ ತಂಡಕ್ಕೆ ನಟಿ ಶ್ವೇತಾ ಶ್ರೀವಾಸ್ತವ್, ಹಾಗು ಹುಚ್ಚ ವೆಂಕಟ್, ನಿರ್ದೇಶಕ ಸಿಂಪಲ್ ಸುನಿ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸುವ ಮೂಲಕ ಜೊತೆಯಾಗಿ ನಿಂತಿದೆ. ಚಿತ್ರಕ್ಕೆ ದೀಪಕ್ ನಾಯಕ್ ಸಂಗೀತ, ಋತ್ವಿಕ್ ಮುರುಳೀಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.
ನಂಬಿಕೆ ಕಳೆದುಕೊಂಡಾಗ ದೇವರ ನೆನಪಾಗುತ್ತದೆ ದೇವರು ನನ್ನ ಜೀವನದಲ್ಲಿ ಎಷ್ಟೆಲ್ಲ ಆಟ ಆಡಿದನಲ್ಲ ಎನಿಸಬಹುದು. ಆಗೆಲ್ಲ ನ ದೇವನೊಬ್ಬ ಜಾದೂಗಾರ ಎಂದುಕೊಳ್ಳುತ್ತೇವೆ. ನಿರ್ದೇಶಕ ವರುಣ್ ವಸಿಷ್ಠ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ನಿರ್ಮಾಪಕ ಬಾಲಕೃಷ್ಣ ಶೆಟ್ಟಿ ಮಾತನಾಡಿ “ಹಲವು ವರ್ಷಗಳಿಂದ ವಿದೇಶದಲ್ಲಿ ಇದ್ದರೂ ಕನ್ನಡ ಸಂಘ ಮಾಡಿದೆ. ಅನಿವಾಸಿ ಭಾರತೀಯರಿಗೆ ಮೊದಲ ಎನ್.ಆರ್.ಐ. ಸಂಘ ಕಟ್ಟಿದ್ದೇನೆ.ಕನ್ನಡ ಎಂದರೆ ಬಹಳ ಅಭಿಮಾನ ಅಂತಹಾ ಸಮಯದಲ್ಲಿ ವರುಣ್ ಹೇಳಿದ ಕಥೆ ಇಷ್ಡವಾಯಿತು ಮಗನಿಗೆ ಚಿತ್ರನಟನಾಗಬೇಕು ಎಂದು ಬಾಲ್ಯದಿಂದಲೇ ಆಸೆ ಇತ್ತು. ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾದ ಚಿತ್ರ. ತಂಡದ ಪ್ರತಿಯೊಬ್ಬರೂ ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಸಿನಿಮಾಗೆ ಸಹಕಾರ ಮತ್ತು ಬೆಂಬಲ ಬೇಕು ಎಂದು ಕೇಳಿಕೊಂಡರು.

ನಿರ್ದೇಶಕ ವರುಣ್ ಮಾತನಾಡಿ ಕಾಲೇಜು ದಿನಗಳಿಂದಲೂ ಕಿರಚಿತ್ರ ಮಾಡಿಕೊಂಡು ಬಂದಿದ್ದೇನೆ ಫೇಸ್ ಬುಕ್ ನಲ್ಲಿ ಸಚಿನ್ ಪರಿಚಯವಾಯಿತು. ಮುಂದಿನ ದಿನಗಳಲ್ಲಿ ದೊಡ್ಡ ಕಲಾವಿದರಾಗುವ ಎಲ್ಲಾ ಲಕ್ಷಣಗಳ ತೋರಿಸಿದ್ದಾರೆ. ಸುಧಾ ಬೆಳವಾಡಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಪ್ರತಿ ನಟರು ಇನ್ನೊಬ್ಬರಿಗೆ ಸ್ಪರ್ಧೆ ಕ ಮಾಡುವ ರೀತಿಯಲ್ಲಿ ಅಭಿನಯಿಸಿದ್ದಾರೆ. ಎಂದು ಹೇಳಿದರು.
ಕಾಶಿಪುರ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಕಥೆ ಇದಾಗಿದ್ದು ದೇವ ಎನ್ನುವ ಲಾರಿ ಚಾಲಕನ ಜೀವನವನ್ನು ಕೇಂದ್ರವಾಗಿ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಇದು ಕ್ರೈಂ ಥ್ರಿಲ್ಲರ್ ಕಥೆ. ಅವನ ಜೀವನದಲ್ಲಿ ನಡೆಯುವ ಕಲ್ಪನಾತೀತ ಘಟನೆಗಳು ಜೊತೆಗೆ ಓರ್ವ ಮಂಗಳಮುಖಿ ಪಾತ್ರ ಸಹ ಚಿತ್ರದಲ್ಲಿದೆ.ಪ್ರತಿಯೊಬ್ಬ ಜೀವನದಲ್ಲಿ ದೇವರ ಲೆಕ್ಕಾಚಾರ ಒಂದಾಗಿರುತ್ತದೆ. ಹಾಗಾಗಿ ದೇವನೊಬ್ಬ ಜಾದೂಗಾರ ಹೆಸರಿನಲ್ಲಿ ಚಿತ್ರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು
ಕಾಶಿಪುರದಲ್ಲಿರುವ ಇಬ್ಬರು ಪ್ರಮುಖ ವ್ಯಕ್ತಿಗಳು ದೇವನ ಮೇಲೆ ಬೀರಿದ ಪ್ರಭಾವ ಅದರಿಂದ ದೇವನ ಜೀವನ ಬದಲಾಗುವ ರೀತಿ ಅಂತಿಮವಾಗಿ ದೇವ ಏನಾಗುತ್ತಾನೆ ಎನ್ನುವುದು ಚಿತ್ರದಲ್ಲಿ ಹೇಳುತ್ತಿದ್ದೇನೆ. ಶೂಟಿಂಗ್ ನಾಲ್ಕು ವರ್ಷಗಳಿಂದ ನಡೆದಿದೆ. ಸಚಿನ್ ಹಾಗೂ ನಿರ್ಮಾಪಕರು ಭಾರತಕ್ಕೆ ಬಂದಾಗ ಮಾತ್ರ ಶೂಟಿಂಗ್ ಮಾಡಲಾಗಿದೆ. ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಸಹ ಅಂತಿಮ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು..

ಬೆಂಗಳೂರು, ತುಮಕೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಸಿನಿಮಾ ಶೀಘ್ರದಲ್ಲೇ ತೆರೆಗೆ ತರಲು ಯೋಜಿಸಿದ್ದೇವೆ ಎಂದು ಮಾಹಿತಿ ನೀಡಿದರು.
ನಟ ಸಚಿನ್ ಮಾತನಾಡಿ ನಿರ್ದೇಶಕ ವರುಣ್ ಜೊತೆ ಅನೇಕ ಕಿರುಚಿತ್ರ ಮಾಡಿದ್ದೇವೆ ನನ್ನ ರಾ ಲುಕ್ ನೋಡಿ ಈ ಕಥೆ ಹೇಳಿದ್ದರು. ಈಗ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಕನ್ನಡ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡಿ ಹರಿಸಿ’ ಎಂದು ಕೇಳಿಕೊಂಡರು.
ನಾಯಕಿ ಪ್ರಿಯಾ ಜೆ. ಆಚಾರ್ ಮಾತನಾಡಿ “ನನ್ನದು ಇದರಲ್ಲಿ ವಿಶೇಷ ಪಾತ್ರ. ಆದರೆ ಈಗಲೇ ಪಾತ್ರದ ಬಗ್ಗೆ ಏನು ಹೇಳಲಾಗದು ಎಂದರು.
ಹಿರಿಯ ಕಲಾವಿದೆ ಸುಧಾ ಬೆಳವಾಡಿ ಮಾತನಾಡಿ “ಟೈಟಲ್ ನೋಡಿ ಸಿನಿಮಾ ನೋಡಬೇಕು ಎನಿಸೋ ಚಿತ್ರ ಇದಾಗಿದೆ. ನಿರ್ದೇಶಕ ಹಾಗೂ ನಿರ್ಮಾಪಕ ಬಹಳಷ್ಟು ಕಷ್ಟಪಟ್ಟು ಈ ಚಿತ್ರ ಮಾಡಿದ್ದಾರೆ. ಸೌದಿ ಅರೇಬಿಯಾದಿಂದ ಬಂದು ಕನ್ನಡ ಸಿನಿಮಾ ಮಾಡುತ್ತಿದ್ದಾರೆ ಇದಕ್ಕೆ ಮಾಧ್ಯಮದವರು ಬೆಂಬಲ ನೀಡಬೇಕು. ” ಎಂದರು.

ಮಂಜುನಾಥ ಗೌಡ ,ತಾಂತ್ರಿಕ ಸಿಬ್ಬಂದಿ ಮತ್ತಿತರರು ಚಿತ್ರೀಕರಣ ಅನುಭವವನ್ನು ಹಂಚಿಕೊಂಡರು.
ದೇವನೊಬ್ಬ ಜಾದೂಗಾರ ಚಿತ್ರಕ್ಕೆ ವಿಜೇತ್ ಚಂದ್ರ ಸಂಕಲನವಿದ್ದರೆ ಋತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ ಇದೆ. ಚೇತನ್ ಎ. ಡಿಐ, ಶ್ಯಾಮ್ ರಾವ್ ನಗರಗದ್ದೆ ಚಿತ್ರದ ಛಾಯಾಗ್ರಹಣ ಜವಾಬ್ದಾರಿ ನಿರ್ವಹಿಸಿದ್ದಾರೆ. ಲಹರಿ ಸಂಸ್ಥೆಯ ಸೋದರ ಸಂಸ್ಥೆ ಎಂ.ಆರ್.ಟಿ. ಸಂಸ್ಥೆ ಯೂಟ್ಯೂಬ್ ಚಾನೆಲ್ ನಲ್ಲಿ ದೇವರೊಬ್ಬ ಜಾದೂಗಾರ ಚಿತ್ರದ ಟೀಸರ್ ಬಿಡುಗಡೆ ಆಗಿದೆ.

