"Cotton Pete Gate" to hit the screens on July 11
ಜು.11ಕ್ಕೆ “ಕಾಟನ್ ಪೇಟೆ ಗೇಟ್” ಚಿತ್ರ ತೆರೆಗೆ
ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ “ಯುವರಾಜ”, “ಕಂಠಿ”, “ಭರ್ಜರಿ”, “ಬಹದ್ದೂರ್ ” ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಆರ್ ಶ್ರೀನಿವಾಸ್ ನಿರ್ಮಿಸಿರುವ “ಕಾಟನ್ ಪೇಟೆ ಗೇಟ್” ಚಿತ್ರ ಜುಲೈ 11 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಆಕ್ಷನ್, ಕಾಮಿಡಿ, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ ಚಿತ್ರವನ್ನು ವೈ ರಾಜಕುಮಾರ್ ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ಚೇತನ್ ಕುಮಾರ್ ಬರೆದಿರುವ ಹಾಡುಗಳಿಗೆ ಎನ್. ಎಸ್ ಪ್ರಸು ಸಂಗೀತ ಸಂಯೋಜನೆ ಮಾಡಿದ್ದಾರೆ. ಯೋಗಿ ರೆಡ್ಡಿ ಛಾಯಾಗ್ರಹಣ, ಶಿವ ಸರ್ವಣಿ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ವೇಣುಗೋಪಾಲ್, ಯಶ್ವನ್, ಸುರಭಿ ತಿವಾರಿ, ಅನುಶಾ ಜೈನ್, ಸುಧೀಕ್ಷಾ, ಕಿಸ್ಲೆ ಚೌಧರಿ , ಪಾರ್ಥು, 8 ಸಾಯಿಕುಮಾರ್, ರಘು, ಕಟ್ಟಪ್ಪ ಮುಂತಾದವರಿದ್ದಾರೆ. .

