“Credit Kumar” new entry for Sandalwood : Who is this talented artiste?

ಸ್ಯಾಂಡಲ್‍ವುಡ್‍ಗೆ “ಕ್ರೆಡಿಟ್ ಕುಮಾರ” ಹೊಸ ಪ್ರವೇಶ : ಯಾರು ಈ ಪ್ರತಿಭಾನ್ವಿತ ಕಲಾವಿದ - CineNewsKannada.com

ಸ್ಯಾಂಡಲ್‍ವುಡ್‍ಗೆ “ಕ್ರೆಡಿಟ್ ಕುಮಾರ” ಹೊಸ ಪ್ರವೇಶ : ಯಾರು ಈ ಪ್ರತಿಭಾನ್ವಿತ ಕಲಾವಿದ

ಕನ್ನಡಚಿತ್ರರಂಗಕ್ಕೂ ಮತ್ತು ಸಿನಿಮಾ ಪತ್ರಕರ್ತರಿಗೂ ಬಿಟ್ಟಿರಲಾರದು ನಂಟು. ದಶಕಗಳ ಕಾಲ ಸಿನಿಮಾ ಪತ್ರಕರ್ತರಾಗಿ ನಟ,ನಟಿಯರು, ನಿರ್ದೇಶಕರು, ನಿರ್ಮಾಪಕರೂ ಸೇರಿದಂತೆ ತಂತ್ರಜ್ಞರ ಸಂದರ್ಶನ ಮಾಡಿ ಅವರ ಒಳ್ಳೆಯ ಕೆಲಸ ಬೆನ್ನುತಟ್ಟಿ , ತಪ್ಪಿದ್ದಾಗ ತಿದ್ದಿ ತೀಡುವ ಕೆಲಸ ಮಾಡಿದ್ದ ಪತ್ರಕರ್ತ ಹರೀಶ್ ಸೀನಪ್ಪ ಇದೇ ಮೊದಲ ಬಾರಿಗೆ ನಾಯಕನಾಗಿ ಕನ್ನಡ ಚಿತ್ರರಂಗದಲ್ಲಿ ಅದೃಷ್ಠ ಕಂಡುಕೊಳ್ಳಲು ಮುಂದಾಗಿದ್ದಾರೆ

ಅದುವೇ “ಕ್ರೆಡಿಟ್ ಕುಮಾರ” ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಕ್ರೆಡಿಟ್ ಕೊಡಲು ಮುಂದಾಗಿದ್ದು ಅವರಿಗೆ ನಟ ದೃವ ಸರ್ಜಾ ಸೇರಿದಂತೆ ಚಿತ್ರರಂಗದ ಒಂದಷ್ಟು ಮಂದಿ ಬೆಂಬಲ ನೀಡಿ, ಹೊಸ ಪ್ರಯತ್ನಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ಧಾರೆ

ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ನಿರ್ದೇಶಕ ಎಸ್ ಮಹೇಂದರ್, ನಿರ್ಮಾಪಕ ಉದಯ್ ಮೆಹ್ತಾ, ಬಾಂಡ್ ರವಿ ಸ್ಟಾರ್ ಪ್ರಮೋದ್ ಹಾಗೂ ನಿರ್ಮಾಪಕ ನರಸಿಂಹ, ಸೆಲೆಬ್ರಿಟಿ ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ, ಮಾಸ್ತಿ, ಅಣಜಿ ನಾಗರಾಜ್ ಸೇರಿಂದೆ ಅನೇಕ ಗಣ್ಯರು ಹಾಜರಿದ್ದು ಶುಭಹಾರೈಸಿದರು.

‘ಬಾಂಡ್ ರವಿ’ ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ. ಈ ಸಿನಿಮಾ ಮೂಲಕ ನಾಯಕನಾಗಿ ಹರೀಶ್ ಸೀನಪ್ಪ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 10ವರ್ಷಕ್ಕೂ ಅಧಿಕ ಸಮಯ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಇದೀಗ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ

ಸಿನಿಮಾಗೆ ಕ್ಲ್ಯಾಪ್ ಮಾಡಿ ಮಾತನಾಡಿದ ಧ್ರುವ ಸರ್ಜಾ, ‘ಹರೀಶ್ ಅವರಿಗೆ ಒಳ್ಳೆದಾಗಬೇಕು, ತುಂಬಾ ಕಷ್ಟಪಟ್ಟಿದ್ದಾರೆ’ ಎಂದು ಹೇಳಿದರು.

ಹಿರಿಯ ನಿರ್ದೇಶಕ ಎಸ್, ಮಹೆಂದರ್ ಮಾತನಾಡಿ, ‘ಪಾಸಿಟಿವ್ ವೈಬ್ ಇದೆ. ಟೈಟಲ್ ತುಂಬಾ ಚೆನ್ನಾಗಿದೆ. ನಿರ್ದೇಶಕ ಪ್ರಜ್ವಲ್ ನಮ್ಮ ಹುಡುಗ. ನನ್ನ ಜೊತೆ ಕೆಲಸ ಮಾಡಿದ ಹುಡುಗ. ಸೆನ್ಸಿಬಲ್ ಇದಾರೆ. ಹರೀಶ್ ಕೂಡ ತುಂಬಾ ಸಮಯದಿಂದ ನೋಡಿದ ಹುಡುಗ. ನಿರ್ಮಾಪಕರಿಗೆ ನಾನು ಭರವಸೆ ನೀಡುತ್ತೇನೆ ಖಂಡಿತವಾಗಿಯೂ ಈ ಸಿನಿಮಾ ಚೆನ್ನಾಗಿ ಆಗುತ್ತೆ’ ಎಂದು ಹೇಳಿದರು.

ನಾಯಕ ಹರೀಶ್ ಮಾತನಾಡಿ, ‘ಇಡೀ ಸಿನಿಮಾರಂಗ ಸಹಾಯ ಮಾಡಿದೆ. ಇದು ಮೊದಲ ಹೆಜ್ಜೆ. 2009ರಲ್ಲಿ ಮೊದಲು ಕೇಬಲ್ ಚಾನಲ್‍ನಲ್ಲಿ ಕೆಲಸ ಮಾಡುವಾಗ ಬಣ್ಣ ಹಚ್ಚಿದ್ದು ಅವತ್ತು ಆರ್ಟಿಸ್ಟ್ ಆಗಬೇಕು ಅಂತ ಅಂದುಕೊಂಡಿದ್ದೆ. ಈಗ ಆ ಕನಸು ನನಸಾಗಿದೆ. ಈ ಅನುಭವ ನನಗೆ ಬೇಕಿತ್ತು, ಈ ಅನುಭವ ಇಲ್ಲ ಅಂದಿದ್ರೆ ನನ್ನ ಜೀವನ ಅಪೂರ್ಣ ಆಗುತ್ತಿತ್ತು’ ಎಂದರು.

ನಾಯಕಿ ಪಾಯಲ್ ಮಾತನಾಡಿ, ‘ಭೂಮಿ ಎನ್ನುವ ಪಾತ್ರದಲ್ಲಿ ಮಾಡುತ್ತಿದ್ದೇನೆ. ಶಾರ್ಟ್ ಸಿನಿಮಾ ಮಾಡಿದ್ದೇನೆ. ತುಂಬಾ ಪ್ರೀತಿ ಕೊಟ್ಟಿದ್ದೀರಾ. ಇವಾಗ ಸಿನಿಮಾ ಮಾಡುತ್ತಿದ್ದೇನೆ. ಎಲ್ಲರ ಪ್ರೀತಿ ಇರಲಿ. ಮಿಡ್ಲ್ ಕ್ಲಾಸ್ ಹುಡುಗಿ ಬ್ಯೂಟಿಶಿಯನ್ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದರು.

ನಿರ್ದೇಶಕ ಪ್ರಜ್ವಲ್ ಮಾತನಾಡಿ, ‘ಬಾಂಡ್ ರವಿ ಅಂತ ಸಿನಿಮಾ ಮಾಡಿದ್ದೆ. ಆ ಸಿನಿಮಾಗೆ ಸಿಕ್ಕ ಪ್ರಶಂಸೆಯಿಂದ ಈಗ ಮತ್ತೊಂದು ಸಿನಿಮಾ ಮಾಡುವಂತೆ ಆಗಿದೆ. ಸಾಲ ಮಾಡಿಕೊಂಡು ಬದುಕುವ ಒಬ್ಬ ಯುವಕನ ಕಥೆ. ಹರೀಶ್ ಅವರಿಗಂತನೇ ಈ ಕಥೆ ಮಾಡಿದ್ದು’ ಎಂದರು.

ನಟ ಪ್ರಮೋದ್ ಮಾತನಾಡಿ, ‘ನಿರ್ದೇಶಕ ಪ್ರಜ್ವಲ್ ಉತ್ತಮ ಕೆಲಸಗಾರ ಹಾಗೂ ಹರೀಶ್ ನನ್ನ ಗೆಳೆಯ ಒಳ್ಳೆದಾಗಲಿ’ ಎಂದರು.

ಕ್ರೆಡಿಟ್ ಕುಮಾರ ಸಿನಿಮಾ ಮೂಲಕ ನಿರ್ಮಾಪಕರಾಗಿ ವಾಗೀಶ್ ಮುತ್ತಿಗೆ ಸ್ಯಾಂಡಲ್‍ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ನಿರ್ಮಾಪಕ ವಾಗೀಶ್, ‘2 ತಿಂಗಳ ಹಿಂದೆ ಅಷ್ಟೆ ಬ್ಯಾನರ್ ರಿಜಿಸ್ಟರ್ ಮಾಡಿಸಿದ್ದೆ. ಉತ್ತಮ ಸಿನಿಮಗಾಗಿ ಕಾಯುತ್ತಿದ್ದೆ. ಕ್ರೆಡಿಟ್ ಕುಮಾರ ಸಿನಿಮಾ ಸಿಕ್ಕಿದೆ. ಉತ್ತಮ ಕಂಟೆಂಟ್ ಇರುವ ಸಿನಿಮಾ. ಗೆದ್ದೆ ಗೆಲ್ಲುತ್ತೆ ಎನ್ನುವ ವಿಶ್ವಾಸವಿದೆ’ ಎಂದರು.

ಕ್ರೆಡಿಟ್ ಕುಮಾರ ಒನ್ ಲೈನ್ ಸ್ಟೋರಿ ಹೇಳುವುದಾದರೆ ಸಾಲ ಮಾಡಿಕೊಂಡು ಒದ್ದಾಡುವ ಒಬ್ಬ ಕ್ಯಾಬ್ ಡ್ರೈವರ್ ನ ಕಥೆಯಾಗಿದೆ. ಕ್ರೆಡಿಟ್ ಕುಮಾರನಾಗಿ ಹರೀಸ್ ಸೀನಪ್ಪ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ಪಾತ್ರದಲ್ಲಿ ಪಾಯಲ್ ಚಂಗಪ್ಪ ಮಿಂಚುತ್ತಿದ್ದಾರೆ. ಕಿರು ಚಿತ್ರಗಳ ಮೂಲಕ ಖ್ಯಾತಿ ಗಳಿಸಿರುವ ಪಾಯಲ್ ಇದೀಗ ಮೊದಲ ಬಾರಿಗೆ ನಾಯಕಿಯಾಗಿ ಮಿಂಚಲು ಸಜ್ಜಾಗಿದ್ದಾರೆ.

ಸಿನಿಮಾಗೆ ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಹಾಡುಗಳು ಇರಲಿದ್ದು ವಿ ನಾಗೇಂದ್ರ ಪ್ರಸಾದ್, ಪ್ರಮೋದ್ ಮರುವಂತೆ ಹಾಗೂ ಭರ್ಜರಿ ಚೇತನ್ ಸಾಹಿತ್ಯ ಇರಲಿದೆ ಎಂದು ಧರ್ಮ ವಿಶ್ ಹೇಳಿದರು. ಸದ್ಯ ಮುಹೂರ್ತ ಮಾಡಿಕೊಂಡಿರುವ ಸಿನಿಮಾ ಚಿತ್ರೀಕರಣಕ್ಕೆ ಹೊರಡಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin