Conflict in Middle Eastern country: Actor Yash's Toxic film postponed to June 4

ಮದ್ಯಪ್ರಾಚ್ಯ ದೇಶದಲ್ಲಿ ಸಂಘರ್ಷ : ನಟ ಯಶ್ ಅಭಿನಯದ ಟಾಕ್ಸಿಕ್ ಚಿತ್ರ ಜೂನ್ 4ಕ್ಕೆ ಮುಂದೂಡಿಕೆ - CineNewsKannada.com

ಮದ್ಯಪ್ರಾಚ್ಯ ದೇಶದಲ್ಲಿ ಸಂಘರ್ಷ : ನಟ ಯಶ್ ಅಭಿನಯದ ಟಾಕ್ಸಿಕ್ ಚಿತ್ರ ಜೂನ್ 4ಕ್ಕೆ ಮುಂದೂಡಿಕೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ಟಾಕ್ಸಿಕ್” ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರ ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 19ಕ್ಕೆ ಬಿಡುಗಡೆ ಮಾಡುವುದಾಗಿ ನಿರ್ಮಾಣ ಸಂಸ್ಥೆ ಪ್ರಕಟಿಸಿತ್ತು. ಮದ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಉಂಟಾದ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ

ಚಿತ್ರವನ್ನು ಜಾಗತಿಕ ಪ್ರೇಕ್ಷಕರಿಗಾಗಿ ಸಿನಿಮಾ ನಿರ್ಮಿಸುವ ಆಶಯದೊಂದಿಗೆ ರೂಪಿಸಿದ್ದೇವೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾದ ಈ ಸಿನಿಮಾ, ದೇಶದ ಹಾಗೂ ವಿದೇಶದ ಪ್ರೇಕ್ಷಕರನ್ನು ತಲುಪುವ ದೃಢ ವಿಶ್ವಾಸದೊಂದಿಗೆ ಸಿದ್ಧವಾಗಿದೆ.

ಮಾರ್ಚ್ 19 ರಂದು ಚಿತ್ರವನ್ನು ಜನರ ಮುಂದೆ ತರಲು ನಾವು ಉತ್ಸುಕರಾಗಿದ್ದೆವು. ಆದರೆ, ಪ್ರಸ್ತುತ ಜಗತ್ತಿನಲ್ಲಿ ಉಂಟಾಗಿರುವ ಅನಿಶ್ಚಿತತೆಯು, ಚಿತ್ರವನ್ನು ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ತಲುಪಿಸುವ ಗುರಿಯ ಮೇಲೆ ಪರಿಣಾಮ ಬೀರಿದೆ.

ಪಾಲುದಾರರ ಮತ್ತು ಪ್ರೇಕ್ಷಕರ ಹಿತದೃಷ್ಟಿಯಿಂದ, ಚಿತ್ರದ ಬಿಡುಗಡೆಯ ದಿನಾಂಕವನ್ನು ಮರುನಿಗದಿಪಡಿಸುವ ಕಠಿಣ ಹಾಗೂ ಎಚ್ಚರಿಕೆಯ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ. ನಿಮ್ಮ ತಿಳುವಳಿಕೆ ಮತ್ತು ತಾಳ್ಮೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಹಾಗೂ ನಿಮ್ಮ ಪ್ರೀತಿ ಮತ್ತು ಬೆಂಬಲ ಹೀಗೆಯೇ ಇರಲಿ ಎಂದು ಆಶಿಸುತ್ತೇವೆ ಎಂದು ನಿರ್ಮಾಣ ಸಂಸ್ಥೆ ಕೆವಿನ್ ಮತ್ತು ಮಾಸ್ಟರ್ ಮೈಂಡ್ ಪ್ರಕಟಿಸಿದೆ

ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಜಗತ್ತಿನಾದ್ಯಂತ ಇಂಗ್ಲಿಷ್ ಮತ್ತು ಭಾರತೀಯ ಭಾಷೆಗಳಲ್ಲಿ 2026ರ ಜೂನ್ 4 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin