Darling Prabhas- Hanu Raghavapudi's new movie muhurta

ಡಾರ್ಲಿಂಗ್ ಪ್ರಭಾಸ್- ಹನು ರಾಘವಪುಡಿ ನಿರ್ದೇಶನದ ಹೊಸ ಚಿತ್ರ ಕ್ಕೆ ಮುಹೂರ್ತ - CineNewsKannada.com

ಡಾರ್ಲಿಂಗ್ ಪ್ರಭಾಸ್- ಹನು ರಾಘವಪುಡಿ ನಿರ್ದೇಶನದ ಹೊಸ ಚಿತ್ರ ಕ್ಕೆ ಮುಹೂರ್ತ

ಸಲಾರ್ ಹಾಗೂ ಕಲ್ಕಿ 2898 ಎಡಿ ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ.ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡು ಶುಭ ಹಾರೈಸಿದ್ದಾರೆ

ಸೀತಾರಾಮಂ’ ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಭಾಸ್ ಗೆ ಜೋಡಿಯಾಗಿ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಂ ಡ್ಯಾನ್ಸರ್ ಇಮಾನ್ವಿ ಈ ಚಿತ್ರದಲ್ಲಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. 1940ರ ದಶಕದ ಕಥೆಯನ್ನು ಹನು ರಾಘವಪುಡಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದ್ದಾರೆ. ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin