Demand for “For Registration” from Telugu too: Good response in Kannada too

ತೆಲುಗಿನಿಂದಲೂ “ ಫಾರ್ ರಿಜಿಸ್ಟ್ರೇಷನ್” ಗೆ ಬೇಡಿಕೆ: ಕನ್ನಡದಲ್ಲಿಯೂ ಉತ್ತಮ ಪ್ರತಿಕ್ರಿಯೆ - CineNewsKannada.com

ತೆಲುಗಿನಿಂದಲೂ “ ಫಾರ್ ರಿಜಿಸ್ಟ್ರೇಷನ್” ಗೆ ಬೇಡಿಕೆ: ಕನ್ನಡದಲ್ಲಿಯೂ ಉತ್ತಮ ಪ್ರತಿಕ್ರಿಯೆ

ಪ್ರತಿಭಾನ್ವಿತ ನಟ ಪೃ ಥ್ವಿ ಅಂಬರ್ ಮತ್ತು ನಟಿ ಮಿಲನಾ ನಾಗರಾಜ್ ನಟನೆಚಿiÀು ಬಹು ನಿರೀಕ್ಷಿತ ಚಿತ್ರ “ ಫಾರ್ ರಿಜಿಸ್ಟ್ರೇಷನ್ ಫೆಬ್ರವರಿ 23ಕ್ಕೆ ಇಂದಿನಿಂದ ರಾಜ್ಯಾದ್ಯಂತ ತೆರೆಗೆ ಬಂದಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ ನಡುವೆ ಚಿತ್ರ ತೆಲುಗು ಭಾಷೆಯಿಂದ ಬಾರಿ ಬೇಡಿಕೆ ಬಂದಿದೆ.

ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎದ್ದಿದೆ. ಪ್ರತಿಭಾವಂತ ಹೊಸಬರು ಮಾಡುತ್ತಿರುವ ಹೊಸ ಹೊಸ ಪ್ರಯೋಗಗಳಿಗೆ ಕನ್ನಡ ಪ್ರೇಕ್ಷಕರು ಮಾತ್ರ ಅಲ್ಲ, ಪಕ್ಕದ ರಾಜ್ಯದವರೂ ಫಿದಾ ಆಗುತ್ತಿದ್ದಾರೆ. ಬಾಲಿವುಡ್ ಮಂದಿ ಕೂಡ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಇಷ್ಟೆಲ್ಲಾ ಪೀಠಿಕೆ ಹಾಕುತ್ತಿರುವುದಕ್ಕೆ ಕಾರಣ ಫಾರ್ ರಿಜಿಸ್ಟ್ರೇಷನ್ ಸಿನಿಮಾ.

ಯುವ ಪ್ರತಿಭೆ ನವೀನ್ ದ್ವಾರಕಾನಾಥ್ ನಿರ್ದೇಶನದ, ನವೀನ್ ರಾವ್ ನಿರ್ಮಾಣದ, ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಅಭಿನಯದ, ಫಾರ್ ರಿಜಿಸ್ಟ್ರೇಷನ್ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರೊಬ್ಬರು ಭಾರೀ ಮೊತ್ತಕ್ಕೆ ಡಬ್ಬಿಂಗ್ ರೈಟ್ಸ್ ಪಡೆದುಕೊಂಡಿದ್ದಾರೆ.

ಶಿವಣ್ಣ ನಟನೆಯ 125ನೇ ಸಿನಿಮಾದ ವೇದವನ್ನು ಅಖಂಡ ತೆಲುಗು ಪ್ರೇಕ್ಷಕರ ಎದುರು ಪ್ರಸ್ತುತಪಡಿಸಿದ್ದ ಎಂವಿಆರ್ ಕೃಷ್ಣ ಫಾರ್ ರಿಜಿಸ್ಟ್ರೇಷನ್ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನವೇ ಡಬ್ಬಿಂಗ್ ರೈಟ್ಸ್ ಸೇಲ್ ಆಗಿರುವುದು ಚಿತ್ರತಂಡ ಖುಷಿಯನ್ನು ದುಪ್ಪಟ್ಟು ಮಾಡಿದೆ.

ಟ್ರೇಲರ್ ಹಾಗೂ ಹಾಡಿನ ಮೂಲಕ ಆಮಂತ್ರಣ ಕೊಟ್ಟಿರುವ ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇಂದು ತೆರೆಗೆ ಬಂದಿದೆ. ಸಂಬಂಧ ಮಹತ್ವ ಸಾರುವ ಈ ಚಿತ್ರದಲ್ಲಿ ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ.

ಚಿತ್ರಕಥೆ, ನಿರ್ದೇಶನ ನವೀನ್ ದ್ವಾರಕನಾಥ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ. ನಿಶ್ಚಲ್ ಫಿಲಂಸ್ ಬ್ಯಾನರ್ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ. ಬಹಳ ದಿನಗಳ ನಂತರ ಮತ್ತೆ ವಿತರಣೆ ಅಖಾಡಕ್ಕೆ ಇಳಿದಿರುವ ದೀಪಕ್ ಗಂಗಾಧರ್ ಫಿಲಂಸ್ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಕೇಳಿ ಬಂದಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin