Daaly Dhananjaya in a different look: "Jingo" poster released for birthday

ವಿಭಿನ್ನ ಲುಕ್ ನಲ್ಲಿ ಡಾಲಿ ಧನಂಜಯ : ಹುಟ್ಟುಹಬ್ಬಕ್ಕೆ “ಜಿಂಗೋ” ಪೋಸ್ಟರ್ ಬಿಡುಗಡೆ - CineNewsKannada.com

ವಿಭಿನ್ನ ಲುಕ್ ನಲ್ಲಿ ಡಾಲಿ ಧನಂಜಯ : ಹುಟ್ಟುಹಬ್ಬಕ್ಕೆ “ಜಿಂಗೋ” ಪೋಸ್ಟರ್ ಬಿಡುಗಡೆ

ಡಾಲಿ ಪಿಚ್ಚರ್ಸ್ ಮತ್ತು ತ್ರಿಶೂಲ್ ವಿಜನರಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ಅಭಿನಯದ “ಜಿಂಗೋ” ಚಿತ್ರದ ಸೆಕೆಂಡ್ ಲುಕ್ ಪೋಸ್ಟರ್ ನಟ ಧನಂಜಯ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆ ಮಾಡಲಾಗಿದ್ದು ವಿಭಿನ್ನ ಲುಕ್‍ನಲ್ಲಿ ಮೋಡಿ ಮಾಡಲು ಸಜ್ಜಾಗಿದ್ದಾರೆ.

“ಡೇರ್ ಡೆವಿಲ್ ಮುಸ್ತಫಾ” ಚಿತ್ರದ ಯಶಸ್ಸಿನ ನಂತರ ಶಶಾಂಕ್ ಸೋಗಾಲ್ ನಿರ್ದೇಶನ ಮಾಡುತ್ತಿದ್ದಾರೆ. “ಡೇರ್ ಡೆವಿಲ್ ಮುಸ್ತಫಾ” ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿದ್ದ ಡಾಲಿ ಧನಂಜಯ, ಹೊಸಬರಿಗೆ ಪ್ರೋತ್ಸಾಹ ನೀಡುವುದರಲ್ಲಿ ಸದಾ ಒಂದು ಹೆಜ್ಜೆ ಮುಂದೆ.

ಕಳೆದ ವರ್ಷ ಬಿಡುಗಡೆಯಾದ ಚಿತ್ರದ ಅನೌನ್ಸ್ಮೆಂಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಚರ್ಚೆ ಸೃಷ್ಟಿಸಿತ್ತು ಡಾಲಿ ಧನಂಜಯ “ಜಿಂಗೋ” ಮೋನೋಲಾಗ್ ಮತ್ತು ಅಜೊತೆಗಿನ ಸಂಗೀತ “ನರ ನರ ಜಿಂಗೋ” ಜನರ ಮೆಚ್ಚುಗೆ ಪಡೆಯಿತು.

ವಿಸ್ತೃತ ದೃಷ್ಟಿಕೋನ ಪ್ರೇಕ್ಷಕರ ಅಗಾಧ ಪ್ರತಿಕ್ರಿಯೆಯಿಂದ ಉತ್ಸಾಹಗೊಂಡ ಚಿತ್ರ ನಿರ್ಮಾಪಕರು ಕಥೆಯ ವ್ಯಾಪ್ತಿ ಮತ್ತು ಚಿತ್ರದ ಕ್ಯಾನ್ವಾಸ್ ಅನ್ನು ಗಣನೀಯವಾಗಿ ವಿಸ್ತರಿಸಿದ್ದಾರೆ. ಸಣ್ಣ ಪಟ್ಟಣದ ಕಥೆಯಾಗಿ ಆರಂಭವಾದದ್ದು ಇದೀಗ ಚಿತ್ರ ತನ್ನ ಕ್ಯಾನ್ವಾಸ್ ವಿಸ್ತರಿಸಿಕೊಂಡಿದ್ದು ಒಂದು ಅಪ್ಪಟ ದೊಡ್ಡ ಪರದೆ ವೀಕ್ಷಣೆಗೆ ಸರಿಹೊಂದುವಂತೆ ದೃಶ್ಯಾವಳಿ ಹೆಣೆಯಲಾಗಿದೆ.

“ನಮಗೆ ಸಿಕ್ಕ ಪ್ರತಿಕ್ರಿಯೆ ನಮ್ಮನ್ನು ದೊಡ್ಡದಾಗಿ ಯೋಚಿಸಲು ಪ್ರೇರೇಪಿಸಿದೆ. 2026ರಲ್ಲಿ ವೀಕ್ಷಕರಿಗೆ ವಿಶಿಷ್ಟ ಚಿತ್ರರಂಗದ ಅನುಭವವನ್ನು ನೀಡುತ್ತದೆ. ಪೆÇಲಿಟಿಕಲ್ ಸಟೈರ್, ಕಾಮಿಡಿ, ಆಕ್ಷನ್, ಥ್ರಿಲ್ಲರ್ ಎಲ್ಲ ಅಂಶಗಳನ್ನು ಹದವಾಗಿ ಬೆರೆಸಿ ಪ್ರೇಕ್ಷಕರಿಗೆ ಅತ್ಯುತ್ತಮ ಮನರಂಜನೆ ಕೊಡಬೇಕು ಎಂಬುದೇ ನಮ್ಮ ಗುರಿ. ಸದ್ಯ ಕನ್ನಡ, ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಅತ್ಯುತ್ತಮ ನಟರ ತಾರಾ ಬಳಗವಿರುತ್ತದೆ” ಎಂದು ನಿರ್ಮಾಣ ತಂಡ ತಿಳಿಸಿದೆ.

ನಿರ್ದೇಶಕ ಶಶಾಂಕ್ ಸೋಗಾಲ್ ಪ್ರತಿಕ್ರಿಯಿಸಿ ಮೇಲ್ನೋಟಕ್ಕೆ ಫನ್ ಪೋಸ್ಟರ್ ಥರ ಕಾಣುತ್ತೆ, ಸೂಕ್ಷ್ಮವಾಗಿ ನೋಡುತ್ತಾ ಹೋದಂತೆ ತೆರೆದುಕೊಳ್ಳುತ್ತೆ. ಸಿನಿಮಾ ಕೂಡ ಇದೇ ಇರುತ್ತದೆ. ಎಲ್ಲ ವರ್ಗಗಳ ಪ್ರೇಕ್ಷಕರಿಗೂ ಇದರಲ್ಲಿ ಖಿಚಿಞeಚಿತಿಚಿಥಿ ಗಳಿರುತ್ತದೆ, ಒಟ್ಟಿನಲ್ಲಿ 2026 ಕ್ಕೆ ಒಂದು ಮಜಾ ಚಿತ್ರಕ್ಕೆ ಪ್ರೇಕ್ಷಕರು ಸಜ್ಜಾಗಲಿ” ಎನ್ನುತ್ತಾರೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin