“Congratulations ಬ್ರದರ್” ಚಿತ್ರದ ‘ಹಳೇ ಸನ್ಯಾಸಿ” ಹಾಡು ಬಿಡುಗಡೆ
ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ “Congratulations ಬ್ರದರ್” ಡೈಲಾಗ್ ಸಿನಿಮಾವಾಗಿದೆ. ಹರಿ ಸಂತೋಷ್ ಮಾರ್ಗದರ್ಶನದಲ್ಲಿ ನಟ ರಕ್ಷಿತ್ ನಾಗ್, ಸಂಜನಾ ದಾಸ್ ಮತ್ತು ಅನುಶಾ ನಟಿಸಿದ್ದಾರೆ

ಪ್ರಶಾಂತ್ ಕಲ್ಲೂರ್ ನಿರ್ಮಿಸಿರುವ ಚಿತ್ರವನ್ನು ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದಾರೆ. ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ಧಾರೆ. ಹಿರಿಯ ನಟ ಶಶಿಕುಮಾರ್ ಪ್ರಮುಖಪಾತ್ರದಲ್ಲಿದ್ದಾರೆ. ಹರೀಶ್ ರೆಡ್ಡಿ ಸಹ ನಿರ್ಮಾಪಕರಾಗಿ ಹಾಗೂ ಶ್ರೀಕಾಂತ್ ಕಶ್ಯಪ್ ಕಾರ್ಯಕಾರಿ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ.
ಚಿತ್ರಕ್ಕಾಗಿ ನಾಯಕ ರಕ್ಷಿತ್ ನಾಗ್ ಸಾಹಿತ್ಯ ಬರೆದು, ಸೂರಜ್ ಜೋಯಿಸ್ ಸಂಗೀತ ಸಂಯೋಜಿರುವ ಹಾಗೂ ಜನಪ್ರಿಯ ನಿರ್ದೇಶಕ “ಜೋಗಿ” ಪ್ರೇಮ್ ಹಾಡಿರುವ “ಹಳೇ ಸನ್ಯಾಸಿ” ಎಂಬ ಹಾಡನ್ನು ನಟಿ ರಾಗಿಣಿ ದ್ವಿವೇದಿ, ನಟರಾದ ರಾಜವರ್ಧನ್, ವಿಕ್ಕಿ ವರುಣ್ ಬಿಡುಗಡೆ ಮಾಡಿದರು. ಆನಂದ್ ಆಡಿಯೋ ಮೂಲಕ ಹಾಡು ಬಿಡುಗಡೆಯಾಇದೆ

ನಟಿ ರಾಗಿಣಿ ದ್ವಿವೇದಿ ಮಾತನಾಡಿ ನಿರ್ದೇಶಕ ಸಂತು ಅವರ ಸಿನಿಮಾಗಳಲ್ಲಿ ಕೆಲಸ ಮಾಡಿಲ್ಲ. ಆದರೆ ಅವರ ನಿರ್ದೇಶನದ ಚಿತ್ರಗಳು ನನಗೆ ಇಷ್ಟ. ಸಂತು ಅವರ ಸಾರಥ್ಯದಲ್ಲಿ ಹೊಸತಂಡವೊಂದು ಹೊಸ ಸಿನಿಮಾ ಮಾಡಿದೆ. ಹಾಡು ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು .
ನಟ ರಾಜವರ್ಧನ್ ಮಾತನಾಡಿ “ಬಿಚ್ಚುಗತ್ತಿ” ಚಿತ್ರಕ್ಕೆ ಸಂತು ಅವರೆ ನಿರ್ದೇಶಕ. ಕಾರ್ಯವೈಖರಿ ಹತ್ತಿರದಿಂದ ನೋಡಿದ್ದೇನೆ. ಚಿತ್ರತಂಡವನ್ನು ನೋಡಿದಾಗ ಖುಷಿಯಾಯಿತು ಹಾಡು ಚೆನ್ನಾಗಿದೆ ಎಂದರು
ನಟ ವಿಕ್ಕಿ ವರುಣ್ ಮಾತನಾಡಿ ಹರಿ ಸಂತೋಷ್ ಇಬ್ಬರು ಬಹಳ ವರ್ಷಗಳ ಸ್ನೇಹಿತರು. ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರ ಸಹ ಮೂಡಿಬರುತ್ತಿದೆ ಎಂದು ಹೇಳಿದರು

ನಿರ್ಮಾಪಕ ಪ್ರಶಾಂತ್ ಕಲ್ಲೂರ್, ಸಹ ನಿರ್ಮಾಪಕ ಹರೀಶ್ ರೆಡ್ಡಿ, ನಾಯಕ ರಕ್ಷಿತ್ ನಾಗ್, ನಾಯಕಿಯರಾದ ಸಂಜನದಾಸ್, ಅನೂಷ, ಸಂಗೀತ ನಿರ್ದೇಶಕ ಸೂರಜ್ ಜೋಯಿಸ್, ಛಾಯಾಗ್ರಾಹಕ ಗುರು, ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಕಶ್ಯಪ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ರಾಘವೇಂದ್ರ ಶೆಟ್ಟಿ ಮಾಜಿ ಅಧ್ಯಕ್ಷರು, ಕರಕುಶಲ ನಿಗಮ ಮಂಡಳಿ, ನಿರ್ಮಾಪಕರಾದ ದೇವೇಂದ್ರ, ವಿತರಕರಾದ ಮುನೇಂದ್ರ ಹಾಗೂ ನಟರಾಜ್ ಜೈ ಕರ್ನಾಟಕ ಗಾಂಧಿನಗರ ಮುಂತಾದ ಗಣ್ಯರು ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.


