ವಿಭಿನ್ನ ಕಥಾಹಂದರದ ಚಿತ್ರ “ಹಗ್ಗ” ಮೋಷನ್ ಪೋಸ್ಟರ್ ಬಿಡುಗಡೆ: ಆಗಸ್ಟ್ ನಲ್ಲಿ ತೆರೆಗೆ
ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ “ಹಗ್ಗ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಮೇಕಿಂಗ್ ನಲ್ಲೇ ಸದ್ದು ಮಾಡಿರುವ ಈ ಚಿತ್ರದ ಮೋಷನ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.
ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ “ಹಗ್ಗ” ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ.
ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.