Crazystar Ravichandran starrer "The Judgment" has a lavish climax.

ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್ - CineNewsKannada.com

ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್

ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು.

ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ ಮತ್ತು ಅರವಿಂದ್ ಕುಪ್ಳೀಕರ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದಲ್ಲಿ, ಅನುಭವಿ ಪಿ ಕೆ ಹೆಚ್ ದಾಸ್ ಮೂರು ಕ್ಯಾಮರಾಗಳನ್ನು ಬಳಸಿಕೊಂಡು ಕ್ಲೈಮ್ಯಾಕ್ಸ್ ಭಾಗವನ್ನು ಚಿತ್ರಿಸಿಕೊಂಡರು. ವಿಶ್ವನಾಥ ಗುಪ್ತಾ, ರಾಮು ರಾಯಚೂರು ಮತ್ತು ರಾಜಶೇಖರ ಪಾಟೀಲ್ ಈ ಚಿತ್ರದ ನಿರ್ಮಾಪಕರು.

“ದ ಜಡ್ಜ್ ಮೆಂಟ್” ಕಥೆ ಲೀಗಲ್ ಥ್ರಿಲ್ಲರ್ ಶೈಲಿಯದಾಗಿದ್ದು, ರಾಜ್ಯಾಂಗ ಮತ್ತು ನ್ಯಾಯಾಂಗದ ಸುತ್ತ ನಡೆಯುವ ಘಟನೆಗಳನ್ನು ಬಳಸಿಕೊಂಡು ಕಾಲ್ಪನಿಕ ಕಥೆ ಹೆಣೆಯಲಾಗಿದೆ. ಈ ಸಿನೆಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವದು ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ತಿಳಿಸಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್ ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಮ್, ಬಾಲಾಜಿ ಮನೋಹರ್, ಅರವಿಂದ್ ಕುಪ್ಳೀಕರ್ ಮತ್ತು ಜಗದೀಶ್ ಮಲ್ನಾಡ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪಿ ಕೆ ಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ.ರವಿ ವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ “ದ ಜಡ್ಜ್ ಮೆಂಟ್” ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin