Dally Dhananjaya-Dhanyatha wedding: The future couple invited the Chief Minister with a special invitation card

ಡಾಲಿ ಧನಂಜಯ-ಧನ್ಯತಾ ಮದುವೆ: ವಿಶೇಷ ಆಹ್ವಾನ ಪತ್ರಿಕೆಯೊಂದಿಗೆ ಮುಖ್ಯಮಂತ್ರಿಗೆ ಆಹ್ವಾನ ನೀಡಿದ ಭಾವಿ ದಂಪತಿ - CineNewsKannada.com

ಡಾಲಿ ಧನಂಜಯ-ಧನ್ಯತಾ ಮದುವೆ: ವಿಶೇಷ ಆಹ್ವಾನ ಪತ್ರಿಕೆಯೊಂದಿಗೆ ಮುಖ್ಯಮಂತ್ರಿಗೆ ಆಹ್ವಾನ ನೀಡಿದ ಭಾವಿ ದಂಪತಿ

ನಟ ರಾಕ್ಷಸ ಡಾಲಿ ಧನಂಜಯ ಅವರು ಬ್ಯಾಚುಲರ್ ಜೀವನಕ್ಕೆ ಬಾಯ್ ಬಾಯ್ ಮಾಡಿ ವೈದ್ಯೆ ಧನ್ಯತಾ ಜೊತೆ ವೈವಾಹಿಕ ಜೀವನಕ್ಕೆ ಅಡಿ ಇಡಲು ಸಜ್ಜಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೊಸ ವಿಷಯ ಏನು ಗೊತ್ತಾ.. ಅಂಚೆ ಪತ್ರದಲ್ಲಿ ಮಾಡಿರುವ ವಿವಾಹ ಆಹ್ವಾನ ಪತ್ರಿಕೆಯನ್ನು ನಾಡಿನ ದೊರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಮದುವೆಗೆ ಆಹ್ವಾನ ನೀಡಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾವಿ ಪತ್ನಿ ಜೊತೆ ಭೇಟಿ ಮದುವೆಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಹೊಸತನದ ಆಹ್ವಾನ ಪತ್ರಿಕೆ ಓದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನದುಂಬಿ ಹೊಸ ಜೋಡಿಗಳಿಗೆ ಶೂಭಹಾರೈಸಿದ್ದಾರೆ

ನಟ ಡಾಲಿ ಧನಂಜಯ ಹಾಗೂ ಧನ್ಯತಾ ನಿಶ್ಚಿತಾರ್ಥ ಇತ್ತೀಚಿಗಷ್ಟೇ ಸಿಂಪಲ್‍ಆಗಿ ನೆರವೇರಿತ್ತು. ನಿಶ್ಚಿತಾರ್ಥದ ನಂತರ ಮದುವೆ ಸಿದ್ದತೆ ಮಾಡಿಕೊಳ್ಳುತ್ತಿರುವ ಡಾಲಿ ಧನಂಜತ ಮತ್ತು ಧನ್ಯತಾ ಮದುವೆಯ ಆಮಂತ್ರಣ ಪತ್ರಿಕೆಯ ಪೂಜೆ ಮಾಡಿಸುವ ಮೂಲಕ ಇಂದಿನಿಂದ ಮದುವೆ ಎಲ್ಲಾ ಕೆಲಸ ಕಾರ್ಯಗಳನ್ನ ಶುರು ಮಾಡಿದ್ದಾರೆ.

ಡಾಲಿ ಧನಂಜಯ ಅವರು ಯಾವುದೇ ಸಿನಿಮಾ ಕೆಲಸಗಳನ್ನ ಶುರು ಮಾಡುವ ಮೊದಲು ಬಂಡೆ ಮಹಾಕಾಳಿ ದೇವಿಯ ಆಶೀರ್ವಾದ ಪಡೆದು ಶುರು ಮಾಡುತ್ತಾರೆ, ಅದರಂತೆಯೇ ತಮ್ಮ ಮದುವೆ ಕಾರ್ಯ ಶುರು ಮಾಡುವ ಮೊದಲು ತಮ್ಮ ಭಾವಿ ಪತ್ನಿ ಧನ್ಯತಾ ಅವರ ಜೊತೆ ದೇವಸ್ಥಾನಕ್ಕೆ ಬೇಟಿಕೊಟ್ಟು ಮದುವೆ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿಕೊಂಡು ದೇವಿಯ ಆಶೀರ್ವಾದ ಪಡೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆ ವಿಭಿನ್ನವಾಗಿ ಡಿಸೈನ್ ಮಾಡಿಸಬೇಕು ಅನ್ನೋ ಆಲೋಚನೆಯಲ್ಲಿ ಇರುತ್ತಾರೆ, ಇನ್ನು ಸಿನಿಮಾ ಸ್ಟಾರ್‍ಗಳು ಸದಾ ಕ್ರಿಯೆಟಿವ್ ಆಗಿಯೇ ಯೋಚನೆ ಮಾಡುತ್ತಾರೆ, ಅದರಂತೆಯೇ ಡಾಲಿ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸಖತ್ತಾಗಿ ಪ್ಲಾನ್ ಮಾಡಿದ್ದಾರೆ.

ಓಲ್ಡ್ ಇಸ್ ಗೋಲ್ಡ್ ಅನ್ನೋ ರೀತಿಯಲ್ಲಿ ಅಂದರೆ ಅಂಚೆ ಪತ್ರದಲ್ಲಿ ತಮ್ಮ ಮದುವೆ ಆಮಂತ್ರಣವನ್ನು ತಾವೇ ಖುದ್ದಾಗಿ ಬರೆದು ಪ್ರಿಂಟ್ ಮಾಡಿಸಿದ್ದಾರೆ. ಡಾಲಿ ಧನಂಜಯ್ ಅವರು ಕವಿತೆ ಕಾವ್ಯ ಹಾಡುಗಳನ್ನು ಅದ್ಭುತವಾಗಿ ಬರೆಯುತ್ತಾರೆ. ಅದೇ ರೀತಿ ತಮ್ಮ ಮದುವೆ ಆಮಂತ್ರಣ ಪತ್ರವನ್ನ ಸಖತ್ ಸ್ಪೆಷಲ್ ಆಗಿ ಬರೆದಿದ್ದಾರೆ.

ಡಾಲಿ ಧನಂಜಯ ಅವರು ಸಿನಿಮಾ ಕ್ಷೇತ್ರದಲ್ಲಿದ್ದರೂ ರಾಜಕೀಯ ಗಣ್ಯರ ಜೊತೆಯೂ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಕೂಡ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನ ನೀಡಿ ಆಶೀರ್ವಾದ ಪಡೆದಿದ್ದಾರೆ.

ಫೆಬ್ರವರಿ 16 ರಂದು ಡಾಲಿ ಧನಂಜಯ ಅವರ ಮದುವೆ ಮೈಸೂರಿನ ಅಂಬಾವಿಲಾಸ ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಗ್ರೌಂಡ್ ನಲ್ಲಿ ನಡೆಯಲಿದೆ. ಶನಿವಾರ ಆರತಕ್ಷತೆ ಭಾನುವಾರ ವಿವಾಹ ನೆರವೇರಲಿದೆ.

ಡಾಲಿ ಧನಂಜಯ ಮದುವೆಗೆ ಕೇಲವ ಸಿನಿಮಾ ಗಣ್ಯರು ಮಾತ್ರವಲ್ಲದೇ ರಾಜಕೀಯ ಗಣ್ಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin