Colors Kannada's 'Bhargavi ALB - Nandagokul' Maha Sangam

ಕಲರ್ಸ್ ಕನ್ನಡದ ‘ ಭಾರ್ಗವಿ ಎಎಲ್‍ಬಿ – ನಂದಗೋಕುಲ’ ಮಹಾ ಸಂಗಮ - CineNewsKannada.com

ಕಲರ್ಸ್ ಕನ್ನಡದ ‘ ಭಾರ್ಗವಿ ಎಎಲ್‍ಬಿ – ನಂದಗೋಕುಲ’ ಮಹಾ ಸಂಗಮ

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯ ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ‘ನಂದ ಗೋಕುಲ’ ಮತ್ತು `ಭಾರ್ಗವಿ ಎಲ್ ಎಲ್ ಬಿ’ ಜನರ ಮನಸನ್ನು ಗೆದ್ದಿರುವ ಇತ್ತೀಚಿನ ಧಾರಾವಾಹಿಗಳು. ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ’ ಹೇಳುವ ‘ನಂದ ಗೋಕುಲ’ ಈಗಾಗಲೇ ಹಲವಾರು ಸಂಚಿಕೆಗಳಿಂದ ತನ್ನ ಟಿ ಆರ್ ಪಿ ಯನ್ನು ಹೆಚ್ಚಿಸಿಕೊಳ್ಳುತ್ತ ಬಂದಿದೆ.

‘ಸ್ವಾಭಿಮಾನದ ಮಹಾ ಸಂಘರ್ಷ’ದ ಕತೆ ಹೇಳುವ ‘ಭಾರ್ಗವಿ ಎಲ್ ಎಲ್ ಬಿ’ ಜನಮನ ಗೆಲ್ಲುತ್ತ ಟಿ ಆರ್ ಪಿ ಹೆಚ್ಚಿಸಿಕೊಂಡಿದೆ. ರಾತ್ರಿ 8. 30 ಕ್ಕೆ ಪ್ರಸಾರವಾಗುವ ‘ನಂದ ಗೋಕುಲ’ ರಾತ್ರಿ 9ಕ್ಕೆ ಪ್ರಸಾರವಾಗುವ ‘ನಂದ ಗೋಕುಲ’ ಇವೆರಡೂ ಧಾರಾವಾಹಿಗಳ ‘ಮಹಾ ಸಂಗಮ’ದ ಪೆÇ್ರೀಮೋ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟುಹಾಕಿದೆ.

ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು ಬಲಿಷ್ಠ ವಕೀಲಜಯಪ್ರಕಾಶ್ ಪಾಟೀಲ್ ನಡುವಿನ ಸ್ವಾಭಿಮಾನದ ಮಹಾ ಸಂಘರ್ಷ ದಿನದಿಂದ ದಿನಕ್ಕೆ ಏರುವೇಗದಲ್ಲಿ
ಸಾಗುತ್ತಿದೆ. ಭಾರ್ಗವಿಯ ಲಾಯರ್ ತಂದೆಯನ್ನು ಕೋರ್ಟಿನಲ್ಲಿ ಹೀನಾಯವಾಗಿ ಅವಮಾನಿಸಿ ತಲೆ ತಗ್ಗಿಸುವ ಹಾಗೆ ಮಾಡಿ ವಕೀಲಿಕೆಯನ್ನೇ ತ್ಯಜಿಸುವಂತೆ ಮಾಡಿದವನು ಜೆಪಿ ಪಾಟೀಲ್. ತನ್ನ ವೃತ್ತಿಜೀವನದಲ್ಲಿ ಒಂದೇ ಒಂದು ಸೋಲು ಕಾಣದ, ಗೆಲ್ಲಲು ಯಾವುದೇ ಕಾನೂನನ್ನು ಮುರಿಯುವ ಅವನಿಗೆ ವಕೀಲಿಕೆ ಎಂದರೆ ಅಧಿಕಾರ, ಪ್ರಭಾವ ಮತ್ತು ನಿಯಂತ್ರಕ ಶಕ್ತಿ. ಇದರ ತದ್ವಿರುದ್ಧ ಭಾರ್ಗವಿ.

ನ್ಯಾಯ ದೊರಕಿಸಿ ಕೊಡಬೇಕಾದ ಸಂಧರ್ಭ ಬಂದಾಗ ಅವಳು ಯಾರನ್ನಾದರೂ ಎದುರಿಸಬಲ್ಲವಳು. ಅಧಿಕಾರ, ಹಣ, ಪ್ರಭಾವ ಇದ್ಯಾವುದಕ್ಕೂ ಕಿಂಚಿತ್ತೂ ಬೆಲೆ ಕೊಡದ ಅವಳು ನ್ಯಾಯಪರ, ಯಾರಿಗೂ ಹೆದರದ ದಿಟ್ಟ ಯುವತಿ. ತನ್ನ ಪ್ರೀತಿಯ ಅಪ್ಪ ಅಮ್ಮ ಮತ್ತು ತನ್ನ ಪುಟ್ಟ ಕುಟುಂಬವೇ ಅವಳ ಜೀವನ. ಭಾರ್ಗವಿಯ ಅಪ್ಪ ರವೀಂದ್ರ ಭಟ್ಕಳ್ ಕೂಡಾ ವಕೀಲನಾಗಿದ್ದು ವೃತ್ತಿಯಲ್ಲಿ ಯಶಸ್ಸು ಕಂಡಿರುವುದಿಲ್ಲ. ಮಗಳ ಕನಸಿಗೆ ತಂದೆ ಪೂರ್ತಿಯಾಗಿ ಬೆಂಬಲ ನೀಡಿದರೂ ಅಮ್ಮನಿಗೆ ಮಾತ್ರ ಲಾಯರ್ ವೃತ್ತಿ ಅನಗತ್ಯ ತೊಂದರೆಗಳನ್ನು ತರಬಹುದು ಎಂಬ ಆತಂಕ. ಮದುವೆಯಾಗಿ ಅವಳು ಸುಖವಾಗಿದ್ದರೆ ಸಾಕು ಅನ್ನುವುದು ಅಮ್ಮನ ಬಯಕೆ.

ಭಾರ್ಗವಿಯ ಜೀವನ ಅನಿರೀಕ್ಷಿತ ತಿರುವು ಪಡೆಯುವುದು ಅವಳು, ಜೆಪಿ ಪಾಟೀಲ್ ನ ಮಗ ಅರ್ಜುನ್ ಪಾಟೀಲ್ ನನ್ನು ಭೇಟಿ ಮಾಡಿದಾಗ. ಶ್ರೀಮಂತ ಕುಟುಂಬದಲ್ಲಿ ಬೆಳೆದರೂ ಸಹೃದಯಿಯಾಗಿರುವ ಅರ್ಜುನ್ ಭಾರ್ಗವಿಯನ್ನು ಮೊದಲ ನೋಟದಲ್ಲೇ ಪ್ರೀತಿಸುತ್ತಾನೆ. ತಂದೆ ವಿರುದ್ಧ ಹೋರಾಟ ಮಾಡುತ್ತಿರುವ ವಕೀಲೆ ಎಂಬ ಅರಿವಿರದ ಅರ್ಜುನ್ ಭಾರ್ಗವಿಗೆ ಹತ್ತಿರವಾಗುತ್ತಾನೆ.

ಮಹಾ ಸಂಗಮದಲ್ಲಿ ಹೊಸ ದಿಕ್ಕು

‘ನಂದ ಗೋಕುಲ’ದ ನಾಯಕ ‘ವಲ್ಲಭ’ ಭಾರ್ಗವಿಗೆ ಅರ್ಜುನ್ ಮೇಲೆ ಇರುವ ಪ್ರೀತಿಯನ್ನು ಅವಳಿಗೆ ತಿಳಿಸಿಕೊಡುತ್ತಾನೆ – ಮಹಾ ಸಂಗಮದಲ್ಲಿ. ಹಾಗೆಯೇ ಅಪ್ಪನ ಮಾತಿನಿಂದ ಬೇಸರಗೊಂಡು ‘ನಂದ ಗೋಕುಲ’ವನ್ನು ಬಿಟ್ಟಿರುವ ವಲ್ಲಭನಿಗೆ ತಂದೆ ತಾಯಿಯ ಮಹತ್ವ ತಿಳಿಸಿ ಅವನು ಮನೆಗೆ ಮರಳುವಂತೆ ಭಾರ್ಗವಿ ಪ್ರೇರೇಪಣೆ ನೀಡುತ್ತಾಳೆ/ ಮಹಾ ಸಂಗಮದಲ್ಲಿ.

ಹೀಗೆ ಒಬ್ಬರಿಗೊಬ್ಬರು ದಿಕ್ಕು ತೋರಿಸುವ ಈ ‘`ಭಾರ್ಗವಿ ಎಲ್ ಎಲ್ ಬು.’ ನಂದ ಗೋಕುಲ’ ಮಹಾ ಸಂಗಮ ಕಲರ್ಸ್ ಕನ್ನಡದಲ್ಲಿ ಜುಲೈ 25 ರ ವರೆಗೆ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ. ಒಂದು ಗಂಟೆಯ ಈ ಸಂಚಿಕೆಗಳು ಪ್ರೇಕ್ಷಕರಿಗೆ ಇನ್ನಷ್ಟು ಪ್ರಿಯವಾಗುವುದರಲ್ಲಿ ಅನುಮಾನವಿಲ್ಲ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin